ಬೆಂಗಳೂರು: ಕಾಂಗ್ರೆಸ್ ಪಕ್ಷವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆದ ತಪ್ಪಿನಿಂದ ರಕ್ಷಣೆ ಪಡೆಯಲು ಇ.ಡಿ. ವಿರುದ್ಧ ಆಂದೋಲನ, ಹೋರಾಟ ಮಾಡುತ್ತಿದೆ. ಈ ಬ್ಲ್ಯಾಕ್ಮೇಲ್ ತಂತ್ರವನ್ನು ಖಂಡಿಸುವುದಾಗಿ ರಾಜ್ಯದ ಉನ್ನತ ಶಿಕ್ಷಣ, ಐಟಿ ಹಾಗೂ ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ತಿಳಿಸಿದರು
.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ಸಿಎನ್. ಅಶ್ವತ್ಥನಾರಾಯಣ, ಕೆಪಿಸಿಸಿ ಅಧ್ಯಕ್ಷರು ಈ ವಿಚಾರದಲ್ಲಿ ಅನುಭವ ಉಳ್ಳವರು. ಇ.ಡಿ. ಯಿಂದ ತನಿಖೆಗೆ ಒಳಗಾದವರು ಎಂದ ಅವರು, ಇ.ಡಿ. ತನಿಖೆಗೆ ಕಾಂಗ್ರೆಸ್ ಪಕ್ಷ ಸಹಕರಿಸಬೇಕು ಎಂದು ಮನವಿ ಮಾಡಿದರು. ಕಾಂಗ್ರೆಸ್ ಆರೋಪಗಳು ರಾಜಕೀಯ ಪ್ರೇರಿತವಾಗಿವೆ. ನಮ್ಮನ್ನು ಪ್ರಶ್ನಿಸಬೇಡಿ, ವಿಚಾರಣೆಗೆ ಕರೆಯಬೇಡಿ ಎಂದರೆ ಹೇಗೆ ಎಂದು ಕೇಳಿದರಲ್ಲದೆ, ಇದರ ವಿರುದ್ಧ ಜನಜಾಗೃತಿ ಮೂಡಿಸಲು ಈ ಪತ್ರಿಕಾಗೋಷ್ಠಿ ನಡೆಸಲಾಗುತ್ತಿದೆ ಎಂದರು.
ನಾವು ಭ್ರಷ್ಟಾಚಾರದ ವಿರುದ್ಧ ಇದ್ದೇವೆ. ಯಾವುದೇ ಪಕ್ಷದ ಭ್ರಷ್ಟಾಚಾರಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ ಹಾಗೂ ಅದರಂತೆ ನಡೆದುಕೊಳ್ಳುತ್ತಿದ್ದಾರೆ. 60 ವರ್ಷ ಆಡಳಿತ ನಡೆಸಿದವರೇ ಕಾನೂನಿನ ಅರಿವಿಲ್ಲದವರಂತೆ ವರ್ತಿಸುತ್ತಿರುವುದು ಹಾಸ್ಯಾಸ್ಪದ ಎಂದು ಅಶ್ವತ್ಥನಾರಾಯಣ ವ್ಯಂಗ್ಯವಾಡಿದರು. ಪ್ರತಿಭಟನೆ ನಡೆಸುವವರು ಮುಂದೆ ತಿಹಾರ್ ಜೈಲು ಸೇರಬೇಕಾಗುತ್ತದೆ ಎಂದು ಎಚ್ಚರಿಸಿದ ಸಚಿವರು, .ಡಿ. ಸ್ವಾಯತ್ತತೆ ಹೊಂದಿದ ಸಂಸ್ಥೆ. ಅದಕ್ಕೆ ಬೆದರಿಕೆ ಹಾಕುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist