ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುರುಬೆಳದಿಂಗಳು ಫೌಂಡೇಶನ್‌ನಿಂದ ಪ್ರವೀಣ್ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ ಹಸ್ತಾಂತರ

Twitter
Facebook
LinkedIn
WhatsApp
ಗುರುಬೆಳದಿಂಗಳು ಫೌಂಡೇಶನ್‌ನಿಂದ ಪ್ರವೀಣ್ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ ಹಸ್ತಾಂತರ

ಮಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಬಳಿಕ ಇಡೀ ಬಿಲ್ಲವ ಸಮುದಾಯದ ಯುವಕರು ಎಚ್ಚೆತ್ತುಕೊಂಡಿದ್ದಾರೆ. ಇನ್ನಾದರೂ ಯಾವುದೇ ರಾಜಕೀಯ ಸಿದ್ಧಾಂತಗಳಿಗೆ ಬಲಿಯಾಗದೆ, ತಾವು ದುಡಿದು ತಮ್ಮ ಮನೆಯವರಿಗೋಸ್ಕರ ಬದುಕಬೇಕು ಎಂದು ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳೀದರು ಪ್ರವೀಣ್ ನೆಟ್ಟಾರ್ ಅವರ ನಿವಾಸಕ್ಕೆ ಗುರುವಾರ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ನೆಟ್ಟ್ಟಾರ್ ಅವರ ಕುಟುಂಬಕ್ಕೆ ಸರ್ಕಾರ ಒಂದು ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು ಹಾಗೂ ಅವರ ಧರ್ಮಪತ್ನಿಗೆ ಕೂಡಲೇ ಸರ್ಕಾರಿ ನೌಕರಿ ಘೋಷಿಸಬೇಕು ಎಂದು ಒತ್ತಾಯಿಸಿದರು.

ಗುರುಬೆಳದಿಂಗಳು ಫೌಂಡೇಶನ್‌ನಿಂದ ಪ್ರವೀಣ್ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ ಹಸ್ತಾಂತರ

ಬಿಲ್ಲವ ಸಮುದಾಯದ ಯುವಕರು ಇನ್ನಾದರೂ ಎಚ್ಚೆತ್ತುಕೊಂಡು ಯಾವುದೇ ಪ್ರಚೋದನೆಗೆ ಒಳಗಾಗದೆ ಸಂಯಮದಿಂದ ಇರಬೇಕು. ಈಗಾಗಲೇ ಅನೇಕ ಬಿಲ್ಲವ ಯುವಕರು ಹತ್ಯೆಗೀಡಾಗಿದ್ದಾರೆ. ಮುಂದಿನ ದಿನಗಳಲ್ಲಿ ಇದು ಮರುಕಳಿಸಬಾರದು. ನಾವು ಬ್ರಹ್ಮಶ್ರೀ ನಾರಾಯಣ ಗುರುಗಳ ಅಹಿಂಸ ಸಿದ್ಧಾಂತದ ಹಾದಿಯಲ್ಲಿ ಮುಂದುವರೆಯಬೇಕು ಎಂದು ಕಿವಿಮಾತು ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಮಾತನಾಡಿ, ಸರ್ಕಾರಕ್ಕೆ ಇಚ್ಛಾಶಕ್ತಿ ಇದ್ದರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಸೇರಿ, ಸಮಾಜದಲ್ಲಿ ಶಾಂತಿ ಕದಡುವ ಕೋಮುವಾದದಂತಹ ಎಲ್ಲ ಪ್ರಕರಣಗಳನ್ನು ತ್ವರಿತ ನ್ಯಾಯಾಲಯ ಸ್ಥಾಪಿಸಿ ಆರು ತಿಂಗಳೊಳಗೆ ಇತ್ಯರ್ಥಗೊಳಿಸಿ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಸರ್ಕಾರದ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ. ಕೆಲವು ದಿನಗಳ ಹಿಂದೆ, ಮಾಧ್ಯಮಗಳು ಪ್ರತೀಕಾರದ ಕೊಲೆ ನಡೆಯಬಹುದು ಎಂದು ಸಂಶಯ ವ್ಯಕ್ತಪಡಿಸಿ, ಸರ್ಕಾರವನ್ನು ಎಚ್ಚರಿಸಿದರೂ ಏನೂ ಕ್ರಮ ಕೈಗೊಳ್ಳದ ಗುಪ್ತಚರ ಇಲಾಖೆಯ ವಿಫಲತೆಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ಗುರುಬೆಳದಿಂಗಳು ಫೌಂಡೇಶನ್‌ನಿಂದ ಪ್ರವೀಣ್ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ ಹಸ್ತಾಂತರ

ಪ್ರವೀಣ್ ನಮ್ಮ ಕುಟುಂಬದ ಸದಸ್ಯ ಮನೆಯವರ ದುಃಖದ ಸಮಯದಲ್ಲಿ ಬಿಲ್ಲವ ಸಮಾಜ ಸದಾ ಇರುತ್ತದೆ ಎಂದು ತಿಳಿಸಿದರು.
ಈ ಸಂದರ್ಭ ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಗುರುಬೆಳದಿಂಗಳು ಫೌಂಡೇಶನ್‌ನಿಂದ 1 ಲಕ್ಷ ರೂ ಪರಿಹಾರ ಹಸ್ತಾಂತರಿಸಲಾಯಿತು.
ಗೆಜ್ಜೆಗಿರಿ ನಂದನ ಬಿತ್ತಲ್ ಕ್ಷೇತ್ರದ ಗೌರವಾಧ್ಯಕ್ಷ ಜಯಂತ ನಡುಬೈಲ್, ಬೆಳ್ತಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಚಿದಾನಂದ ಎಲ್ದಕ್ಕ, ಬೆಳ್ತಂಗಡಿ ಬಿಲ್ಲವ ಯುವವೇದಿಕೆ ಅಧ್ಯಕ್ಷ ನಿತೀಶ್ ಕೋಟ್ಯಾನ್, ವಕೀಲ ಮನೋಹರ್, ವೇಣೂರು ಯುವವಾಹಿನಿ ಅಧ್ಯಕ್ಷ ಯೋಗೀಶ್, ರವಿ ಪೂಜಾರಿ ಚಿಲಿಂಬಿ, ರಾಜೇಂದ್ರ ಚಿಲಿಂಬಿ ನವೀನ್ ಪಚ್ಚೇರಿ, ಮೋಹನ್ ಪಡೀಲ್, ಪುರುಷೋತ್ತಮ ಸಜಿಪ, ರಾಜೇಶ್ ಸುವರ್ಣ, ಪ್ರವೀಣ್ ಅರ್ಕುಳ ಮೊದಲಾದವರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ