ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

9ನೇ ಕ್ಲಾಸ್ ಫೇಲ್ ಆದ್ರೆ ಗುಮಾಸ್ತನಾಗಲು ಸಾಧ್ಯವಿಲ್ಲ, ಆದರೆ ತೇಜಸ್ವಿ ಬಿಹಾರದ ಉಪಮುಖ್ಯಮಂತ್ರಿ - ಪ್ರಶಾಂತ್ ಕಿಶೋರ್ ವಾಗ್ದಾಳಿ

Twitter
Facebook
LinkedIn
WhatsApp

ಪಾಟ್ನ(ಅ.08):  ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದರೆ ಅತ್ತ ಚುನಾವಣ ತಂತ್ರಗಾರ, ರಾಜಕೀಯ ನಾಯಕ ಪ್ರಶಾಂತ್ ಕಿಶೋರ್ ಬಿಹಾರದಲ್ಲಿ ಪಾದಯಾತ್ರೆ ಮೂಲಕ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ಈ ಪಾದಯಾತ್ರೆಯಲ್ಲಿ ಪ್ರಶಾಂತ್ ಕಿಶೋರ್ ನೀಡಿರುವ ಹೇಳಿಕೆ ಇದೀಗ ಬಿಹಾರ ಉಪ ಮುಖ್ಯಮಂತ್ರಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ಗೆ ಇರಿಸು ಮುರಿಸು ತಂದಿದೆ. ಲಾಲು ಪ್ರಸಾದ್ ಯಾದವ್ ಪುತ್ರ ಅನ್ನೋ ಕಾರಣಕ್ಕೆ 9ನೇ ಕ್ಲಾಸ್ ಓದಿದ ತೇಜಸ್ವಿ ಯಾದವ್ ಬಿಹಾರದ ಉಪಮುಖ್ಯಮಂತ್ರಿಯಾಗಿದ್ದಾರೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಧರ್ಮಪುರದಲ್ಲಿ ಆಯೋಜಿಸಿದ ಸಾರ್ವಜನಿಕ ರ್ಯಾಲಿಯನ್ನುದ್ದೇಶಿ ಮಾತನಾಡಿದ ಪ್ರಶಾಂತ್ ಕಿಶೋರ್, ಬಿಹಾರದ ಮೈತ್ರಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ. 

9ನೇ ಕ್ಲಾಸ್ ಫೇಲ್ ಆದ್ರೆ ಗುಮಾಸ್ತನಾಗಲು ಸಾಧ್ಯವಿಲ್ಲ, ಆದರೆ ತೇಜಸ್ವಿ ಬಿಹಾರದ ಉಪಮುಖ್ಯಮಂತ್ರಿ – ಪ್ರಶಾಂತ್ ಕಿಶೋರ್ ವಾಗ್ದಾಳಿ

ಜನಸಾಮಾನ್ಯರ ಮಕ್ಕಳು 9ನೇ ತರಗತಿ ಓದಿದಿದ್ದರೆ ಗುಮಾಸ್ತನಾಗಲು ಸಾಧ್ಯವಿಲ್ಲ. ಆದರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಶಾಸಕ 9ನೇ ತರಗತಿ ಫೇಲ್ ಆಗಿದ್ದರೂ ಅತ್ಯುನ್ನತ ಹುದ್ದೆ ಸಿಗುತ್ತಿದೆ. ಈ ವ್ಯವಸ್ಥೆಯನ್ನು ಬದಲಾಯಿಸಬೇಕು. ಇನ್ನು ಎಷ್ಟು ದಿನ ರಾಜಕಾರಣಿಗಳ ಮಕ್ಕಳು ಯಾವುದೇ ಅರ್ಹತೆ ಇಲ್ಲದೆ ಹುದ್ದೆ ಅಲಂಕರಿಸುವ ಪದ್ಧತಿ ಇರಬೇಕು. ಇದನ್ನು ಜನಸಾಮಾನ್ಯರು ಬದಲಾಯಿಸಬೇಕು ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಬಿಹಾರದಲ್ಲಿ ಜೆಡಿಯುನ ನಿತೀಶ್‌ ಕುಮಾರ್‌ ಹಾಗೂ ಆರ್‌ಜೆಡಿಯ ಲಾಲುಪ್ರಸಾದ್‌ ಯಾದವ್‌ ವಿರುದ್ಧ ಪ್ರಬಲ ರಾಜಕೀಯ ಶಕ್ತಿಯಾಗಿ ಹೊರಹೊಮ್ಮುವ ಹವಣಿಕೆಯಿಂದ ರಾಜಕೀಯ ತಂತ್ರಗಾರ ಪ್ರಶಾಂತ್‌ ಕಿಶೋರ್‌ 3500 ಕಿ.ಮೀ. ಪಾದಯಾತ್ರೆ ಆರಂಭಿಸಿದ್ದಾರೆ.

ಪಾದಯಾತ್ರೆಯು ಸುಮಾರು 12ರಿಂದ 18 ತಿಂಗಳು ನಡೆಯುವ ಸಾಧ್ಯತೆಯಿದ್ದು, ಬಿಹಾರದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತೆರಳಲಿದೆ. ಇದಕ್ಕೆ ‘ಜನ ಸುರಾಜ್‌’ ಎಂದು ಹೆಸರಿಡಲಾಗಿದ್ದು, ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬದ ದಿನ ಬಿಹಾರದ ಪಶ್ಚಿಮ ಚಂಪಾರಣ್‌ ಜಿಲ್ಲೆಯಿಂದ ಆರಂಭಗೊಂಡಿದೆ. ಈಗಾಗಲೇ ರಾಜಕೀಯ ಪ್ರವೇಶಿಸಿರುವ ಪ್ರಶಾಂತ್‌ ಕಿಶೋರ್‌, ಈ ಯಾತ್ರೆಯಲ್ಲಿ ತಮಗೆ ಸಿಗುವ ಜನಬೆಂಬಲವನ್ನು ನೋಡಿಕೊಂಡು ಬಿಹಾರದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ಹೊಂದಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಅಂಕಣ