ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ನಡಿಗೆ ಅಚ್ಚುಕಟ್ಟು: ಡಿಕೆಶಿ

Twitter
Facebook
LinkedIn
WhatsApp
ಕೆಪಿಸಿಸಿ ಚುನಾವಣೆ- ಪಕ್ಷದ ತೀರ್ಮಾನಕ್ಕೆ ಬದ್ಧ

ಅಂಬೇಡ್ಕರ್‌ ಭವನದಲ್ಲಿ ನಡೆದ ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸಂಯೋಜಕದ ಸಭೆಯಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ಸಿದ್ದರಾಮಯ್ಯ ಜನ್ಮದಿನ ಕಾರ್ಯಕ್ರಮ ಮಾಡಿದ್ದರು. ವೇದಿಕೆಯ ಮೇಲಿರುವ ಬಸವರಾಜ ರಾಯರೆಡ್ಡಿ ನೇತೃತ್ವದಲ್ಲೇ ಅದನ್ನು ಮಾಡಿದ್ದರು.

ಕಾರ್ಯಕ್ರಮಕ್ಕೆ ಹೆಚ್ಚು ಜನರೂ ಬಂದಿದ್ದರು. ಆದರೆ ಸಂಚಾರದಟ್ಟಣೆ ನಿರ್ವಹಣೆ ಮಾಡಲು ವಿಫಲವಾಗಿದ್ದರು. ಹೀಗಾಗಿಯೇ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ಸಂಚಾರದಟ್ಟಣೆ ಸಮಸ್ಯೆಯೇ ಆಗದಂತೆ ಕ್ರಮ ಕೈಗೊಂಡಿದ್ದೆ ಎಂದು ಹೇಳಿದರು. ಸ್ವಾತಂತ್ರ್ಯ ನಡಿಗೆಗೆ ಕೆಲವರು ಬಂದು ಮುಖ ತೋರಿಸಿ ಹೋಗಿ ಕುಳಿತುಕೊಂಡರು. ಅದು ನನಗೆ ಗೊತ್ತಿದೆ, ಎಐಸಿಸಿಗೂ ಗೊತ್ತಿದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಬೆಂಬಲಿತ ಕೆಲ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಅಧಿವೇಶನದ ವೇಳೆ ಇಡಿ ಸಮನ್ಸ್ ಜಾರಿ ರಾಜಕೀಯ ಸಂಚು ಎಂದ ಕೆಪಿಸಿಸಿ ಅಧ್ಯಕ್ಷ

ಮಾತು ಮುಂದುವರೆಸಿದ ಅವರು, ‘ಅದೊಂದು ದಾಖಲೆಯ ಕಾರ್ಯಕ್ರಮ. ಎಷ್ಟು ಮಂದಿ ಭಾಗವಹಿಸಿದ್ದರು. ಯಾವ್ಯಾವ ವಯಸ್ಸಿನವರು, ಯಾವ್ಯಾವ ಕ್ಷೇತ್ರದಿಂದ ಭಾಗವಹಿಸಿದ್ದರು ಎಂಬ ಅಂಕಿ-ಅಂಶವೂ ನಮ್ಮ ಬಳಿ ಇದೆ. ಅಂತಹ ಕಾರ್ಯಕ್ರಮವನ್ನು ಮತ್ತೆ ಮತ್ತೆ ಮಾಡಲಾಗುವುದಿಲ್ಲ’ ಎಂದರು.

ಐಕ್ಯತಾ ಯಾತ್ರೆ ಮೂಲಕ ದೇಶದಲ್ಲಿ ಬದಲಾವಣೆ ತರಬೇಕು: ಭಾರತ ಐಕ್ಯತಾ ಯಾತ್ರೆ ಈ ದೇಶದಲ್ಲಿ ಬದಲಾವಣೆ ತರಬೇಕು. ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿ ತುಂಬಿ ಕೇಂದ್ರ ಹಾಗೂ ರಾಜ್ಯದಲ್ಲಿ ಮತ್ತೆ ಈ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದಿಂದ ರಾಹುಲ್‌ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿದೆ. ಎಲ್ಲರೂ ಒಗ್ಗಟ್ಟಾಗಿ ಐಕ್ಯತಾ ಯಾತ್ರೆಯನ್ನು ಯಶಸ್ವಿಗೊಳಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರದ ಶ್ರೇಯಸ್‌ ಕಂಫಟ್ಸ್‌ರ್‍ನಲ್ಲಿ ಭಾರತ ಐಕ್ಯತಾ ಯಾತ್ರೆಯ ಪಾದಯಾತ್ರೆ ಶಿರಾ ನಗರದ ಮೂಲಕ ಹಾದು ಹೋಗುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ ನಂತರ ಕಾರ್ಯಕರ್ತರೊಂದಿಗೆ ಚರ್ಚಿಸಿ ಮಾತನಾಡಿದರು. ಭಾರತ ಐಕ್ಯತಾ ಯಾತ್ರೆಯ ಯಶಸ್ವಿಗೆ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಪ್ರತಿ ಪಂಚಾಯಿತಿ, ಪ್ರತಿ ಹಳ್ಳಿಗೂ ಹೋಗಿ ಪ್ರತಿ ಮನೆಯವರನ್ನು ಕರೆತರಬೇಕು.

ಜೆಡಿಎಸ್‌ ಪಕ್ಷದವರಾಗಲಿ, ಬಿಜೆಪಿ ಪಕ್ಷದವರಾಗಲಿ ಎಲ್ಲರನ್ನು ಆಹ್ವಾನಿಸಿ ಮತ್ತೊಮ್ಮೆ ದೇಶಕ್ಕೆ ಬದಲಾವಣೆಯನ್ನು ಕರ್ನಾಟಕದ ಮೂಲಕ ನೀಡೋಣ. ಎಲ್ಲಾ ಧರ್ಮದ ನಾಯಕರು ಎಲ್ಲರೂ ಭಾರತ ಐಕ್ಯತಾ ಯಾತ್ರೆಗೆ ಕೈಜೋಡಿಸಿ. ರಾಜ್ಯದ ನಾಯಕರು ನಿಮ್ಮ ಗ್ರಾಮಕ್ಕೆ ಬರುತ್ತಿದ್ದಾರೆ. ನಿಮ್ಮ ಶಕ್ತಿ ಪ್ರದರ್ಶನ ತೋರಿಸಿ ಎಂದರು.

ಮಾಜಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ರಾಹುಲ್‌ ಗಾಂಧಿಯವರು ಭಾರತ ಐಕ್ಯತಾ ಯಾತ್ರೆ ಮಾಡುವ ಮೂಲಕ ಈ ದೇಶದಲ್ಲಿ ಹೊಡೆದು ಹೋಗಿರುವ ಮನಸ್ಸುಗಳನ್ನು ಒಂದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇಷ್ಟುದೊಡ್ಡಮಟ್ಟದ ಪಾದಯಾತ್ರೆ ಯಾರು ಮಾಡಿರಲಿಲ್ಲ. ಯಾತ್ರೆಯೂ ಶಿರಾ ತಾಲೂಕಿನಲ್ಲಿ ಸುಮಾರು 25 ಕಿ.ಮೀ. ಸಾಗುತ್ತದೆ.

ನಮ್ಮ ತಾಲೂಕಿನಲ್ಲಿ ರಾಹುಲ್‌ ಗಾಂಧಿಯವರು 25 ಕಿ.ಮೀ. ಪಾದಯಾತ್ರೆ ಮಾಡುತ್ತಾರೆ. ನಾವೆಲ್ಲರೂ ಅವರ ಜೊತೆ ಹೆಜ್ಜೆ ಹಾಕಿದರೆ ಮುಂದೆ ಈ ದೇಶದ ಪ್ರಧಾನಮಂತ್ರಿಯವರ ಜೊತೆ ಹೆಜ್ಜೆ ಹಾಕಿದೆ ಎಂಬುದು ನಮ್ಮ ಮನಸ್ಸಿನಲ್ಲಿ ಉಳಿಯುತ್ತದೆ. ತಮಿಳುನಾಡು, ಕೇರಳದಲ್ಲಿ ಸಹಸ್ರಾರು ಜನ ಪಾಲ್ಗೊಂಡಿದ್ದಾರೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist