ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

12 ವರ್ಷದ ಮಗಳಿಗೆ ಎರಡೆರಡು ಬಾರಿ ಮದ್ವೆ: ತಾಯಿಯ ಬಂಧನ

Twitter
Facebook
LinkedIn
WhatsApp
12 ವರ್ಷದ ಮಗಳಿಗೆ ಎರಡೆರಡು ಬಾರಿ ಮದ್ವೆ: ತಾಯಿಯ ಬಂಧನ

ಪಿತೋರ್‌ಘಡ್‌: 12 ವರ್ಷದ ಅಪ್ರಾಪ್ತ ಮಗಳಿಗೆ ಎರಡೆರಡು ಬಾರಿ ಮದುವೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಾಖಂಡ್‌ನ (Uttarakhand) ಪಿತೋರ್‌ಘಡ್‌ದ (Pithoragarh) ಧಾರುಚುಲದಲ್ಲಿ (Dharchula) ಈ ಘಟನೆ ನಡೆದಿದೆ. ಬಾಲಕಿಯ ತಾಯಿ 36 ವರ್ಷದ ಯುವಕನೊಂದಿಗೆ ಬಾಲಕಿಯ ವಿವಾಹ ಮಾಡಿದ್ದಳು.

ಪ್ರಸ್ತುತ ಈ 12 ವರ್ಷದ ಅಪ್ರಾಪ್ತ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದು (pregnant), ಆಕೆಯನ್ನು ಪುನರ್ವಸತಿ ಕೇಂದ್ರದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಅಲ್ಲದೇ ಇದು ಈಕೆಗೆ ಎರಡನೇ ವಿವಾಹವಾಗಿತ್ತು. ಮೊದಲ ವಿವಾಹ ಕೌಟುಂಬಿಕ ಕಲಹದಿಂದಾಗಿ ಮುರಿದು ಬಿದ್ದಿತ್ತು. ಇದಾದ ಬಳಿಕ ಆಕೆಗೆ ತಾಯಿ 36 ವರ್ಷದ ಯುವಕನೊಂದಿಗೆ ಮತ್ತೊಂದು ವಿವಾಹ ಮಾಡಿದ್ದಾಳೆ ಎಂದು ಪಿತೋರ್‌ಘಡ್‌ದ ಸೂಪರಿಂಟೆಂಡ್‌ ಆಫ್ ಪೊಲೀಸ್‌ ಲೋಕೇಶ್ವರ್ ಸಿಂಗ್ (Lokeshwar Singh) ಹೇಳಿದ್ದಾರೆ.ಬಾಲಕಿಯ ತಾಯಿಯನ್ನು ಬುಧವಾರ ಬಂಧಿಸಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 370 (ಮಾನವ ಕಳ್ಳಸಾಗಣೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ 5/6 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಅಪ್ರಾಪ್ತ ಬಾಲಕಿಯ ಪತಿಯನ್ನು ಒಂದೆರಡು ದಿನಗಳ ಹಿಂದೆ ಬಂಧಿಸಲಾಯಿತು ಮತ್ತು ಐಪಿಸಿಯ ಸೆಕ್ಷನ್ 376 (ಅತ್ಯಾಚಾರಕ್ಕೆ ಶಿಕ್ಷೆ), ಪೋಕ್ಸೊ ಕಾಯ್ದೆಯ 5 (1) 6 ಮತ್ತು ಬಾಲ್ಯ ವಿವಾಹ ತಡೆ ಕಲಂ 9 (ಮಗುವಿಗೆ ಮದುವೆಯಾದ ಪುರುಷನಿಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಂದು ಸಿಂಗ್ ಹೇಳಿದರು ಈ ಬಗ್ಗೆ ಮಕ್ಕಳ ಕಲ್ಯಾಣ ಇಲಾಖೆ ಪೊಲೀಸರಿಗೆ ದೂರು ನೀಡಿತ್ತು ಎಂದು ಪೊಲೀಸ್ ಅಧಿಕಾರಿ ಹೇಳಿದರು. ಪಿತೋರ್‌ಘರ್‌ ಜಿಲ್ಲೆಯ ಬೇರಿನಾಗ್ ಉಪ ವಿಭಾಗದ ಡಿಗ್ಟೋಲಿ ಗ್ರಾಮದಲ್ಲಿಯೂ (Digtoli village) ವರನ ಪೋಷಕರಿಗೆ ಮನವರಿಕೆ ಮಾಡಿಕೊಟ್ಟ ನಂತರ ಮತ್ತೊಂದು ಬಾಲ್ಯ ವಿವಾಹವನ್ನು ತಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಾಲ್ಯ ವಿವಾಹದ ಅನಾಹುತಗಳ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಕಠಿಣ ಕಾನೂನು ಜಾರಿಯಲ್ಲಿದ್ದರೂ ಅಲ್ಲಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಲೇ ಇದೆ.

ಶಾಲೆಗೆ ಹೋಗುವ ವಯಸ್ಸಿನಲ್ಲಿ ವಿವಾಹ, ಮಕ್ಕಳು, ಸಂಸಾರ, ವರದಕ್ಷಿಣೆ ಕಿರುಕುಳ, ಮಾನಸಿಕ ಹಿಂಸೆ ಸೇರಿದಂತೆ ಸಮಸ್ಯೆಗಳ ಕೂಪದಲ್ಲೇ ಇದ್ದ ಮೂವರು ಸಹೋದರಿಯರು ಶವವಾಗಿ ಪತ್ತೆಯಾದ ಘಟನೆ ರಾಜಸ್ಥಾನ ಜೈಪುರ ಜಿಲ್ಲೆಯ ದುಡು ಪಟ್ಟಣದಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದಿತ್ತು. ಕಳೆದ 15 ದಿನಗಳಿಂದ ಮೂವರು ಸಹೋದರಿಯರು ತಮ್ಮ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದರು. ಪೋಷಕರು ತಮ್ಮ ಮೂವರು ಮಕ್ಕಳು ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದರು. ಈ ವೇಳೆ ಪೊಲೀಸರ ಮುಂದೆ ಪತಿ ಹಾಗೂ ಆತನ ಮನೆಯವರು ನಾಟಕವಾಡಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ನಂತರ ಬಾವಿಯಲ್ಲಿ ಒಟ್ಟು 5 ಶವಗಳನ್ನು ಪತ್ತೆ ಮಾಡಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist