ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಚೋದನಕಾರಿ ಬಟ್ಟೆ ಧರಿಸಿದ್ದರಿಂದ ಇದು ಲೈಂಗಿಕ ಕಿರುಕುಳವಾಗಲ್ಲ; ಆರೋಪಿಗೆ ಜಾಮೀನು ನೀಡಿದ ನ್ಯಾಯಾಲಯ

Twitter
Facebook
LinkedIn
WhatsApp
ಪ್ರಚೋದನಕಾರಿ ಬಟ್ಟೆ ಧರಿಸಿದ್ದರಿಂದ ಇದು ಲೈಂಗಿಕ ಕಿರುಕುಳವಾಗಲ್ಲ; ಆರೋಪಿಗೆ ಜಾಮೀನು ನೀಡಿದ ನ್ಯಾಯಾಲಯ

ಸಾಮಾಜಿಕ ಕಾರ್ಯಕರ್ತ ಮತ್ತು ಲೇಖಕರಾಗಿರುವ ಚಂದ್ರನ್ ಅವರು 2020ರ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಪ್ರಕರಣವನ್ನು ಎದುರಿಸುತ್ತಿದ್ದಾರೆ. ಚಂದ್ರನ್ ಅವರು 2020ರ ಫೆಬ್ರುವರಿ 8 ರಂದು ನಂಗಿ ಬೀಚ್‌ನಲ್ಲಿರುವ ಶಿಬಿರದಲ್ಲಿ ಏಕಾಂತ ಸ್ಥಳಕ್ಕೆ ಕರೆದೊಯ್ದು ತನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಯುವ ಬರಹಗಾರ್ತಿ ಆರೋಪಿಸಿದ್ದರು.

74 ವರ್ಷದ ಶ್ರೀ ಚಂದ್ರನ್, ಜಾಮೀನು ಅರ್ಜಿಯ ಜೊತೆಗೆ ನ್ಯಾಯಾಲಯದಲ್ಲಿ ದೂರುದಾರರ ಛಾಯಾಚಿತ್ರಗಳನ್ನು ಸಹ ಹಾಜರುಪಡಿಸಿದರು. ತನ್ನ ಆದೇಶವನ್ನು ಕಾಯ್ದಿರಿಸಿರುವ ಕೋಯಿಕ್ಕೋಡ್ ಸೆಷನ್ಸ್ ಕೋರ್ಟ್, ದೂರುದಾರರು ಲೈಂಗಿಕ ಪ್ರಚೋದನಕಾರಿ ಉಡುಪುಗಳನ್ನು ಧರಿಸಿರುವುದರಿಂದ, ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354A ಅಡಿಯಲ್ಲಿ ಅಪರಾಧ ನಿಲ್ಲಲು ಸಾಧ್ಯವಿಲ್ಲ ಎಂದು ಹೇಳಿದೆ.

 

ಆರೋಪಿ ಸಿವಿಕ್ ಚಂದ್ರನ್ ಅವರು ಜಾಮೀನು ಅರ್ಜಿಯೊಂದಿಗೆ ಸಲ್ಲಿಸಿರುವ ಛಾಯಾಚಿತ್ರಗಳನ್ನು ಗಮನಿಸಿದರೆ, ದೂರುದಾರರು ಸ್ವತಃ ಲೈಂಗಿಕವಾಗಿ ಪ್ರಚೋದಿಸುವ ಬಟ್ಟೆಗಳನ್ನು ಧರಿಸಿದ್ದರು ಎಂದು ತೋರುತ್ತದೆ ಎಂದಿರುವ ಕೋರ್ಟ್, ಸಿವಿಕ್ ಚಂದ್ರನ್ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್‌ ಕೋರ್ಟ್ ನ್ಯಾಯಮೂರ್ತಿ ಎಸ್ ಕೃಷ್ಣಕುಮಾರ್, ‘ದೈಹಿಕ ಸಂಪರ್ಕವಿದೆ ಎಂದು ಒಪ್ಪಿಕೊಂಡರೂ ಸಹ, 74 ವರ್ಷ ವಯಸ್ಸಿನ ಮತ್ತು ದೈಹಿಕವಾಗಿ ವಿಕಲಚೇತನ ವ್ಯಕ್ತಿ, ವ್ಯಕ್ತಿಯೊಬ್ಬರನ್ನು ಬಲವಂತವಾಗಿ ತಮ್ಮ ತೊಡೆಯ ಮೇಲೆ ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡಬಹುದು ಎಂಬುದನ್ನು ನಂಬಲು ಅಸಾಧ್ಯ’ ಎಂದು ತಮ್ಮ ಆದೇಶದಲ್ಲಿ ಹೇಳಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ, ಕೊಯಿಲಾಂಡಿ ಪೊಲೀಸರು ಈ ವರ್ಷದ ಜುಲೈ 29 ರಂದು ಐಪಿಸಿ ಸೆಕ್ಷನ್ 354A (2), 341 ಮತ್ತು 354 ರ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿ ಪರ ವಾದಿಸಿದ ವಕೀಲರು, ಈ ಪ್ರಕರಣ ‘ಸುಳ್ಳು’ ಮತ್ತು ಆರೋಪಿಯ ಶತ್ರುಗಳು ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. 2020ರಲ್ಲಿ ಅಪರಾಧ ನಡೆದಿದ್ದರೆ ಪ್ರಕರಣವನ್ನು ದಾಖಲಿಸಲು ಎರಡು ವರ್ಷಗಳಿಗಿಂತ ಹೆಚ್ಚು ಸಮಯ ಏಕೆ ಬೇಕಾಯಿತು ಎಂದು ಪ್ರಶ್ನಿಸಿದ್ದಾರೆ.

ಸದ್ಯ ನ್ಯಾಯಾಧೀಶ ಎಸ್ ಕೃಷ್ಣಕುಮಾರ್ ಅವರು ತಮ್ಮ ತೀರ್ಪಿನ ಪ್ರತಿಯಲ್ಲಿ ಉಲ್ಲೇಖಿಸಿರುವ ಈ ಹೇಳಿಕೆಗಳು ಕೇರಳದಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ