ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಜಿಲ್ಲೆಗಳಿಗೆ ಕುಚ್ಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಚಿಂತನೆ: ಕೋಟ ಶ್ರೀನಿವಾಸ ಪೂಜಾರಿ ವಿಶೇಷ ಸಭೆ

Twitter
Facebook
LinkedIn
WhatsApp
ಕರಾವಳಿ ಜಿಲ್ಲೆಗಳಿಗೆ ಕುಚ್ಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಚಿಂತನೆ: ಕೋಟ ಶ್ರೀನಿವಾಸ ಪೂಜಾರಿ ವಿಶೇಷ ಸಭೆ

ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಮುಖ ಆಹಾರಧಾನ್ಯವಾದ ಕುಚ್ಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ವಿಧಾನಸೌಧದಲ್ಲಿಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಿಶೇಷ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರ ಪ್ರಮುಖ ಆಹಾರ ಧಾನ್ಯ ಕುಚಲಕ್ಕಿ ಆಗಿದೆ. ಈ ಭಾಗದ ಜನರಿಗೆ ಕುಚ್ಚಲಕ್ಕಿ ಬಹುದಿನಗಳ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈಗಾಗಲೇ ಕೇರಳ ರಾಜ್ಯಕ್ಕೆ ರಾಜ್ಯದ ನಿಯೋಗ ಭೇಟಿ ನೀಡಿ ಅಧ್ಯಯನ ನಡೆಸಿದೆ ಎಂದು ತಿಳಿಸಿದರು.

ಕರಾವಳಿ ಜಿಲ್ಲೆಗಳಿಗೆ ಕುಚ್ಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಚಿಂತನೆ: ಕೋಟ ಶ್ರೀನಿವಾಸ ಪೂಜಾರಿ ವಿಶೇಷ ಸಭೆ

ಕರಾವಳಿ ಜಿಲ್ಲೆಗಳಿಗೆ ಪ್ರತಿ ತಿಂಗಳು 1 ಲಕ್ಷ ಕ್ವಿಂಟಾಲ್ ಅಕ್ಕಿ ಅಗತ್ಯವಿದ್ದು, ವರ್ಷಕ್ಕೆ 12 ಲಕ್ಷ ಕ್ವಿಂಟಾಲ್ ಅಗತ್ಯವಿದೆ. ಇದಕ್ಕಾಗಿ ವರ್ಷಕ್ಕೆ ಕನಿಷ್ಠ 18 ಲಕ್ಷ ಕ್ವಿಂಟಾಲ್ ಭತ್ತ ಅಗತ್ಯವಿದೆ ಎದು ವಿವರಿಸಿದರು.

ಜಯ, ಜ್ಯೋತಿ, ಎಂಎಫ್4 ಅಂತಹ ಭತ್ತದ ತಳಿಗಳಿಂದ ಮಾತ್ರ ಕುಚ್ಚಲಕ್ಕಿ ಮಾಡಲು ಸಾಧ್ಯವಿದೆ. ಈ ಎರಡು ಜಿಲ್ಲೆಗಳಿಂದ ಕೇವಲ ಎರಡೂವರೆ ಲಕ್ಷ ಕ್ವಿಂಟಾಲ್ ಭತ್ತ ಮಾತ್ರ ಉತ್ಪಾದನೆಯಾಗುತ್ತಿದೆ. ಇನ್ನುಳಿದ ಭತ್ತವನ್ನು ಮೈಸೂರು, ಮಂಡ್ಯ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಿಂದ ಖರೀದಿಗೆ ಕ್ರಮ ವಹಿಸಲಾಗುವುದು. ಆದರೆ ಪೂರ್ಣ ಪ್ರಮಾಣದಲ್ಲಿ ಭತ್ತ ಸಿಗುತ್ತಿಲ್ಲ. ಈ ಸಂಬಂಧ ಹೆಚ್ಚುವರಿ ಬೇಡಿಕೆಯನ್ನು ಕೇರಳ ಮತ್ತು ತೆಲಂಗಾಣ ಜಿಲ್ಲೆಗಳಿಂದ ಭತ್ತ ಪೂರೈಸಿಕೊಳ್ಳಲು ಯೋಜಿಸಲಾಗಿದೆ. ಈ ಸಂಬಂಧ ವಾರಾಂತ್ಯದಲ್ಲಿ ಮತ್ತೊಂದು ಅಧ್ಯಯನ ತಂಡ ತೆಲಂಗಾಣಕ್ಕೆ ಭೇಟಿ ನೀಡಲಿದೆ ಎಂದರು.

ಕರಾವಳಿ ಜಿಲ್ಲೆಗಳಿಗೆ ಕುಚ್ಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಚಿಂತನೆ: ಕೋಟ ಶ್ರೀನಿವಾಸ ಪೂಜಾರಿ ವಿಶೇಷ ಸಭೆ

ಅಧ್ಯಯನ ತಂಡಗಳ ವರದಿ ಆಧರಿಸಿ ಕರಾವಳಿ ಜಿಲ್ಲೆಗಳ ಶಾಸಕರು ಹಾಗೂ ಸಂಸದರ ನಿಯೋಗದೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಬರುವ ವರ್ಷದಿಂದಲೇ ಈ ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ಕೊಟ್ಟರು.

ಸಭೆಯಲ್ಲಿ ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತೆ ಕನಗವಲ್ಲಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೋಡ್ಗಿ, ಅಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಸೋಮಣ್ಣನವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ವಿಜಯಕುಮಾರ್ ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ