ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

`ಪವಿತ್ರ’ಪ್ರೇಮ ವಿಫಲ – ಯುವಕ ಕೈಕೊಟ್ಟನೆಂದು ಕಾಲೇಜಿನಲ್ಲೇ ವಿದ್ಯಾರ್ಥಿನಿ ನೇಣಿಗೆ ಶರಣು

Twitter
Facebook
LinkedIn
WhatsApp
`ಪವಿತ್ರ’ಪ್ರೇಮ ವಿಫಲ – ಯುವಕ ಕೈಕೊಟ್ಟನೆಂದು ಕಾಲೇಜಿನಲ್ಲೇ ವಿದ್ಯಾರ್ಥಿನಿ ನೇಣಿಗೆ ಶರಣು

ಚಿಕ್ಕಬಳ್ಳಾಪುರ: ಕೃಷಿ ಮಹಾವಿದ್ಯಾಲಯದ ವಸತಿ ನಿಲಯದ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರುಬೂರ ಗ್ರಾಮದ ಕೃಷಿ ಮಹಾವಿದ್ಯಾಲಯದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಪವಿತ್ರಾ(21) ತಡರಾತ್ರಿ 11.30 ಗಂಟೆಗೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಂತಿಮ ವರ್ಷದಲ್ಲಿ ಬಿಎಸ್‌ಸಿ ಕೃಷಿ ವ್ಯಾಸಂಗ ಮಾಡ್ತಿದ್ದ ಪವಿತ್ರಾ ಕಾಲೇಜಿನ ವಸತಿನಿಲಯದಲ್ಲೇ ನೇಣು ಬಿಗಿದುಕೊಂಡಿದ್ದು, ಸಾವಿಗೂ ಮುನ್ನ ಡೆತ್‌ನೋಟ್ ಬರೆದಿಟ್ಟು ಮೊಬೈಲ್‌ನಲ್ಲಿ ವೀಡಿಯೋ ಸಹ ಮಾಡಿದ್ದಾಳೆ ಎಂದು ಹೇಳಲಾಗಿದೆ. 

`ಪವಿತ್ರ’ಪ್ರೇಮ ವಿಫಲ – ಯುವಕ ಕೈಕೊಟ್ಟನೆಂದು ಕಾಲೇಜಿನಲ್ಲೇ ವಿದ್ಯಾರ್ಥಿನಿ ನೇಣಿಗೆ ಶರಣು

ಡೆತ್ ನೋಟ್ ನಲ್ಲಿ ಏನಿತ್ತು?
ಈಚೆಗಷ್ಟೇ ನನಗೆ ಅಪರಿಚಿತ ಯುವಕನ ಮೊಬೈಲ್ ನಂಬರ್ ಸಿಕ್ಕಿ ಆತನೊಂದಿಗೆ ಪರಿಚಯವಾಗಿ ಪ್ರೇಮವಾಗಿತ್ತು. ಆತ ಒಳ್ಳೆಯವನೆಂದು ಭಾವಿಸಿದ್ದೆ, ಆದ್ರೆ ಅವನು ಒಳ್ಳೆಯವನಲ್ಲ ಪರಿಚಯವಾದ ಕೆಲವೇ ದಿನಗಳಲ್ಲಿ ರೂಂ ಗೆ ಕರೆದಿದ್ದ. ನಂತರ ನಾನು ಆತನೊಂದಿಗೆ ಮಾತನಾಡುವುದನ್ನೇ ಬಿಟ್ಟಿದ್ದೆ. ಅದರೂ ಅವನು ಮತ್ತೆ ಮತ್ತೆ ಫೋನ್‌ಕಾಲ್, ಮೆಸೇಜ್ ಮಾಡುತ್ತಿದ್ದ. ಮತ್ತೆ ಪ್ರೇಮ ಶುರುವಾಗಿ ಆತನೇ ಪ್ರಪಂಚ ಎಂಬಂತಾಗಿತ್ತು. ಈ ವಿಚಾರ ಯುವಕನ ಮನೆಯಲ್ಲಿ ಗೊತ್ತಾಗಿ ಅವನ ಅಕ್ಕ ನನಗೆ ಕರೆ ಮಾಡಿ, ಬೈದಿದ್ದರು. ಇದರಿಂದ ನಾವಿಬ್ಬರೂ ಬೇರೆಯಾಗೋಣ ಅಂತಾನೂ ತೀರ್ಮಾನ ಮಾಡಿದ್ದೀವಿ..’ ಎಂದು ಯುವತಿ ಬರೆದಿದ್ದಾಳೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ಬರೆದಿಲ್ಲ.

ಪ್ರಕರಣ ದಾಖಲಿಸಿಕೊಂಡಿರುವ ಚಿಂತಾಮಣಿ ಗ್ರಾಮಾಂತರ ಪೊಲೀಸರು ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇನ್ನೂ ಆತ್ಮಹತ್ಯೆ ಮಾಡಿಕೊಂಡ ಅದೇ ದಿನ ತಡರಾತ್ರಿ ಯುವಕ ಪವಿತ್ರಾಗೆ ಕರೆ ಮಾಡಿ ಮಾತನಾಡಿದ್ದಾನೆ. ಈ ವೇಳೆ ಇಬ್ಬರ ನಡುವೆ ಜಗಳ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇದಾದ ಕೆಲವೇ ಹೊತ್ತಿನಲ್ಲಿ ಯುವಕ ಪವಿತ್ರಾಳ ಸ್ನೇಹಿತೆಗೆ ಕರೆ ಮಾಡಿ `ಪವಿತ್ರಾ ಆತ್ಮಹತ್ಯೆ ಮಾಡಿಕೊಳ್ತಿದ್ದಾಳೆ ಬೇಗ ಹೋಗಿ ನೋಡಿ ಫೋನ್ ತೆಗೀರಿ’ ಅಂತ ಸಂದೇಶ ಕಳಿಸಿರುವುದು ತನಿಖೆ ವೇಳೆ ಗೊತ್ತಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ