ಮಂಗಳವಾರ, ಮೇ 14, 2024
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಳೆಯಿಂದ ಕಾಂಗ್ರೆಸ್ ನಿಂದ ಭಾರತ್ ಜೋಡೋ ಐಕ್ಯತಾ ರ‍್ಯಾಲಿ

Twitter
Facebook
LinkedIn
WhatsApp
ಬಿಜೆಪಿಯವರು ಜೆಡಿಎಸ್‌ಗೆ  ಟೋಪಿ ಹಾಕಿದ್ದಾರೆ: ಸಿದ್ದರಾಮಯ್ಯ

ನವದೆಹಲಿ,ಸೆ .6- ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ನಾಳೆಯಿಂದ ಭಾರತ್ ಜೋಡೋ ಐಕ್ಯತಾ ರ‍್ಯಾಲಿಯನ್ನು ಆರಂಭಿಸುತ್ತಿದೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಾಳೆ ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭಗೊಳ್ಳುವ ಯಾತ್ರೆ 3570 ಕಿ.ಮೀ ದೂರ ಕ್ರಮಿಸಲಿದೆ.

12 ರಾಜ್ಯಗಳಲ್ಲಿ 150 ದಿನ ಯಾತ್ರೆ ಹಾದುಹೋಗಲಿದ್ದು, ಕನ್ಯಾಕುಮಾರಿಯಿಂದ ತಿರುವನಂತಪುರಂ, ಕೊಚ್ಚಿ, ನೀಲಂಬೂರು, ಮೈಸೂರು, ಬಳ್ಳಾರಿ, ರಾಯಚೂರು, ನಿಸಾರಾಬಾದ್, ನಾಂದೇಡ್ ಇಂದೋರ್, ಕೋಲ್ಕತ್ತಾ, ಗೌಸಾ, ಹಲ್ವಾರ್, ಬುಲಂದೇಶ್ವರ್, ದೆಹಲಿ, ಅಂಬೋಲ, ಪಠಾಣ್‍ಕೋಟ್, ಜಮ್ಮು, ಶ್ರೀನಗರದಂತಹ ಪ್ರಮುಖ ಸ್ಥಳಗಳನ್ನು ಹಾದುಹೋಗಲಿದೆ.

ರ್ಯಾಲಿಯಲ್ಲಿ ಸೇರ್ಪಡೆಯಾಗುವವರಲ್ಲಿ ಭಾರತ ಯಾತ್ರಿಗಳು, ಪ್ರಾದೇಶಿಕ ಯಾತ್ರಿಗಳು ಮತ್ತು ಅತಿಥಿ ಯಾತ್ರಿಗಳು ಎಂದು ವಿಭಜಿಸಲಾಗಿದೆ. ಭಾರತ ಯಾತ್ರಿಗಳು ರಾಹುಲ್ ಗಾಂಧಿ ಅವರ ಜೊತೆ ಆರಂಭದಿಂದಲೂ ಕೊನೆಯವರೆಗೂ ಹೆಜ್ಜೆ ಹಾಕಲಿದ್ದಾರೆ. ಪ್ರಾದೇಶಿಕ ಯಾತ್ರಿಗಳು ಆಯಾ ರಾಜ್ಯಗಳ ವಲಯದಲ್ಲಿ ಸೇರ್ಪಡೆಯಾಗಲಿದ್ದಾರೆ. ಇನ್ನು ಅತಿಥಿ ಯಾತ್ರಿಗಳು ಕಾಲಕಾಲಕ್ಕೆ ಯಾತ್ರೆಗೆ ಜೊತೆಗೂಡಲಿದ್ದಾರೆ.  ನಾಳೆ ರಾಹುಲ್ ಗಾಂಧಿ ಅವರು ತಮಿಳುನಾಡಿನಲ್ಲಿ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಭೂಮಿಗೆ ಭೇಟಿ ನೀಡಿ ನಮನ ಸಲ್ಲಿಸುವ ಮೂಲಕ ಕನ್ಯಾಕುಮಾರಿಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ಮಧ್ಯಾಹ್ನದ ಬಳಿಕ ಯಾತ್ರೆ ಆರಂಭಿಸಲಿದ್ದಾರೆ.

ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಮಹಾರಾಷ್ಟ್ರ ಸೇರಿದಂತೆ ದಕ್ಷಿಣ ವಲಯ ರಾಜ್ಯಗಳ ಪ್ರಮುಖ ನಾಯಕರು ಯಾತ್ರೆಯ ಆರಂಭದಲ್ಲಿ ಜೊತೆಗೂಡಲಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ, ಅಗತ್ಯ ವಸ್ತುಗಳ ಮೇಲೆ ಜಿಎಸ್‍ಟಿ ಹೇರಿಕೆ, ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಜನರನ್ನು ತಲುಪಲು ಯಾತ್ರೆ ನಡೆಸಲಾಗುತ್ತಿದೆ. ಯಾತ್ರೆ ನಡುವೆ ಮಧ್ಯಾಹ್ನ ವಿಶ್ರಾಂತಿ ಸಮಯದಲ್ಲಿ ರೈತರು, ಕಾರ್ಮಿಕರು, ಉದ್ಯಮಿಗಳು ಸೇರಿದಂತೆ ವಿವಿಧ ವಲಯಗಳ ಮುಖಂಡರ ಜೊತೆ ಸಂವಾದ ನಡೆಸಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ