ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಯೋಚಿಸುತ್ತಿದ್ದೇನೆ : ರೇಣುಕಾಚಾರ್ಯ ಕಿಡಿ

Twitter
Facebook
LinkedIn
WhatsApp
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಯೋಚಿಸುತ್ತಿದ್ದೇನೆ : ರೇಣುಕಾಚಾರ್ಯ ಕಿಡಿ

ಬೆಂಗಳೂರು : ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ, ಆದ್ದರಿಂದ ನಮ್ಮ ಸರಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜತೆ ಚರ್ಚಿಸಿ ಶಾಸಕ ಸ್ಥಾನಕ್ಕೆ “ರಾಜೀನಾಮೆ” ನೀಡಲು ಯೋಚಿಸುತ್ತಿದ್ದೇನೆ ಎಂದು ಸಿಎಂ‌ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಸರಕಾರದ ವಿರುದ್ಧವೇ ಆಕ್ರೋಶ ಹೊರ ಹಾಕಿದ್ದಾರೆ.ಪ್ರವೀಣ್ ನೆಟ್ಟಾರು ಹತ್ಯೆಯ ಕುರಿತು ಆಕ್ರೋಶ ಹೊರ ಹಾಕಿದ ಮಾಜಿ ಸಚಿವ, ಹೊನ್ನಾಳಿ ಶಾಸಕ ರೇಣುಕಾಚಾರ್ಯ, ”ಹಿಂದೂ ಸಮೂಹ ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳಲು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರೆಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎನ್ನುವುದನ್ನು ಮತ್ತೊಮ್ಮೆ ಹೇಳುತ್ತೇನೆ” ಎಂದಿದ್ದಾರೆ.
”ಕೆಲ ದಿನಗಳ ಹಿಂದೆ ನನಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನೂ ಸಹ ನಮ್ಮ ಪೊಲೀಸ್ ಇಲಾಖೆ ಇದುವರೆಗೂ ಪತ್ತೆ ಹಚ್ಚಿಲ್ಲ ಎಂದು ಹೇಳಿಕೊಳ್ಳುವುದಕ್ಕೆ ನನಗೆ ಮುಜುಗರವಾಗುತ್ತದೆ. ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ” ಎಂದು ಹೇಳಿದ್ದಾರೆ.
”ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನೆಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೆ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.ನಮ್ಮ ಸರ್ಕಾರ ಯೋಗಿ ಆದಿತ್ಯನಾಥ್ ಜಿ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ.ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ?” ಎಂದು ಪ್ರಶ್ನಿಸಿದ್ದಾರೆ.

ಪ್ರತಿ ಬಾರಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಿಂದ ಏನೂ ಪ್ರಯೋಜನವಿಲ್ಲ. ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳ ಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು” ಎಂದು ಗುಡುಗಿದ್ದಾರೆ.ಜನರಿಗೆ ಬೇಕಾಗಿರುವುದು ನಮ್ಮ ಪೌರುಷದ ಭಾಷಣ ಅಥವಾ ಹೇಳಿಕೆಗಳಲ್ಲ, ನಾವು ತೆಗೆದುಕೊಳ್ಳುವ ನಿರ್ಧಾಕ್ಷಣ್ಯ ಕ್ರಮಗಳು ಎಂದು ಬಹಿರಂಗ ಆಕ್ರೋಶ ಹೊರ ಹಾಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ