ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂತ್ರಾಲಯ:ಶ್ರೀರಾಘವೇಂದ್ರಸ್ವಾಮಿ ಆರಾಧನಾ ಮಹೋತ್ಸವ ಆರಂಭ

Twitter
Facebook
LinkedIn
WhatsApp
ಮಂತ್ರಾಲಯ:ಶ್ರೀರಾಘವೇಂದ್ರಸ್ವಾಮಿ ಆರಾಧನಾ ಮಹೋತ್ಸವ ಆರಂಭ

ರಾಯಚೂರು: ಶ್ರೀರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವವು ಶ್ರಾವಣಮಾಸದ ಶುಕ್ಲಪಕ್ಷ ಚತುರ್ದಶಿ ವಿದ್ಯುಕ್ತವಾಗಿ ಆರಂಭವಾಗಿದ್ದು, ತನಿಮಿತ್ತ ಸಪ್ತರಾತ್ರೋತ್ಸವ ಕಾರ್ಯಕ್ರಮಗಳಿಗೆ ಮಠದ ಪೀಠಾಧಿಪತಿ ಶ್ರೀಸುಬುದೇಂದ್ರ ತೀರ್ಥರು ಬುಧವಾರ ಚಾಲನೆ ನೀಡಿದರು.

ಧಾರ್ಮಿಕ ವಿಧಿ ವಿಧಾನಗಳ ಅನುಸಾರ ಮೊದಲು ಶ್ರೀರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನಕ್ಕೆ ವಿಶೇಷ ಪೂಜೆ, ಮಹಾಮಂಗಳಾರತಿ ನೆರವೇರಿಸಲಾಯಿತು. ಮಠದಲ್ಲಿ ಪೂರ್ಣಕುಂಭ, ವಾದ್ಯಮೇಳಗಳು, ಮಂತ್ರಘೋಷಗಳು ಮೊಳಗಿದವು. ಶ್ರೀಕಾರಹಾಕಿದ ನಂತರ ಶ್ರೀಮಠದ ಆವರಣದಲ್ಲಿ ಧ್ವಜಾರೋಹಣ, ಗೋವು, ಅಶ್ವ ,ಗಜ, ಲಕ್ಷ್ಮೀ ಹಾಗೂ ಧಾನ್ಯ ಪೂಜೆಗಳನ್ನು ಸ್ವಾಮೀಜಿ ವಿಧಿವತ್ತಾಗಿ ನೆರವೇರಿಸಿದರು.

ಆಗಸ್ಟ್‌ 16 ರವರೆಗೂ ಸಪ್ತರಾತ್ರೋತ್ಸವ ಕಾರ್ಯಕ್ರಮಗಳು ಜರುಗಲಿದ್ದು, ಪ್ರತಿದಿನವೂ ರಾಯರ ಮೂಲ ವೃಂದಾವನಕ್ಕೆ ವಿಶೇಷ ಪೂಜೆಗಳು, ಮಹಾಸಂಸ್ಥಾನ ಪ್ರತಿಮೆಗಳ ಪೂಜೆ, ಪಂಚಾಭಿಷೇಕ, ಪ್ರಾಕಾರ ರಥೋತ್ಸವಗಳು ನಡೆಯುವುದು ಈ ವರ್ಷ ವಿಶೇಷತೆಯಿಂದ ಕೂಡಿದೆ.

ಕೋವಿಡ್ ಮಹಾಮಾರಿ ಕಾರಣದಿಂದ ಎರಡು ವರ್ಷಗಳಿಂದ ಆರಾಧನಾ ಮಹೋತ್ಸವದಿಂದ ದೂರ ಉಳಿದಿದ್ದ ಭಕ್ತರು ಈ ವರ್ಷ ನಿರ್ಭಿತಿಯಿಂದ ಮಂತ್ರಾಲಯದತ್ತ ಬರುತ್ತಿದ್ದಾರೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ನೆಲೆಯೂರಿದ್ದು, ವಾರವಿಡೀ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವೃಂದಾವನ ದರ್ಶನಕ್ಕೆ ಬಂದು ಹೋಗುವ ಭಕ್ತರ ಸಂಖ್ಯೆಯಲ್ಲೂ ಭಾರಿ ಹೆಚ್ಚಳವಾಗಿದೆ.

ಅಪಾರ ಸಂಖ್ಯೆಯ ಭಕ್ತರ ಆಗಮನವನ್ನು ಗಮನದಲ್ಲಿಟ್ಟು ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಖುದ್ದಾಗಿ ಪರಿಶೀಲಿಸಿ ಹಲವು ವ್ಯವಸ್ಥೆಗಳನ್ನು ಮಾಡಿಸಿದ್ದಾರೆ. ಮುಖ್ಯವಾಗಿ ವಾಹನಗಳ ನಿಲುಗಡೆ, ಅನ್ನಪ್ರಸಾದ, ಶುದ್ಧ ಕುಡಿಯುವ ನೀರು ಮತ್ತು ವೈದ್ಯಕೀಯ ಸೇವೆಯನ್ನು ಒದಗಿಸಲಾಗುತ್ತಿದೆ.

ಮಂತ್ರಾಲಯ ಮಠದ ವಸತಿಗೃಹಗಳಲ್ಲಿ ಮತ್ತು ಖಾಸಗಿ ವಸತಿಗೃಹಗಳಲ್ಲಿ ಈಗಾಗಲೇ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಉಳಿದುಕೊಂಡಿದ್ದಾರೆ. ಆಗಸ್ಟ್‌ 12 ರಂದು ರಾಯರ ಪೂರ್ವರಾಧನೆ, 13 ರಂದು ಮಧ್ಯಾರಾಧನೆ ಹಾಗೂ 14 ರಂದು ಉತ್ತರಾರಾಧನೆ ನಡೆಯಲಿದೆ. ಆ ಪ್ರಮುಖ ಮೂರು ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರಲಿದ್ದಾರೆ.

ಈ ಬಾರಿ ತುಂಗಾನದಿಯಲ್ಲಿ ಪುಣ್ಯಸ್ನಾನ ಮಾಡುವುದಕ್ಕೆ ಭಕ್ತರಿಗೆ ಅವಕಾಶ ನೀಡಲಾಗುತ್ತಿಲ್ಲ. ನದಿಯಲ್ಲಿ ಪ್ರವಾಹ ಏರುತ್ತಿರುವುದರಿಂದ, ಮಠದಿಂದ ವ್ಯವಸ್ಥೆ ಮಾಡಿರುವ ಕಡೆಗಳಲ್ಲಿ ನದಿನೀರಿನ ಸ್ನಾನ ಮಾಡಬಹುದಾಗಿದೆ. ನದಿಯತ್ತ ತೆರಳದಂತೆ ಭಕ್ತರಿಗೆ ಸೂಚನೆ ನೀಡಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ