ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೇನುತುಪ್ಪದಲ್ಲಿನ ವಿಶಿಷ್ಟ ಔಷಧಿಯ ಗುಣಗಳು

Twitter
Facebook
LinkedIn
WhatsApp
ಜೇನುತುಪ್ಪದಲ್ಲಿನ ವಿಶಿಷ್ಟ ಔಷಧಿಯ ಗುಣಗಳು

ಜೇನು ತುಪ್ಪ ಎಂದು ಹೆಸರು ಎತ್ತಿದರೆ ಸಾಕು ನಮಗೆ ಅರಿವಿಲ್ಲದೆಯೇ ಬಾಯಲ್ಲಿ ನೀರೂರಲು ಆರಂಭವಾಗುತ್ತದೆ.. ಅಲ್ವಾ. ಸಕ್ಕರೆಯ ಸವಿಯನ್ನು ನೀಡಬಲ್ಲ ಜೇನು ನೈವೇದ್ಯ ಸಮಾನ. ಜೇನುತುಪ್ಪದ ಒಂದು ಮುಖ್ಯ ಉಪಯೋಗ ಏನೆಂದರೆ ಈ ಜೇನಿಗೆ ಗಾಯವನ್ನು ಗುಣಪಡಿಸುವ ಸಾಮರ್ಥ್ಯವಿದೆ.ಹಾಗಾಗಿ ಬಾಯಿಹುಣ್ಣು ಆದ ಸಂದರ್ಭದಲ್ಲಿ ನಾಲ್ಕು ಚಮಚದಷ್ಟು ಜೇನು ತುಪ್ಪವನ್ನು ಬಾಯಿಯಲ್ಲಿ ಹಾಕಿ ಇಟ್ಟುಕೊಂಡರೆ ಬಾಯಿ ಹುಣ್ಣು ತಕ್ಷಣವೇ ವಾಸಿಯಾಗುತ್ತದೆ. ಅಥವಾ ನೆಲ್ಲಿಕಾಯಿ ಪುಡಿಯನ್ನು ಈ ಜೇನುತುಪ್ಪ ದೊಂದಿಗೆ ಸೇರಿಸಿ ಲೇಪದಂತೆ ಹಚ್ಚಿಕೊಂಡರೆ ಬಾಯಿ ಹುಣ್ಣು ತಕ್ಷಣವೇ ವಾಸಿಯಾಗುತ್ತದೆ.

ಜೇನುತುಪ್ಪದಲ್ಲಿನ ವಿಶಿಷ್ಟ ಔಷಧಿಯ ಗುಣಗಳು

ಜೇನುತುಪ್ಪದಲ್ಲಿ ನೈಸರ್ಗಿಕವಾದ ಸಕ್ಕರೆಯ ಅಂಶವಿರುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು ಜೊತೆಗೆ ವಿಟಮಿನ್ ಬಿ ಹಾಗೂ ಮಿನರಲ್ಸ್ ಗಳು, ಕ್ಯಾಲ್ಸಿಯಂ ಹಾಗೂ ಹೇರಳವಾಗಿವುದರಿಂದ ನಮ್ಮ ದೇಹದ ಮೇಲೆ ಈ ಜೇನುತುಪ್ಪವು ಧನಾತ್ಮಕವಾದ ಪರಿಣಾಮವನ್ನು ಬೀರುತ್ತದೆ.

ನೈಸರ್ಗಿಕವಾಗಿ ಸಿಗುವ ವಸ್ತುಗಳಿಗೆ ಅದರದ್ದೇ ಆದ ಹಿರಿಮೆ ಇದೆ. ಅದಕ್ಕೊಂದಷ್ಟು ಪುರಾಣ, ಇತಿಹಾಸಗಳೂ ಇರುತ್ತದೆ. ಇಂತಹ ಶ್ರೇಷ್ಠತೆಯೊಂದಿಗೆ ಗುರುತಿಸಿಕೊಂಡಿರುವುದರಲ್ಲಿ ಜೇನುತುಪ್ಪ ಕೂಡ ಒಂದು. ಈ ಜೇನುತುಪ್ಪದ ರುಚಿ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ? ಎಷ್ಟು ಸಿಹಿಯೋ ಅಷ್ಟೇ ಹೆಸರುವಾಸಿಯಾಗಿರುವಂತದ್ದು. ಇದೀಗ ಕೊರೊನಾ ಕಾಲದಲ್ಲಂತೂ ಎಲ್ಲರ ಮನೆಯ ಮುಖ್ಯ ಅತಿಥಿಯಾಗಿದೆ ನೋಡಿ.

ಜೇನುತುಪ್ಪದಲ್ಲಿನ ವಿಶಿಷ್ಟ ಔಷಧಿಯ ಗುಣಗಳು

ಜೇನುತುಪ್ಪ ಇಂದಿಗೂ ಅಳಿಯದೆ ಉಳಿಯಲು ಮುಖ್ಯ ಕಾರಣ ಇದು ಬೇರೆ ಔಷಧಿಗಳಂತ್ತಲ್ಲದೇ ದೀರ್ಘಕಾಲದ ವರೆಗೆ ಬಾಳಿಕೆ ಬರುತ್ತದೆ ಮತ್ತು ಉಪಯೋಗಕ್ಕೆ ಅನುಕೂಲಕರವಾಗಿರುತ್ತದೆ ಎನ್ನುವುದು ಆಗಿದೆ.

ಜೇನುತುಪ್ಪವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ರಕ್ತಕಣಗಳ ಮೇಲೆ ಪ್ರಯೋಜನಕಾರಿ ಪರಿಣಾಮ ಬೀರುತ್ತದೆ ಮತ್ತು ರಕ್ತದ ಹಿಮೋಗ್ಲೋಬಿನ್ ಮಟ್ಟವು ಹೆಚ್ಚಾಗುತ್ತದೆ. ಆ ಮೂಲಕ ರಕ್ತಹೀನತೆಯನ್ನು ಕಡಿಮೆ ಮಾಡುತ್ತದೆ. ಯೋಗಾಭ್ಯಾಸ ಮಾಡುವ ಮೊದಲು ನೀರಿನಲ್ಲಿ ಜೇನುತುಪ್ಪವನ್ನು ಬೆರೆಸಿ ಕುಡಿಯುವುದರಿಂದ ದೈಹಿಕ ಸ್ಥಿತಿ ಉತ್ತಮಗೊಳ್ಳುತ್ತದೆ. ಇದರ ಜೊತೆಗೆ ದೇಹದ ತೂಕ ನಿರ್ವಹಣೆಗೆ ಅನುಕೂಲವಾಗಿದೆ.

ಪುರಾಣಗಳಲ್ಲಿ ಜೇನಿನ ಆರೋಗ್ಯಕರ ಗುಣಗಳ ಬಗ್ಗೆ ಉಲ್ಲೇಖವಿದೆ. ವಿಶ್ವದಾದ್ಯಂತ ಜೇನನ್ನು ಕೃಷಿ ಮಾಡಲಾಗುತ್ತದೆ. ಜೇನುಸಾಕಣೆಯ ಇತಿಹಾಸ ಸುಮಾರು ಕ್ರಿಸ್ತಪೂರ್ವ ಏಳುನೂರಕ್ಕೂ ಹಿಂದಿನದು ಎಂದು ತಿಳಿದುಬರುತ್ತದೆ. ಜೇನು ಸವಿಯುವುದು ಜೇನುಹುಳಗಳ ಆಹಾರವನ್ನು ಕದ್ದಂತೆ ಎಂಬ ಅಪವಾದವೂ ಇದೆ. ವೈಜ್ಞಾನಿಕವಾಗಿ ಜೇನು ಮಾನವನ ದೇಹಕ್ಕೆ ಉತ್ತಮವಾದ ಆಹಾರದ ಜೊತೆ ಉತ್ತಮವಾದ ಔಷಧಿಯೂ ಆಗಿದೆ. ಇದರ ಸರಿಯಾದ ಬಳಕೆಯಿಂದ ಹಲವು ರೋಗಗಳನ್ನು ಬರದಂತೆ ತಡೆಗಟ್ಟಬಹುದು.

  • ಜೇನಿನಲ್ಲಿ ಕೊಲೆಸ್ಟ್ರಾಲ್ ಇಲ್ಲದೇ ಇರುವ ಕಾರಣ ಇದರ ಸೇವನೆಯಿಂದ ಕೊಲೆಸ್ಟಾಲ್ ಏರುವ ಸಂಭವ ಇಲ್ಲವೇ ಇಲ್ಲ. ಬದಲಿಗೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಸಂತುಲಿತ ಪ್ರಮಾಣದಲ್ಲಿರಿಸಲು ನೆರವಾಗುತ್ತದೆ. ಇದರ ಆಂಟಿ ಆಕ್ಸಿಡೆಂಟು ಗುಣ ದೇಹದಲ್ಲಿ ಸಂಗ್ರಹವಾಗಿದ್ದ ಹೆಚ್ಚುವರಿ ಕೊಲೆಸ್ಟ್ರಾಲ್ ಅನ್ನು ನಿವಾರಿಸಲು ನೆರವಾಗುವ ಮೂಲಕ ಆರೋಗ್ಯವನ್ನು ವೃದ್ಧಿಸುತ್ತದೆ.
  • ಚರ್ಮದ ಮೇಲೆ ಕಂಡುಬರುವ ಅನಗತ್ಯ ಕೂದಲನ್ನು ತೆಗೆದುಹಾಕಲು, ನಿಂಬೆ ರಸದೊಂದಿಗೆ ಜೇನುತುಪ್ಪವನ್ನು ಮಿಶ್ರಣ ಮಾಡಿ ಮತ್ತು ಚರ್ಮದ ಮೇಲೆ ಲೇಪಿಸಿ,ಇದು ಅನಗತ್ಯ ಕೂದಲನ್ನು ತೆಗೆದುಹಾಕುತ್ತದೆ ಮತ್ತು ಚರ್ಮದ ಕೂದಲನ್ನು ಮೃದುಗೊಳಿಸುತ್ತದೆ.
  • ಮುಖದ ಮೇಲಿನ ಕಲೆಗಳ ಸಮಸ್ಯೆಯನ್ನು ನಿವಾರಿಸಲು, ಕಲೆಗಳಿಗೆ ಹಸಿ ಜೇನುತುಪ್ಪವನ್ನು ಹಚ್ಚಿ ಬ್ಯಾಂಡೇಜ್ ಮಾಡಿ ಬೆಳಿಗ್ಗೆ ಎದ್ದನಂತರ ಬ್ಯಾಂಡ್ ಅನ್ನು ತೆಗೆದು ಮುಖವನ್ನು ತೊಳೆಯಿರಿ.
  • ನಿಂಬೆ ಮತ್ತು ಜೇನುತುಪ್ಪ: ಉಗುರುಬೆಚ್ಚಗಿನ ನೀರು ಮತ್ತು ನಿಂಬೆ ರಸದೊಂದಿಗೆ ಜೇನುತುಪ್ಪವನ್ನು ಸೇವಿಸುವುದು ಅದರಲ್ಲೂ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಉತ್ತಮವೆಂದು ಪರಿಗಣಿಸಲಾಗುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುವುದರ ಜೊತೆಗೆ, ಇದು ತೂಕವನ್ನು ಕಡಿಮೆ ಮಾಡುತ್ತದೆ. ದೇಹವನ್ನು ಹೈಡ್ರೀಕರಿಸುತ್ತದೆ ಮತ್ತು ಸೌಂದರ್ಯವನ್ನು ಹೆಚ್ಚಿಸುತ್ತದೆ.
  • ಒಣ ಖರ್ಜೂರ ಮತ್ತು ಜೇನುತುಪ್ಪ: ಒಣ ಖರ್ಜೂರದಲ್ಲಿ ನಾರಿನಂಶ, ಕಾರ್ಬೋಹೈಡ್ರೇಟ್‌ಗಳು, ಕ್ಯಾಲ್ಸಿಯಂ ಮುಂತಾದ ಹಲವು ವಿಧದ ಪೋಷಕಾಂಶಗಳು ಕಂಡುಬರುತ್ತವೆ. ಆದ್ದರಿಂದ ಇವುಗಳನ್ನು ಜೇನುತುಪ್ಪದೊಂದಿಗೆ ಸೇರಿಸಿದಾಗ ಇವೆರಡರ ಗುಣಗಳು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಇದು ಮುಖ್ಯವಾಗಿ ನೆನಪಿನ ಶಕ್ತಿ, ದೈಹಿಕ ಶಕ್ತಿಯನ್ನು ಸುಧಾರಿಸುತ್ತದೆ ಮತ್ತು ಹಸಿವನ್ನು ಹೆಚ್ಚಿಸುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ