ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಮೀರ್ ಅಹಮ್ಮದ್ ಬಳಿ 87 ಕೋಟಿ ರೂ. ಹೆಚ್ಚಿನ ಆಸ್ತಿ ಪತ್ತೆ

Twitter
Facebook
LinkedIn
WhatsApp
ಜಮೀರ್ ಅಹಮ್ಮದ್ ಬಳಿ 87 ಕೋಟಿ ರೂ. ಹೆಚ್ಚಿನ ಆಸ್ತಿ ಪತ್ತೆ

ಬೆಂಗಳೂರು: ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅಧಿಕೃತ ಆದಾಯಕ್ಕೆ ಹೋಲಿಸಿದರೆ 87 ಕೋಟಿ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ವರದಿ ಆಧಾರದಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಜಮೀರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಮಂಗಳವಾರ ಐದು ಸ್ಥಳಗಳಲ್ಲಿ ಶೋಧ ನಡೆಸಲಾಗಿತ್ತು. 2016ರಿಂದ ಈವರೆಗೆ ಶಾಸಕರ ಕುಟುಂಬದ ಸಂಪಾದನೆ, ವೆಚ್ಚ ಮತ್ತು ಈಗ ಹೊಂದಿರುವ ಆಸ್ತಿಯ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

‘ಕಂಟೋನ್ಮಂಟ್ ರೈಲ್ವೆ ನಿಲ್ದಾಣದ ಬಳಿ ಇರುವ ಬೃಹತ್ ಬಂಗಲೆ, ಸದಾಶಿವನಗರದ ಅತಿಥಿಗೃಹ, ಸಿಲ್ವರ್ ಓಕ್

ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್ ಸೇರಿದಂತೆ ನಾಲ್ಕು ಸ್ಥಿರಾಸ್ತಿಗಳು ಮಾತ್ರ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾಗಿವೆ. ಅವುಗಳ ಮೌಲ್ಯಮಾಪನ ಮಾಡಬೇಕಿದೆ. ಅಧಿಕೃತ ಆದಾಯಕ್ಕೆ ಹೋಲಿಸಿದರೆ ಜಮೀರ್ ಬಳಿ ಶೇಕಡ 2031ರಷ್ಟು ಅಕ್ರಮ ಆಸ್ತಿ ಇರುವ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ಲಭ್ಯವಾಗಿದೆ’ ಎಂದು ತನಿಖಾ ಸಂಸ್ಥೆಯ ಮೂಲಗಳು ತಿಳಿಸಿವೆ.

ಜಮೀರ್ ಅಹಮ್ಮದ್ ಒಡೆತನದ ನ್ಯಾಷನಲ್ ಟ್ರಾವೆಲ್ಸ್ 16 ವರ್ಷಗಳಿಂದ ಈಚೆಗೆ ನಡೆಸಿರುವ ವಹಿವಾಟಿನ ಬಗ್ಗೆಯೂ ತನಿಖಾ ತಂಡ ಮಾಹಿತಿ ಸಂಗ್ರಹಿಸುತ್ತಿದೆ. ಶೋಧ ಕಾರ್ಯಾಚರಣೆ ವೇಳೆ ಲಭ್ಯವಾಗಿರುವ ದಾಖಲೆಗಳು, ಸಂಗ್ರಹಿಸಿದ ಮಾಹಿತಿ ಕುರಿತು ತನಿಖಾ ತಂಡವು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಬುಧವಾರ ಪ್ರಾಥಮಿಕ ವರದಿ ಸಲ್ಲಿಸಿದೆ.

ದಾಖಲೆ ಸಲ್ಲಿಸಲು ಸೂಚನೆ: ‘ತಮ್ಮ ಬಳಿ ಇರುವ ಎಲ್ಲ ಆಸ್ತಿಗಳನ್ನೂ ಅಧಿಕೃತವಾಗಿ ಘೋಷಿಸಿಕೊಂಡಿದ್ದು, ಸಂಪೂರ್ಣ ಆದಾಯಕ್ಕೆ ತೆರಿಗೆ ಪಾವತಿಸಲಾಗಿದೆ ಎಂದು ಜಮೀರ್ ತಿಳಿಸಿದ್ದಾರೆ. ಈ ಕುರಿತು ಅವರ ಬಳಿ ಇರುವ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ದಾಖಲೆ ಪರಿಶೀಲನೆ ಬಳಿಕ ತನಿಖೆ ಮುಂದುವರಿಯಲಿದೆ’ ಎಂದು ಎಸಿಬಿ ಮೂಲಗಳು ಹೇಳಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ