ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರಕ್ಕೆ ಕತ್ತರಿ....! ಪರವಾನಿಗೆ. ಇ- ಸ್ವತ್ತು ಸಹಿ ಪಿಡಿಒಗಳಿಗೆ

Twitter
Facebook
LinkedIn
WhatsApp
ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರಕ್ಕೆ ಕತ್ತರಿ….! ಪರವಾನಿಗೆ. ಇ- ಸ್ವತ್ತು ಸಹಿ ಪಿಡಿಒಗಳಿಗೆ

ಹಣಕಾಸು ನಿರ್ವಹಣೆಯ ಹೊಣೆಗಾರಿಕೆಯಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಹೊರಗಿಡಲು ಸರ್ಕಾರ ನಿರ್ಧರಿಸಿದ್ದು ವ್ಯವಹಾರದ ಎಲ್ಲಾ ಚೆಕ್ಕುಗಳಿಗೂ ಸಹಿ ಮಾಡುವ ಅಧಿಕಾರವನ್ನು ಪಿಡಿಒ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಿಗೆ (ಎಸ್‌ಡಿಎಎ) ನೀಡಲಾಗಿದೆ. ಈ ಸಂಬಂಧ ರೂಪಿಸಲಾದ ನಡುವಳಿಕೆಗಳನ್ನು ಜಾರಿಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಆದಿನಿಯಮ 1993ರ ಪ್ರಕರಣಗಳಿಗೆ ತಿದ್ದುಪಡಿ ಮತ್ತು ಗ್ರಾಮ ಪಂಚಾಯಿತಿ ನೌಕರರ ಸೇವಾ ವಿಷಯಗಳ ಕುರಿತು ಗ್ರಾಮೀಣ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ನಡವಳಿಕೆಗಳನ್ನು ರೂಪಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಗ್ರಾಮ ಪಂಚಾಯಿತಿ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಕ್ಕೆ 2006ರಲ್ಲಿ ತಂದಿದ್ದ ತಿದ್ದುಪಡಿ ಯಂತೆ ಗ್ರಾಮ ಪಂಚಾಯಿತಿಯ ಹಣಕಾಸಿನ ವ್ಯವಹಾರವನ್ನು ಸರ್ಕಾರ ಸೂಚಿಸುವ ಅಧಿಕಾರಿಗಳು ಅಥವಾ ಪ್ರಾಧಿಕಾರ ನಿರ್ವಹಿಸಬಹುದು. ಇಂತಹ ಅಧಿಕಾರವನ್ನು ಇಲ್ಲಿಯವರೆಗೂ ಸ್ಥಳೀಯ ಆಡಳಿತ ಚುನಾಯಿತ ಮುಖ್ಯಸ್ಥರಾದ ಅಧ್ಯಕ್ಷರಿಗೂ ನೀಡಲಾಗಿತ್ತು. ಉದ್ಯೋಗ ಖಾತ್ರಿ ವಿವಿಧ ವಸತಿ ಯೋಜನೆಗಳ ಅನುಷ್ಠಾನ ಹಣಕಾಸಿನ ನಿಧಿ ಪಂಚಾಯಿತಿ ತೆರಿಗೆ ಖರ್ಚು ವೆಚ್ಚಗಳ ಎಲ್ಲಾ ಚೆಕ್ಕುಗಳಿಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಹಿಂದೆ ಕಾರ್ಯದರ್ಶಿ) ಹಾಗೂ ಅಧ್ಯಕ್ಷರ ಜಂಟಿ ಸಹಿ ಕಡ್ಡಾಯವಾಗಿತ್ತು. ಈಗ ಸರ್ಕಾರ 2006ರಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ. ಅಧ್ಯಕ್ಷರ ಸಹಿ ಅಧಿಕಾರ ಹಿಂಪಡೆಯಲು ಹೊಸದಾಗಿ ನಡುವಳಿಕೆ ರೂಪಿಸಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರಕ್ಕೆ ಕತ್ತರಿ….! ಪರವಾನಿಗೆ. ಇ- ಸ್ವತ್ತು ಸಹಿ ಪಿಡಿಒಗಳಿಗೆ

ಅಧ್ಯಕ್ಷರ ಅಧಿಕಾರ ಮೊಟುಕು ಏಕೆ?:
ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ನೀಡಲಾಗಿದ್ದ ಸಹಿ ಅಧಿಕಾರವನ್ನು ಹಿಂಪಡೆಯಲು ಸರ್ಕಾರ ಪ್ರಮುಖವಾಗಿ ಎರಡು ಕಾರಣಗಳನ್ನು ಪಟ್ಟಿ ಮಾಡಿದೆ. ವಿವಿಧ ಯೋಜನೆಗಳು ಕಾರ್ಯ ಕ್ರಮಗಳ ಬಿಲ್ಲು ಪಾವತಿ ಮಾಡಲು ಲಂಚ ಪಡೆಯುವಾಗ ರಾಜ್ಯದ ಹಲವು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಲವು ಪ್ರಕರಣಗಳಲ್ಲಿ ವಿಳಂಬವಾಗಿ ಬಿಲ್ ಪಾವತಿ ಮಾಡುತ್ತಿರುವುದು ಸರ್ಕಾರ ಗಮನಕ್ಕೆ ಬಂದಿದೆ ಅಧ್ಯಕ್ಷರು ಚುನಾಯಿತ ಪ್ರತಿನಿಧಿಯಾಗಿದ್ದು ಹಣಕಾಸಿನ ವ್ಯವಹಾರಗಳಿಗೆ ಹೊಣೆಗಾರರಲ್ಲದ ಕಾರಣ ಸರ್ಕಾರಿ ನೌಕರರಾದ ಪಿಡಿಒ. ಎಸ್ ಡಿಎಎ ಸ್ಥಾನ ಕಾಲಿ ಇದ್ದರೆ ಪಿಡಿಒ ಜೊತೆಗೆ ಕಾರ್ಯದರ್ಶಿ ಜಂಟಿ ಸಹಿ ಮಾಡಬೇಕು ಎಂದು ಸೂಚಿಸಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ತೆರಿಗೆ ನಿರ್ಧಾರ ಹೊಣೆಗಾರಿಕೆಯೂ ಮೊಟಕು:

ಇದುವರೆಗೂ ಗ್ರಾಮ ಪಂಚಾಯಿತಿ ನಿರ್ಣಯ ತೆಗೆದುಕೊಂಡು ನಂತರ ಪಂಚಾಯಿತಿ ನಿರ್ಣಯ ಸಂಖ್ಯೆ ದಿನಾಂಕ ನಮೂದಿಸಿ ಇ. ಸ್ವತ್ತು ತಂತ್ರಾಂಶದ ಮೂಲಕ ತೆರಿಗೆ ನಿರ್ಧಾರ ಪಟ್ಟಿಯನ್ನು ವಿತರಿಸಲಾಗುತ್ತಿತ್ತು ಪಂಚಾಯಿತಿ ಸಭೆಗಳು ಕಾಲಕಾಲಕ್ಕೆ ನಡೆಯದ ಕಾರಣ ನಮೂನೆ ವಿತರಿಸುವ ಸಂಪೂರ್ಣ ಅಧಿಕಾರವನ್ನು ಪಿಡಿಒಗಳಿಗೆ ನೀಡಲಾಗಿದೆ. ರಾಜ್ಯದಲ್ಲಿ 5963 ಗ್ರಾಮ ಪಂಚಾಯಿತಿಗಳಿದ್ದು 91.437 ಗ್ರಾಮ ಪಂಚಾಯಿತಿ ಸದಸ್ಯರಿದ್ದಾರೆ.

ಸದಸ್ಯರ ಅಧಿಕಾರವೂ ಮೊಟಕು
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗೃಹ ವಾಣಿಜ್ಯ ಕಟ್ಟಡ ಕಾಮಗಾರಿಗಳು ಕೈಗಾರಿಕೆ ಗಣಿಗಾರಿಕೆ ಅಂಗಡಿ ಹೋಟೆಲ್ ಮತ್ತಿತರ ವಾಣಿಜ್ಯ ವಹಿವಾಟುಗಳ ಆರಂಭಕ್ಕೆ ಪರವಾನಿಗೆ ಇ. ಸತ್ತು (ನಮೂನೆ 9 11ಎ 11 ಬಿ) ನೀಡುವ ಕುರಿತು ಗ್ರಾಮ ಪಂಚಾಯಿತಿ ಸದಸ್ಯರ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತಿತ್ತು ಪಂಚಾಯತ್ ರಾಜ್ ಕಾಯ್ದೆಯ 64 ರಿಂದ 70ರ ವರೆಗಿನ ನಿಯಮಗಳಿಗೆ ತಿದ್ದುಪಡಿ ತಂದು ಪರವಾನಿಗೆ ನೀಡುವ ಅಧಿಕಾರವನ್ನು ಪಿಡಿಒಗಳಿಗೆ ನೀಡಲಾಗಿದೆ. ನೀಡಿದ ನಂತರ ಸಭೆಯ ಗಮನಕ್ಕೆ ತರಲು ಸೂಚಿಸಲಾಗಿದೆ. ಗ್ರಾಮ ಪಂಚಾಯಿತಿ ಸಭೆಗಳು ಸಕಾಲದಲ್ಲಿ ನಡೆಯದ ಕಾರಣ ವಿಳಂಬ ತಪ್ಪಿಸಲು ಇಂತಹ ಕ್ರಮ
ಅನಿವಾರ್ಯ ಎಂದು ವಿವರಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ