ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೇತುವೆ ಮೇಲೆ ಚಲಿಸುತ್ತಿದ್ದ ರೈಲಿಗೆ ಬೆಂಕಿ: ಜೀವ ಉಳಿಸಿಕೊಳ್ಳಲು ನದಿ ಹಾರಿದ ಪ್ರಯಾಣಿಕರು

Twitter
Facebook
LinkedIn
WhatsApp
ಸೇತುವೆ ಮೇಲೆ ಚಲಿಸುತ್ತಿದ್ದ ರೈಲಿಗೆ ಬೆಂಕಿ: ಜೀವ ಉಳಿಸಿಕೊಳ್ಳಲು ನದಿ ಹಾರಿದ ಪ್ರಯಾಣಿಕರು

ಮೆಸಾಚುಸೆಟ್ಸ್: ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಮೇಲೆ ಚಲಿಸುತ್ತಿದ್ದ ರೈಲಿಗೆ ಒಮ್ಮಿಂದೊಮ್ಮೆಲೆ ಬೆಂಕಿ ಬಿದ್ದಿದ್ದು, ಇದರಿಂದ ರೈಲಿನಲ್ಲಿದ್ದ ಪ್ರಯಾಣಿಕರು ಜೀವ ಉಳಿಸಿಕೊಳ್ಳಲು ನದಿಗೆ ಹಾರಿದ ಘಟನೆ ನಡೆದಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೆಸಾಚುಸೆಟ್ಸ್ ಬೇ ಸಾರಿಗೆ ಪ್ರಾಧಿಕಾರದ ಒಳ ಬರುವ ಆರೆಂಜ್ ಲೈನ್ ರೈಲು ಇನ್ನೇನು ಮಿಸ್ಟಿಕ್ ನದಿಯನ್ನು ದಾಟಿ ಸೋಮರ್‌ವಿಲ್ಲೆಯಲ್ಲಿರುವ ಅಸೆಂಬ್ಲಿ ನಿಲ್ದಾಣ ಸಮೀಪಿಸಬೇಕು ಎನ್ನುವಷ್ಟರಲ್ಲಿ ಸೇತುವೆ ಮೇಲೆಯೇ ರೈಲಿಗೆ ಬೆಂಕಿ ಹತ್ತಿಕೊಂಡು ಹೊತ್ತಿ ಉರಿಯಲಾರಂಭಿಸಿದೆ. ಈ ವೇಳೆ ಜೀವ ಉಳಿಸಿಕೊಳ್ಳಲು ಕೆಲ ಪ್ರಯಾಣಿಕರು ನದಿಗೆ ಹಾರಿದ್ದಾರೆ. ಅಮೆರಿಕಾದ ಬೋಸ್ಟನ್‌ನ ಉತ್ತರ ಭಾಗದಲ್ಲಿ ಈ ಘಟನೆ ನಡೆದಿದೆ.

ರೈಲಿನಲ್ಲಿದ್ದ ಪ್ರಯಾಣಿಕರು ಬಲವಂತವಾಗಿ ಕಿಟಕಿಯಿಂದ ನದಿಗೆ ಜಿಗಿದಿದ್ದಾರೆ. ನಂತರ ರೈಲಿನ ತಳದಲ್ಲಿದ್ದ ಲೋಹದ ಫಲಕವು ಸಡಿಲಗೊಂಡು ವಿದ್ಯುದೀಕರಣಗೊಂಡ ಮೂರನೇ ಹಳಿಯನ್ನು ಸ್ಪರ್ಶಿಸಿದ ಪರಿಣಾಮ ಈ ಬೆಂಕಿ ಅನಾಹುತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಈ ದುರಂತದಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ತಿಳಿದು ಬಂದಿದೆ. MBTA ಜನರಲ್ ಮ್ಯಾನೇಜರ್ ಸ್ಟೀವ್ ಪೋಫ್ಟಾಕ್ ಘಟನೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಾಥಮಿಕ ಮಾಹಿತಿ ಪ್ರಕಾರ 6 ಅಡಿ 1 ಇಂಚು ಇರುವೀ ಲೋಹದ ಫಲಕವನ್ನು ‘ಸಿಲ್’ ಎಂದು ಕರೆಯುತ್ತಾರೆ, ಅದು ರೈಲಿನ ತಳದ ಉದ್ದಕ್ಕೂ ಚಲಿಸುತ್ತದೆ. ಆದರೆ ಇದು ಸಡಿಲಗೊಂಡ ಪರಿಣಾಮ ವಿದ್ಯುತ್ ಪ್ರವಹಿಸುತ್ತಿದ್ದ ಹೈ-ವೋಲ್ಟೇಜ್ ಹಳಿಗೆ ಸ್ಪರ್ಶಿಸಿತ್ತು. ಪರಿಣಾಮ ಇದರಿಂದ ಕಿಡಿ ಹೊತ್ತಿಕೊಂಡು ಬೆಂಕಿ ಉಂಟಾಗಿದೆ ಎಂದು ಅವರು ಹೇಳಿದರು.

ಬೆಂಕಿಯಿಂದ ತಪ್ಪಿಸಿಕೊಳ್ಳುವ ಸಮಯದಲ್ಲಿ ರೈಲಿನ ಪ್ರಯಾಣಿಕರು ಬೋಗಿಯ ನಾಲ್ಕು ಕಿಟಕಿಗಳಿಂದ ಹೊರಗೆ ಹಾರಿದ್ದಾರೆ. ಈ ರೈಲಿನಲ್ಲಿದ್ದ ಸುಮಾರು 200 ಪ್ರಯಾಣಿಕರಲ್ಲಿ ಹೆಚ್ಚಿನವರು MBTA ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟರು ಎಂದು ಪೋಫ್ಟಾಕ್ ಹೇಳಿದರು. ಇನ್ನು ಈ ಸಂದರ್ಭದಲ್ಲಿ ನದಿಗೆ ಹಾರಿದ ಮಹಿಳೆ ವೈದ್ಯಕೀಯ ಚಿಕಿತ್ಸೆ ನಿರಾಕರಿಸಿದರು ಎಂದು ಅವರು ತಿಳಿಸಿದರು. ಅಲ್ಲದೇ ಈ ಘಟನೆ ನಡೆದ ಎರಡು ನಿಮಿಷಗಳಲ್ಲಿ ಮೂರನೇ ಹಳಿಗೆ ವಿದ್ಯುತ್ ಸ್ಥಗಿತಗೊಳಿಸಲಾಯಿತು ಎಂದು ಅವರು ಹೇಳಿದರು.3 ವರ್ಷ ಹಳೆಯ ಈ ರೈಲನ್ನು ಒಂದು ತಿಂಗಳ ಹಿಂದೆಯೇ ಪರಿಶೀಲಿಸಲಾಗಿತ್ತು, ಈ ವೇಳೆ ಸಡಿಲಗೊಂಡ ಫಲಕದ ಪರಿಶೀಲನೆಯೂ ನಡೆದಿದೆ. ಬೆಂಕಿ ಸಂಭವಿಸಿದ ನಂತರ ಸೇವೆಯಲ್ಲಿರುವ ಇತರ ಆರೆಂಜ್ ಲೈನ್ ಮೇಲೆ ಅದೇ ಫಲಕವನ್ನು ಪರಿಶೀಲಿಸಲಾಯಿತು ಮತ್ತು ಆ ವೇಳೆ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಪೋಫ್ಟಾಕ್ ಹೇಳಿದರು. ಘಟನೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಈ ಅನಾಹುತದ ವಿಡಿಯೋ ವೈರಲ್ ಆಗುತ್ತಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ