ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳ ಶವ ಪತ್ತೆ

Twitter
Facebook
LinkedIn
WhatsApp
ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳ ಶವ ಪತ್ತೆ

ಬೆಂಗಳೂರು : ತಾಯಿ-ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದ್ದು ಈ ಸಂಬಂಧ ಬನಶಂಕರಿ ಪೊಲೀಸರು ಸ್ಥಳಕ್ಕೆ‌ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಮನೆಯಲ್ಲಿ ಯಾರು ಇಲ್ಲದಿರುವಾಗ ಎರಡು ದಿನಗಳ ಹಿಂದೆ ತಾಯಿ-ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.  ದಂತ ವೈದ್ಯೆಯಾಗಿರುವ ಕೊಡಗಿನ ವಿರಾಜಪೇಟೆ ಮೂಲದ ಶೈಮಾ (39) ಮತ್ತು ಮಗಳು ಆರಾಧನ (10) ಮೃತ ದುರ್ದೈವಿಗಳು.ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದ ಮನೆಯೊಂದರಲ್ಲಿ‌ ತಾಯಿ-ಮಗಳು ವಾಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಶಂಕೆ ಹಿನ್ನೆಲೆ ಎರಡು ದಿನಗಳ ಹಿಂದೆ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿರುವ ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕಳೆದ 10 ವರ್ಷದ ಹಿಂದೆ ದಂತ ವೈದ್ಯ ತರಬೇತಿ ವೇಳೆ ಕೋಲಾರ ಮೂಲದ ನಾರಾಯಣ್‌ರನ್ನು ಪ್ರೀತಿಸಿ ಎರಡು ಕುಟುಂಬದವರನ್ನು ಒಪ್ಪಿಸಿ ಇಬ್ಬರು ವಿವಾಹವಾಗಿದ್ದರು. ಪತಿ ಸಹ ವೈದ್ಯನಾಗಿದ್ದು ಮನೆಯ ಸಮೀಪದಲ್ಲಿ ಕ್ಲಿನಿಕ್‌ ಇಟ್ಟುಕೊಂಡಿದ್ದರು‌. ಎರಡು ದಿನಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದಿರುವಾಗ ಶೈಮಾ ಹಾಗೂ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ‌. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ