ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಕ್ಕಳ ಕಳ್ಳರು ವದಂತಿಗೆ ಅಮಾಯಕ ಕಾರ್ಮಿಕ ಬಲಿ: ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ

Twitter
Facebook
LinkedIn
WhatsApp
ಮಕ್ಕಳ ಕಳ್ಳರು ವದಂತಿಗೆ ಅಮಾಯಕ ಕಾರ್ಮಿಕ ಬಲಿ: ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ

ಬೆಂಗಳೂರು: ಜಾರ್ಖಂಡ್‌ ಮೂಲದ 33 ವರ್ಷದ ಕಾರ್ಮಿಕನ ಸಾವಿನ ಹಿಂದೆ ರಾಮಮೂರ್ತಿನಗರ ಪೊಲೀಸರ ಕೈವಾಡವಿದೆ ಎಂದು  ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಮನವಿ ಸಲ್ಲಿಸಿದ್ದಾರೆ.

ಮಕ್ಕಳ ಕಳ್ಳ ಎಂಬ ಶಂಕೆಯ ಮೇಲೆ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಥಳಿಸುತ್ತಿದ್ದಾಗ ಬಂದ ಪೊಲೀಸರು ಆತನನ್ನ ಕೆದೊಯ್ದಿದ್ದಾರೆ, ಕೆಲವು ಗಂಟೆಗಳ ನಂತರ, ಆತನ ಶವ ಕೆಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.

ಪೊಲೀಸರು ಎತ್ತಿಕೊಂಡು ಹೋದ ಮೇಸ್ತ್ರಿ ಸಾವನ್ನಪ್ಪಿದ್ದರಿಂದ ಇದು ಕಸ್ಟಡಿ ಸಾವು ಎಂದು ಅರ್ಜಿಯಲ್ಲಿ ಆರೋಪಸಲಾಗಿದೆ. ಆದರೆ, ಆರೋಪ ನಿರಾಧಾರ ಎಂದು ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮೇಸ್ತ್ರಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಆರು ಜನರನ್ನು ಬಂಧಿಸಲಾಗಿದೆ. ಜಾರ್ಖಂಡ್ ಮೂಲದ ಸಂಜಯ್ ತುಡು ಎಂಬಾತ ರಾಮಮೂರ್ತಿ ನಗರದಲ್ಲಿ ಕೆಲಸ ಮಾಡುತ್ತಿದ್ದ. ರಾಮಮೂರ್ತಿನಗರ ಪೊಲೀಸ್ ವ್ಯಾಪ್ತಿಯ ದೂರವಾಣಿ ನಗರದ ಜ್ಯೋತಿ ಪುರಂನ 1ನೇ ಕ್ರಾಸ್‌ನಲ್ಲಿ ಸೆಪ್ಟೆಂಬರ್ 23 ರಂದು ಗುಂಪೊಂದು ಆತನನ್ನು ಥಳಿಸಿತ್ತು. ಮರುದಿನ ಕೆಆರ್ ಪುರಂ ಪೊಲೀಸ್ ವ್ಯಾಪ್ತಿಯ ಐಟಿಐ ಕಾಲೋನಿಯಲ್ಲಿ ಫುಟ್ ಪಾತ್ ಮೇಲೆ ಶವವಾಗಿ ಪತ್ತೆಯಾಗಿದ್ದ.. ಹೆಚ್ಚಿನ ತನಿಖೆ ಮತ್ತು ಮರಣೋತ್ತರ ಪರೀಕ್ಷೆಯ ಫಲಿತಾಂಶಗಳು ಪೊಲೀಸರು ಪ್ರಕರಣವನ್ನು ಅಸಹಜ ಸಾವು ಎಂದು ಪೊಲೀಸರು ಬದಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತನನ್ನು ಹೊಯ್ಸಳ ಗಸ್ತು ವಾಹನದಲ್ಲಿ ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಸಾಮಾಜಿಕ ಹೋರಾಟಗಾರ ವಿ.ಪರಮೇಶ್ ಹೇಳಿದ್ದಾರೆ. ಆತನ ಮೇಲೆ ಹಲ್ಲೆ ನಡೆದಿದ್ದರೂ ಹೊಯ್ಸಳ ವಾಹನದಲ್ಲಿ ಕುಳಿತುಕೊಂಡು ಹೋಗಲು ಸಾಧ್ಯವಾಯಿತು, ಆತ ಚೆನ್ನಾಗಿಯೇ ಇದ್ದ, ಆದರೆ ಕೆಲವೇ ಗಂಟೆಗಳಲ್ಲಿ ಆತನ ದೇಹ ನೆರೆಯ ಪೊಲೀಸ್ ಠಾಣೆ ಬಳಿ ಪತ್ತೆಯಾಗಿದೆ. ಇದು ಕೊಲೆಯಲ್ಲದೇ ಬೇರೇನೂ ಅಲ್ಲ, ಪೊಲೀಸರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಸಾಕ್ಷ್ಯವನ್ನು ತಿರುಚಿದ್ದಾರೆ, ತಪ್ಪಿತಸ್ಥ ಅಧಿಕಾರಿಗಳಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ.

ಪೊಲೀಸರ ಮೇಲಿನ ಆರೋಪಗಳಿಗೆ ಪ್ರತಿಕ್ರಿಯಿಸಿದ ಕಾನೂನು ಮತ್ತು ಸುವ್ಯವಸ್ಥೆ (ಪೂರ್ವ) ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ ಎ ಸುಬ್ರಹ್ಮಣ್ಯೇಶ್ವರ ರಾವ್, ಹಲ್ಲೆ ನಡೆದ ಸ್ಥಳ ಮತ್ತು ಶವ ಪತ್ತೆಯಾದ ಸ್ಥಳವು 1.5 ಕಿಮೀ ವ್ಯಾಪ್ತಿಯಲ್ಲಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ವ್ಯಕ್ತಿಯನ್ನು ರಾಮಮೂರ್ತಿನಗರ ಪೊಲೀಸ್ ಠಾಣೆಗೆ ಕರೆದೊಯ್ದ ನಂತರ, ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅವರೊಂದಿಗೆ ಐದರಿಂದ 10 ನಿಮಿಷಗಳ ಕಾಲ ಮಾತನಾಡಿದರು. ಆದರೆ ವ್ಯಕ್ತಿ ಪೊಲೀಸ್ ಠಾಣೆ ಒಳಗೆ ಮತ್ತು ಹೊರಗೆ ನಡೆಯುತ್ತಲೇ ಇದ್ದ. ನಂತರ ಸ್ವಯಂಪ್ರೇರಿತವಾಗಿ ಠಾಣೆಯಿಂದ ಹೊರ ನಡೆದಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸ್ಪಷ್ಟವಾಗಿ ಗೋಚರಿಸಿದೆ. ಪ್ರಕರಣ ಸಂಬಂಧ ಆರು ಮಂದಿಯನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪರಮೇಶ್‌ ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದಾರೆ. ಈ ಕುರಿತು ಸ್ಪಷ್ಟೀಕರಣ ನೀಡಿರುವ ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ ಗುಳೇದ್‌, ‘‘ ಜನರಿಂದ ಹಲ್ಲೆಗೊಳಗಾಗಿದ್ದ ಕಾರ್ಮಿಕ ಸಂಜಯ್‌ನನ್ನು ಠಾಣೆಗೆ ಕರೆತಂದ ನಾಲ್ಕೇ ನಿಮಿಷಗಳಲ್ಲಿ ಬಿಟ್ಟು ಕಳುಹಿಸಲಾಗಿದೆ. ಈ ಕುರಿತು ಸಿಸಿಟಿವಿ ದೃಶ್ಯಾವಳಿಗಳಿವೆ. ಘಟನೆ ಬಗ್ಗೆ ಸಂಜಯ್‌ ದೂರು ನೀಡಲು ನಿರಾಕರಿಸಿದ್ದರು. ಅವರು ಸಾವನ್ನಪ್ಪಿದ್ದ ವಿಚಾರ ಕೂಡ ಕೆಲ ದಿನಗಳ ಹಿಂದಷ್ಟೇ ಗೊತ್ತಾಗಿದೆ’’ ಎಂದಿದ್ದಾರೆ

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist