ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

KRS, ಕಬಿನಿ ಜಲಾಶಯಕ್ಕೆ ಬಾಗಿನ – ದಾಖಲೆ ಬರೆದ ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
KRS, ಕಬಿನಿ ಜಲಾಶಯಕ್ಕೆ ಬಾಗಿನ – ದಾಖಲೆ ಬರೆದ ಸಿಎಂ ಬೊಮ್ಮಾಯಿ

ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕಿಂದು ವೃಶ್ಚಿಕ ಲಗ್ನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿದ್ದಾರೆ. ಇದಕ್ಕೂ ಮುನ್ನ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಬಿದಿರಳ್ಳಿಯಲ್ಲಿರುವ ಕಬಿನಿ ಜಲಾಶಕ್ಕೂ ಬಾಗಿನ ಕೊಟ್ಟಿದ್ದಾರೆ.

KRS, ಕಬಿನಿ ಜಲಾಶಯಕ್ಕೆ ಬಾಗಿನ – ದಾಖಲೆ ಬರೆದ ಸಿಎಂ ಬೊಮ್ಮಾಯಿ

8 ತಿಂಗಳ ಅವಧಿಯಲ್ಲೇ ಬೊಮ್ಮಾಯಿ ಅವರು 2ನೇ ಬಾರಿಗೆ ಬಾಗಿನ ಅರ್ಪಿಸಿದ್ದಾರೆ. ಕೆಆರ್‌ಎಸ್ ಜಲಾಶಯ ಸಾಮಾನ್ಯವಾಗಿ ಆಗಸ್ಟ್ ನಲ್ಲಿ ಭರ್ತಿಯಾಗುತ್ತಿದ್ದರಿಂದ ಒಂದು ವರ್ಷ ಕಾಯಬೇಕಿತ್ತು. ಆದರೆ ಈ ಬಾರಿ ಮೂರು ತಿಂಗಳ ಮುಂಚೆಯೇ ಭರ್ತಿಯಾಗಿದ್ದು, 8 ತಿಂಗಳಲ್ಲೇ 2 ಬಾರಿ ಬಾಗಿನ ಅರ್ಪಿಸುವ ಅವಕಾಶ ಒದಗಿಬಂದಿದೆ. 

ಸಿಎಂ ಆಗಮನದ ಹಿನ್ನೆಲೆಯಲ್ಲಿ ಹೂವು, ತಳಿರು ತೋರಣಗಳಿಂದ ಅಲಂಕರಿಸಿ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯದ ಹೊರಾಂಗಣವನ್ನು ಮದುವಣಗಿತ್ತಿಯಂತೆ ಸಿಂಗರಿಸಲಾಗಿತ್ತು. ವೃಶ್ಚಿಕ ಶುಭಲಗ್ನದಲ್ಲಿ ಸೀರೆ, ಬೆಲ್ಲ, ಅಕ್ಕಿ, ನವ ಧಾನ್ಯಗಳನ್ನು ಸಮರ್ಪಿಸುವ ಮೂಲಕ ಸಿಎಂ ಬಾಗಿನಕೊಟ್ಟರು.

ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡ, ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಈ ಹಿಂದೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 6 ಬಾರಿ ಬಾಗಿನ ಬಿಟ್ಟು ಅತಿ ಹೆಚ್ಚು ಬಾರಿ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಅತ್ಯಂತ ಕಡಿಮೆ ಅವಧಿಯಲ್ಲೇ 2 ಬಾರಿ ಬಾಗಿನ ಅರ್ಪಿಸಿದ ಹೆಗ್ಗಳಿಕೆಗೆ ಸಿಎಂ ಬೊಮ್ಮಾಯಿ ಪಾತ್ರರಾಗಿದ್ದಾರೆ.

KRS, ಕಬಿನಿ ಜಲಾಶಯಕ್ಕೆ ಬಾಗಿನ – ದಾಖಲೆ ಬರೆದ ಸಿಎಂ ಬೊಮ್ಮಾಯಿ

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ ತುಂಬಿರುವುದರಿಂದ ಹಳೆ ಮೈಸೂರು ಭಾಗದ ಜನರಲ್ಲಿ ಸಂತಸ ಮನೆ ಮಾಡಿದೆ. ಹಾಗೆಯೇ 2,284 ಗರಿಷ್ಠಮಟ್ಟ ಹೊಂದಿರುವ ಕಬಿನಿ ಜಲಾಶಯ ತುಂಬಿರುವುದೂ ಜನರಲ್ಲಿ ಸಂತಹ ಹೆಚ್ಚಿಸಿದೆ. ಅದರೆ ಜಲಾನಯನ ಪ್ರದೇಶದಲ್ಲಿರುವ ಜನರಿಗೆ ಪ್ರವಾಹದ ಭೀತಿ ಉಂಟುಮಾಡಿದೆ. 

ಕೆಆರ್‌ಎಸ್ ಜಲಾಶಯ ಕಳೆದ ವರ್ಷ ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಭರ್ತಿಯಾಗಿತ್ತು. ಆದರೆ ಈ ಬಾರಿ ಜುಲೈ ತಿಂಗಳ 2ನೇ ವಾರದಲ್ಲೇ ಭರ್ತಿಯಾಗಿದೆ. ಕೆಆರ್‌ಎಸ್‌ನ ಇತಿಹಾಸದಲ್ಲೇ ಜುಲೈ ತಿಂಗಳಲ್ಲಿ 6ನೇ ಬಾರಿಗೆ ಭರ್ತಿಯಾಗಿದೆ. ಈ ಹಿಂದೆ 1980, 2006, 2007, 2009, 2018ರಲ್ಲಿ ಭರ್ತಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ