ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ, ಟೀಂ ಇಂಡಿಯಾ ಕೇವಲ 9 ರನ್‌ಗಳ ವಿರೋಚಿತ ಸೋಲು

Twitter
Facebook
LinkedIn
WhatsApp
ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ, ಟೀಂ ಇಂಡಿಯಾ ಕೇವಲ 9 ರನ್‌ಗಳ ವಿರೋಚಿತ ಸೋಲು

ಲಖನೌ(ಅ.06):  ಸೌತ್ ಆಫ್ರಿಕಾ ವಿರುದ್ದದ ಅಂತಿಮ ಟಿ20 ಪಂದ್ಯದಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ ಇದೀಗ ಮೊದಲ ಏಕದಿನ ಪಂದ್ಯದಲ್ಲೂ ಸೋಲಿನ ಕಹಿ ಅನುಭವಿಸಿದೆ. ಹಿರಿಯರಿಗೆ ವಿಶ್ರಾಂತಿ, ಹಲವರ ಅಲಭ್ಯತೆ ಟೀಂ ಇಂಡಿಯಾಗೆ ಬಹುವಾಗಿ ಕಾಡಿದೆ. ಸಂಜು ಸ್ಯಾಮ್ಸನ್ ದಿಟ್ಟ ಹೋರಾಟದಿಂದ ಟೀಂ ಇಂಡಿಯಾ ಕೊನೆ ಕ್ಷಣದಲ್ಲಿ ಸೋಲಿಗೆ ಶರಣಾಯಿತು. ಅಂತಿಮ 6 ಎಸೆತದಲ್ಲಿ ಭಾರತದ ಗೆಲುವಿಗೆ 30 ರನ್ ಅವಶ್ಯಕತೆ ಇತ್ತು. 1 ಸಿಕ್ಸರ್ ಹಾಗೂ 4 ಬೌಂಡರಿ ಸಿಡಿಸಿದರು. ಇದರೊಂದಿಗೆ ಟೀಂ ಇಂಡಿಯಾ ಕೇವಲ 9 ರನ್‌ಗಳ ವಿರೋಚಿತ ಸೋಲು ಕಂಡಿತು. ಯುವಕರನ್ನೊಳಗೊಂಡ ಶಿಖರ್ ಧವನ್ ಸೈನ್ಯ, ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸೋಲಿಗೆ ಗುರಿಯಾಗಿದೆ. ಟಿ20 ಸರಣಿ ಕೈಚೆಲ್ಲಿದ ಸೌತ್ ಆಫ್ರಿಕಾ ಇದೀಗ ಏಕದಿನದಲ್ಲಿ ಭರ್ಜರಿ ಶುಭಾರಂಭದೊಂದಿಗೆ ಟೀಂ ಇಂಡಿಯಾಗೆ ತಿರುಗೇಟು ನೀಡುವ ಸೂಚನೆ ನೀಡಿದೆ.

ಮಳೆಯಿಂದಾಗಿ ಪಂದ್ಯವನ್ನು 40 ಓವರ್‌ಗೆ ಕಡಿತಗೊಳಿಸಲಾಗಿತ್ತು. ಸೀಮಿತ ಓವರ್‌ನಲ್ಲಿ 250 ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾ ನಿರೀಕ್ಷಿತ ಆರಂಭ ಪಡೆಯಲಿಲ್ಲ. ನಾಯಕ ಶಿಖರ್ ಧವನ್ ಹಾಗೂ ಶುಭಮನ್ ಗಿಲ್ ಹೋರಾಟ ಹೆಚ್ಚು ಹೊತ್ತು ಇರಲಿಲ್ಲ. ಶಿಖರ್ ಧವನ್ ಕೇವಲ 4 ರನ್ ಸಿಡಿಸಿ ಔಟಾದರೆ, ಗಿಲ್ 3 ರನ್ ಸಿಡಿಸಿ ನಿರ್ಗಮಿಸಿದರು. 8 ರನ್‌ಗಳಿಸುವಷ್ಟರಲ್ಲೇ ಟೀಂ ಇಂಡಿಯಾ ಪ್ರಮುಖ ಎರಡು ವಿಕೆಟ್ ಕಳೆದುಕೊಂಡಿತು.  ಏಕದಿನಕ್ಕೆ ಪದಾರ್ಪಣೆ ಮಾಡಿದ ರುತುರಾಜ್ ಗಾಯಕ್ವಾಡ್ 19 ರನ್ ಸಿಡಿಸಿ ನಿರ್ಗಮಿಸಿದರು.  ಇಶಾನ್ ಕಿಶನ್ ಹೋರಾಟ 20 ರನ್‌ಗೆ ಅಂತ್ಯವಾಯಿತು. 

ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ, ಟೀಂ ಇಂಡಿಯಾ ಕೇವಲ 9 ರನ್‌ಗಳ ವಿರೋಚಿತ ಸೋಲು

51 ರನ್‌ಗಳಿಸುವಷ್ಟರಲ್ಲೇ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ಶ್ರೇಯಸ್ ಅಯ್ಯರ್ ಹೋರಾಟದಿಂದ ಟೀಂ ಇಂಡಿಯಾ ಮತ್ತೆ ಟ್ರ್ಯಾಕ್‌ಗೆ ಮರಳಿತು. ಇತ್ತ ಸಂಜು ಸ್ಯಾಮ್ಸನ್ ಕೂಡ ಉತ್ತಮ ಸಾಥ್ ನೀಡಿದರು. ಅಯ್ಯರ್ ಹೋರಾಟದ ಮೂಲಕ ಅರ್ಧಶತಕ ಸಿಡಿಸಿ ಮಿಂಚಿದರು. 37 ಎಸೆತದಲ್ಲಿ ಅಯ್ಯರ್ 50 ರನ್ ಸಿಡಿಸಿ ಔಟಾದರು. 

ಸಂಜು ಸ್ಯಾಮ್ಸನ್ ಹಾಗೂ ಶಾರ್ದೂಲ್ ಠಾಕೂರ್ ಜೊತೆಯಾಟ ಟೀಂ ಇಂಡಿಯಾ ಕೈಹಿಡಿಯಿತು. ಸ್ಯಾಮ್ಸನ್ ಹೋರಾಟ ಮುಂದುವರಿಸಿದರೆ, ಠಾಕೂರ್ 33 ರನ್ ಸಿಡಿಸಿ ನಿರ್ಗಮಿಸಿದರು. ಇದರ ಬೆನ್ನಲ್ಲೇ ಕುಲ್ದೀಪ್ ಯಾದವ್ ಹಾಗೂ ಆವೇಶ್ ಖಾನ್ ವಿಕೆಟ್ ಪತನಗೊಂಡಿತು. ಆದರೆ ಸ್ಯಾಮನ್ಸ್ ಏಕಾಂಗಿ ಹೋರಾಟ ನೀಡಿದರು. ಅರ್ಧಶಥಕ ಸಿಡಿಸಿ ಗೆಲುವಿಗಾಗಿ ಇನ್ನಿಲ್ಲದ ಪ್ರಯತ್ನ ನಡೆಸಿದರು. ಭಾರತದ ಗೆಲುವಿಗೆ ಅಂತಿಮ 6 ಎಸೆತದಲ್ಲಿ 30 ರನ್ ಅವಶ್ಯಕತೆ ಇತ್ತು. ಕೇವಲ 2 ವಿಕೆಟ್ ಮಾತ್ರ ಉಳಿದಿತ್ತು. 

ಸಂಜು ಸ್ಯಾಮ್ಸನ್ ಮೊದಲ ಎಸೆತ ಸಿಕ್ಸರ್ ಸಿಡಿಸಿದರು. ಬಳಿಕ ಸತತ 2 ಬೌಂಡರಿ ಸಿಡಿಸಿದ ಸ್ಯಾಮ್ಸನ್, 4ನೇ ಎಸೆತದಲ್ಲಿ ರನ್ ಗಳಿಸಲು ಸಾಧ್ಯವಾಗಲಿಲ್ಲ. 5ನೇ ಎಸೆತದಲ್ಲಿ ಮತ್ತೊಂದು ಬೌಂಡರಿ ಸಿಡಿಸಿದರೆ, ಅಂತಿಮ ಎಸೆತದಲ್ಲಿ 1 ರನ್ ಸಿಡಿಸಿದರು. ಇದರೊಂದಿಗೆ ಅಂತಿಮ ಓವರ್‌ನಲ್ಲಿ 20 ರನ್ ಸಿಡಿಸಿದರು. ಈ ಮೂಲಕ ಸೌತ್ ಆಫ್ರಿಕಾ 9 ರನ್ ಗೆಲುವು ಕಂಡಿತು. ಸರಣಿಯಲ್ಲಿ 1-0 ಮುನ್ನಡೆ ಪಡೆಯಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ