ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಸ್ತೆ ಸರಿಯಾಗಲು ಪ್ರಧಾನಿ – ರಾಷ್ಟ್ರಪತಿ ಆಗಾಗ್ಗೆ ಬೆಂಗಳೂರಿಗೆ ಭೇಟಿ ನೀಡಬೇಕೇ? ಬಿಡಿಎ, ಬಿಡಬ್ಲ್ಯೂಎಸ್ ಎಸ್ ಬಿ, ಬಿಬಿಎಂಪಿಗೆ ಹೈಕೋರ್ಟ್ ತಪರಾಕಿ

Twitter
Facebook
LinkedIn
WhatsApp
ರಸ್ತೆ ಸರಿಯಾಗಲು ಪ್ರಧಾನಿ – ರಾಷ್ಟ್ರಪತಿ ಆಗಾಗ್ಗೆ ಬೆಂಗಳೂರಿಗೆ ಭೇಟಿ ನೀಡಬೇಕೇ? ಬಿಡಿಎ, ಬಿಡಬ್ಲ್ಯೂಎಸ್ ಎಸ್ ಬಿ, ಬಿಬಿಎಂಪಿಗೆ ಹೈಕೋರ್ಟ್ ತಪರಾಕಿ

ಬೆಂಗಳೂರು: ‘ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ಪ್ರಧಾನಿ ಮತ್ತು ರಾಷ್ಟ್ರಪತಿ ಆಗಾಗ್ಗೆ ಇಲ್ಲಿಗೆ ಭೇಟಿ ನೀಡುತ್ತಿರಬೇಕು’ ಎಂದು ಹೈಕೋರ್ಟ್‌ ತಪರಾಕಿ ಹಾಕಿದೆ.

 

ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿನ ಕೆಲ ನಿವೇಶನಗಳಿಗೆ ಒಳಚರಂಡಿ, ಕುಡಿಯುವ ನೀರಿನ ಸಂಪರ್ಕ ಮತ್ತು ರಸ್ತೆ ಸೌಲಭ್ಯ ಕಲ್ಪಿಸಿಲ್ಲ’ ಎಂದು ಆಕ್ಷೇಪಿಸಿ ಪಿ.ಮಂಜುಳಾ ಮತ್ತು ಶಾರದಮ್ಮ ಎಂಬುವರು ಬಿಡಿಎ ಅಧಿಕಾರಿಗಳ ವಿರುದ್ಧ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಮೊನ್ನೆಯಷ್ಟೇ ಪ್ರನಿ ಬಂದು ಹೋಗಿದ್ದಾರೆ. ಅದಕ್ಕಾಗಿ  23 ರು. ಕೋಟಿ ಖರ್ಚು ಮಾಡಿ ನಗರದ ಗುಂಡಿಗಳನ್ನು ಮುಚ್ಚಲಾಗಿದೆ. ಇದನ್ನು ಗಮನಿಸಿದರೆ ಪ್ರಧಾನಿ ನಗರದ ಬೇರೆ ಬೇರೆ ಮಾರ್ಗಗಳಲ್ಲಿ ಆಗಾಗ್ಗೆ ಸಂಚರಿಸಬೇಕು. ಆಗ ಅವರನ್ನು ಮೆಚ್ಚಿಸುವ ಸಲುವಾಗಿಯಾದರೂ ಅಧಿಕಾರಿಗಳು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಬಹುದು‘ ಎಂದು ನ್ಯಾಯಪೀಠ ಬಿಡಿಎ ಕಾರ್ಯವೈಖರಿಯನ್ನು ಕುಟುಕಿತು.

ಅಕ್ಟೋಬರ್ 21, 2020 ರಂದು, ಕರ್ನಾಟಕ ಹೈಕೋರ್ಟ್ ನ ಏಕಸದಸ್ಯ ಪೀಠವು ಎರಡು ತಿಂಗಳೊಳಗೆ ವಿಶ್ವೇಶ್ವರಯ್ಯ ಬಡಾವಣೆಯಲ್ಲಿನ  ಎರಡು ಸೈಟ್‌ಗಳಿಗೆ ಕುಡಿಯುವ ನೀರು ಮತ್ತು ರಸ್ತೆ ಸಂಪರ್ಕವನ್ನು ಕಲ್ಪಿಸುವಂತೆ ನಾಗರಿಕ ಸಂಸ್ಥೆಗಳಿಗೆ ಆದೇಶಿಸಿ ಪ್ರಕರಣವನ್ನು ವಿಲೇವಾರಿ ಮಾಡಿತ್ತು.

ಹಿಂದಿನ ಹೈಕೋರ್ಟ್ ಆದೇಶವನ್ನು ಪಾಲಿಸದ ಕಾರಣ ಇಬ್ಬರು ಮಹಿಳೆಯರು ಒಂದು ವರ್ಷದ ನಂತರ ಬಿಡಿಎ ಆಯುಕ್ತರು ಮತ್ತು ಬಿಡಬ್ಲ್ಯೂಎಸ್ ಎಸ್ ಬಿ ಸಂಬಂಧಪಟ್ಟ ಇಂಜಿನಿಯರ್‌ಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯೊಂದಿಗೆ ಹೈಕೋರ್ಟ್ ಸಂಪರ್ಕಿಸಿದ್ದರು.

ನಾಗರಿಕ ಸಂಸ್ಥೆಗಳು ತಮ್ಮ ಕಾರ್ಯವನ್ನು ಸರಿಯಾಗಿ ನಿಭಾಯಿಸಲು ಪ್ರಧಾನಿ ಮತ್ತು ರಾಷ್ಟ್ರಪತಿಗಳು ಆಗಾಗ್ಗೆ ಬೆಂಗಳೂರಿಗೆ ಭೇಟಿ ನೀಡಿದರೆ ಬಹುಶಃ ರಸ್ತೆಗಳ ಸ್ಥಿತಿ ಸುಧಾರಿಸುತ್ತದೆ. ಕಳೆದ ವಾರ ನೀವು ಗುಂಡಿಗಳನ್ನು ತುಂಬಲು 23 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದೀರಿ. ನಿಮ್ಮ ಕೆಲಸವನ್ನು ಮಾಡಲು ಪ್ರಧಾನಿ ಪ್ರತಿ ಬಾರಿ ಬೇರೆ ಬೇರೆ ರಸ್ತೆಗಳಲ್ಲಿ ಪ್ರಯಾಣಿಸಬೇಕು ಎಂದು ಹೈಕೋರ್ಟ್ ಕಿಡಿಕಾರಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ