ಭಾನುವಾರ, ಮಾರ್ಚ್ 16, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬರ್ಮಿಂಗ್‌ಹ್ಯಾಮ್ ಟೆಸ್ಟ್‌:ಭಾರತ ಎದುರು ಇಂಗ್ಲೆಂಡ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, ಸರಣಿ ಸಮಬಲ.

Twitter
Facebook
LinkedIn
WhatsApp
ಬರ್ಮಿಂಗ್‌ಹ್ಯಾಮ್ ಟೆಸ್ಟ್‌:ಭಾರತ ಎದುರು  ಇಂಗ್ಲೆಂಡ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, ಸರಣಿ ಸಮಬಲ.

ಬರ್ಮಿಂಗ್‌ಹ್ಯಾಮ್(ಜು.05): ಇಂಗ್ಲೆಂಡ್ ಮಾಜಿ ನಾಯಕ ಜೋ ರೂಟ್ ಹಾಗೂ ಜಾನಿ ಬೇರ್‌ಸ್ಟೋವ್ ಆಕರ್ಷಕ ದ್ವಿಶತಕದ ಜತೆಯಾಟಕ್ಕೆ ತತ್ತರಿಸಿದ ಟೀಂ ಇಂಡಿಯಾ ಬರ್ಮಿಂಗ್‌ಹ್ಯಾಮ್ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್‌ಗಳ ಆಘಾತಕಾರಿ ಸೋಲು ಕಂಡಿದೆ. ಕೋವಿಡ್‌ನಿಂದಾಗಿ ಮರುನಿಗದಿಯಾಗಿದ್ದ ಟೆಸ್ಟ್‌ ಪಂದ್ಯದ ಮೊದಲ ಮೂರು ದಿನವೂ ಟೀಂ ಇಂಡಿಯಾ ಪ್ರಾಬಲ್ಯ ಮೆರೆದಿತ್ತು. ಆದರೆ ಕೊನೆಯ ಎರಡು ದಿನದಲ್ಲಿ ಆಕರ್ಷಕ ಪ್ರದರ್ಶನ ತೋರುವ ಮೂಲಕ ಟೆಸ್ಟ್ ಪಂದ್ಯ ಗೆಲ್ಲುವಲ್ಲಿ ಇಂಗ್ಲೆಂಡ್ ಯಶಸ್ವಿಯಾಗಿದೆ. ಇದರೊಂದಿಗೆ ಬೆನ್ ಸ್ಟೋಕ್ಸ್ ನೇತೃತ್ವದಲ್ಲಿ ಇಂಗ್ಲೆಂಡ್‌ ತಂಡವು ಸತತ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇದಷ್ಟೇ ಅಲ್ಲದೇ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ 5 ಪಂದ್ಯ ಟೆಸ್ಟ್ ಸರಣಿಯಲ್ಲಿ 2-2ರ ಸಮಬಲ ಸಾಧಿಸುವ ಮೂಲಕ ಸರಣಿ ಡ್ರಾ ಮಾಡಿಕೊಂಡಿದೆ.

ಭಾರತ ನೀಡಿದ್ದ 378 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ್ದ ಆತಿಥೇಯ ಇಂಗ್ಲೆಂಡ್ ತಂಡವು ನಾಲ್ಕನೇ ದಿನದಾಟದಂತ್ಯದ ವೇಳೆಗೆ ಕೇವಲ 3 ವಿಕೆಟ್ ಕಳೆದುಕೊಂಡು 259 ರನ್ ಬಾರಿಸಿತ್ತು. ಇನ್ನು ಕೊನೆಯ ದಿನ ಗೆಲ್ಲಲು ಇಂಗ್ಲೆಂಡ್ ತಂಡಕ್ಕೆ ಕೇವಲ 119 ರನ್‌ಗಳ ಅಗತ್ಯವಿತ್ತು. ಇನ್ನು 5ನೇ ದಿನವೂ ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್ (Joe Root) ಹಾಗೂ ಜಾನಿ ಬೇರ್‌ಸ್ಟೋವ್ (Jonny Bairstow), ಭಾರತೀಯ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಜೋ ರೂಟ್ 136 ಎಸೆತಗಳನ್ನು ಎದುರಿಸಿ ಟೆಸ್ಟ್ ವೃತ್ತಿಜೀವನದ 28ನೇ ಶತಕ ಸಿಡಿಸಿ ಸಂಭ್ರಮಿಸಿದರು. ಇನ್ನು ಟೆಸ್ಟ್ ವೃತ್ತಿಜೀವನದಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ಬೇರ್‌ಸ್ಟೋವ್‌, ಮತ್ತೊಂದು ಶತಕವನ್ನು ತಮ್ಮ ಹೆಸರಿಗೆ ಸೇರಿಸಿಕೊಂಡರು. ಮೊದಲ ಇನಿಂಗ್ಸ್‌ನಲ್ಲಿ ಸಮಯೋಚಿತ ಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದ ಬೇರ್‌ಸ್ಟೋವ್, ಇದೀಗ ಎರಡನೇ ಇನಿಂಗ್ಸ್‌ನಲ್ಲಿ 138 ಎಸೆತಗಳನ್ನು ಎದುರಿಸಿ ಮೂರಂಕಿ ಮೊತ್ತ ದಾಖಲಿಸಿದರು.

ಇಲ್ಲಿನ ಎಜ್‌ಬಾಸ್ಟನ್‌ ಮೈದಾನದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ಆರಂಭದಲ್ಲೇ 98 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ 6ನೇ ವಿಕೆಟ್‌ಗೆ ಜತೆಯಾದ ರವೀಂದ್ರ ಜಡೇಜಾ ಹಾಗೂ ರಿಷಭ್ ಪಂತ್ ಜೋಡಿ ಆಕರ್ಷಕ 222 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಪಂತ್ 146 ರನ್ ಚಚ್ಚಿದರೇ, ಜಡೇಜಾ 104 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಜಸ್ಪ್ರೀತ್ ಬುಮ್ರಾ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ತಂಡ ನಾನೂರು ರನ್‌ಗಳ ಗಡಿ ದಾಟುವಂತೆ ಮಾಡಿದರು. ಅಂತಿಮವಾಗಿ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 413 ರನ್‌ಗಳಿಗೆ ಸರ್ವಪತನ ಕಂಡಿತು.

ಇನ್ನು ಮೊದಲ ಇನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್ ತಂಡ ಕೂಡಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಇದರ ಹೊರತಾಗಿಯೂ ಜಾನಿ ಬೇರ್‌ಸ್ಟೋವ್ ಬಾರಿಸಿದ ಆಕರ್ಷಕ ಶತಕದ ನೆರವಿನಿಂದ 284 ರನ್ ಬಾರಿಸಿ ಸರ್ವಪತನ ಕಂಡಿತು. ಇದರೊಂದಿಗೆ ಭಾರತ 132 ರನ್‌ಗಳ ಮೊದಲ ಇನಿಂಗ್ಸ್‌ ಮುನ್ನಡೆ ಪಡೆಯಿತು. ಇನ್ನು ಎರಡನೇ ಇನಿಂಗ್ಸ್‌ನಲ್ಲಿ ಚೇತೇಶ್ವರ್ ಪೂಜಾರ ಹಾಗೂ ರಿಷಭ್ ಪಂತ್ ಬಾರಿಸಿದ ಆಕರ್ಷಕ ಅರ್ಧಶತಕಗಳ ನೆರವಿನಿಂದ ಭಾರತ ತಂಡವು 245 ರನ್ ಬಾರಿಸಿ ಸರ್ವಪತನ ಕಂಡಿತು. ಈ ಮೂಲಕ ಬರ್ಮಿಂಗ್‌ಹ್ಯಾಮ್ ಟೆಸ್ಟ್ ಗೆಲ್ಲಲು ಇಂಗ್ಲೆಂಡ್‌ಗೆ 378 ರನ್‌ಗಳ ಗುರಿ ನೀಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist