ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ : ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ಟೀಕೆ

Twitter
Facebook
LinkedIn
WhatsApp
‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ : ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ಟೀಕೆ

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ ಬಿ.ಎಸ್ ಯಡಿಯೂರಪ್ಪ ಜೈಲು ಸೇರಿದ್ದು ಎನ್ನುವುದು ನೆನಪಿರಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಡಿರುವ ಭಾಷಣಕ್ಕೆ ಸಾಮಾಜಿಕ ಮಾಧ್ಯಮದ ಮೂಲಕ ತಿರುಗೇಟು ನೀಡಿರುವ ಅವರು, “ಧಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು..? ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ..?” ಎಂದು ಕುಟುಕಿದ್ದಾರೆ.

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ : ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ಟೀಕೆ

“ಮುಖ್ಯಮಂತ್ರಿ ಬೊಮ್ಮಾಯಿ ಅವರೇ ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು, ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ” ಎಂದು ಸವಾಲು ಹಾಕಿದ್ದಾರೆ.
“ನನ್ನ ಆಡಳಿತದ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ” ಎಂದು ಕುಹಕವಾಡಿದ್ದಾರೆ.
“ನನ್ನ ಅಧಿಕಾರವಧಿಯ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಧಮ್ಕಿ ಹಾಕುವ ಬದಲು ಧಮ್ ಇದ್ದರೆ ಮೊದಲು ಆ ಕೆಲಸ ಮಾಡಿ. ನಾನು ಅದನ್ನು ಎದುರಿಸಲು ಸದಾ ಸಿದ್ಧ. ಈ ಬ್ಲಾಕ್ ಮೇಲ್ ತಂತ್ರಗಳನ್ನೆಲ್ಲ ನಿಮ್ಮವರ ಮೇಲೆ ಬಳಸಿಕೊಳ್ಳಿ” ಎಂದು ತಿಳಿಸಿದ್ದಾರೆ.
“ನಮ್ಮ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೊದಲು ನಿಮ್ಮ ನಾಯಕರುಗಳ ಮೇಲೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಸಾಲು ಸಾಲು ಹಗರಣಗಳನ್ನು ಇತ್ಯರ್ಥ ಮಾಡಿಕೊಂಡು ಬನ್ನಿ.‘ ನೀವು ಬೀಸುವ ಕತ್ತಿ ನಿಮ್ಮ ಕುತ್ತಿಗೆಯನ್ನೇ ಕೊಯ್ಯದಿರಲಿ” ಎಂದು ಆಶಿಸಿದ್ದಾರೆ.

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ : ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ಟೀಕೆ

“ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ ಬಸವರಾಜ ಬೊಮ್ಮಾಯಿಯವರೇ..? ನಮ್ಮ ಪಕ್ಷ ಸಿದ್ಧ ಇದೆ. ನೀವು ಸಿದ್ಧ ಇದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ ತಿಳಿಸಿ, ನಾನು ಬರ್ತೇನೆ. ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ” ಎಂದಿದ್ದಾರೆ.
ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ ಬೊಮ್ಮಾಯಿಯವರೇ? ನಿಮಗೆ ಆ ಧಮ್ ಇಲ್ಲ. ಕೊನೆಗೆ ಹಿಂದು-ಮುಸ್ಲಿಮ್, ಮಂದಿರ ಮಸೀದಿ, ಹಿಜಾಬ್ –ಕೇಸರಿ ಶಾಲುಗಳ ವಿವಾದದಲ್ಲಿಯೆ ನಿಮ್ಮ ಪ್ರಚಾರ ಕೊನೆಗೊಳ್ಳುವುದು. ಬೇರೆ ದಾರಿ ನಿಮಗಿಲ್ಲ ಎಂದು ತಿಳಿಸಿದ್ದಾರೆ.
ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, “ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುತ್ತೇವೆ. ರಾಜ್ಯದಾದ್ಯಂತ ಇಂಥ ಹಲವು ಸಮಾವೇಶ ನಡೆಸುತ್ತೇವೆ. ತಾಕತ್ತಿದ್ದರೆ…ಧಮ್ಮಿದ್ದರೆ…ನಿಲ್ಲಿಸಿ ನೋಡೋಣ. ನಿಮ್ಮ ಹಣಬಲದಿಂದ ಏನೂ ಮಾಡಲಿಕ್ಕೆ ಸಾಧ್ಯವಿಲ್ಲ. ನೀವು ಮಾಡಿರುವ ಎಲ್ಲ ಹಗರಣಗಳನ್ನು, ನಿಮ್ಮ ನಿಜ ಸ್ವರೂಪವನ್ನು ಕರ್ನಾಟಕದ ಜನತೆ ಮುಂದಿಡುತ್ತೇವೆ” ಎಂದಿದ್ದರು.
“2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕನ್ನಡ ನಾಡಿನ ಸೇವೆಗಾಗಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಮಲ ಅರಳಿಸಲಿದೆ. ಇಂದು ನೀವು (ಸಭಿಕರು) ಆ ಸಂದೇಶ ನೀಡಿದ್ದೀರ. ತಾವು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬೆಂಬಲದಿಂದ 2019ರಲ್ಲಿ ಅತಿ ಹೆಚ್ಚು ಸ್ಥಾನ ಬಿಜೆಪಿಗೆ ಕೊಟ್ಟಿದ್ದೀರಾ; ನ್ಯಾಯಯುತವಾಗಿ ಯಡಿಯೂರಪ್ಪ ಆಗಲೇ ಮುಖ್ಯಮಂತ್ರಿಯಾಗಬೇಕಿತ್ತು. ಕಾಂಗ್ರೆಸ್ ನಾಯಕರು ವಾಮಮಾರ್ಗದಿಂದ, ಸಂವಿಧಾನಬಾಹಿರವಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕೆಲಸ ಮಾಡಿದರು” ಎಂದು ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ