ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Breaking: ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ವಿಧಿವಶ

Twitter
Facebook
LinkedIn
WhatsApp

ಲೀವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗೆಳೆಯನ ಸಾವಿಗೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ದ್

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ್ ಮಾಮನಿ  (56) ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ  ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆನಂದ ಮಾಮನಿ ಅವರು ಕ್ಯಾನ್ಸರ್ ಕಾಯಿಲೆಯಿಂದಾಗಿ ಕೆಲ ದಿನಗಳಿಂದ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳುರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

ಗೆಳೆಯನ ಸಾವಿಗೆ ಸಿಎಂ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ಆಸ್ಪತ್ರೆಯಲ್ಲಿ ಆನಂದ್ ಮಾಮನಿ ಅಂತಿಮ ದರ್ಶನ ಪಡೆದ ಸಿಎಂ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. 

ಕ್ರಿಯಾಶೀಲ‌ ರಾಜಕಾರಣಿಯಾಗಿದ್ದ ಮಾಮನಿ ನಮ್ಮೊಂದಿಗಿಲ್ಲ. ಎಲ್ಲದಕ್ಕಿಂತ ಹೆಚ್ಚಾಗಿ ನನ್ನ ಸ್ನೇಹಿತನನ್ನ ಕಳೆದುಕೊಂಡಿದ್ದೇನೆ. ಇತ್ತೀಚೆಗಷ್ಟೇ ಉಮೇಶ್ ಕತ್ತಿ ಅವರನ್ನ ಕಳೆದುಕೊಂಡಿದ್ದೇವೆ. ಈಗ ಮತ್ತೆ ಬೆಳಗಾವಿ ಜಿಲ್ಲೆಯ ಮತ್ತೊಬ್ಬರನ್ನ ಕಳೆದುಕೊಂಡಿದ್ದೇವೆ. ಮಾಮನಿ ಬಹಳ ಸಣ್ಣ ವಯಸ್ಸಿನಲ್ಲಿ ರಾಜಕಾರಣಕ್ಕೆ ಬಂದವರು. ಮಾದರಿ ಶಾಸಕ, ನೀರಾವರಿ, ರಸ್ತೆ, ಶಾಲಾ ಕಟ್ಟಡಗಳು ಸೇರಿ, ತಮ್ಮ ಕ್ಷೇತ್ರವನ್ನ ಪ್ರೀತಿಸುತ್ತಿದ್ದ ಶಾಸಕ ಆನಂದ್​ ಮಾಮನಿ. ಕ್ಷೇತ್ರದ ಜನರು ಕೂಡ ಅವರನ್ನು ಅಷ್ಟೇ ಪ್ರೀತಿ‌ ಮಾಡುತ್ತಿದ್ದರು.

Breaking: ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ವಿಧಿವಶ

ಮಾಮನಿ ಹಾಗೂ ನಮ್ಮ ನಡುವೆ ಉತ್ತಮ ಒಡನಾಟವಿತ್ತು. ಇಷ್ಟು ಬೇಗ ನಮ್ಮನ್ನ ಬಿಟ್ಟು ಹೋಗುತ್ತಾರೆ ಅಂದುಕೊಂಡಿರಲಿಲ್ಲ. ಸವದತ್ತಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತೆ. ಇಂದು ಸಂಜೆ ನಾಲ್ಕು ಗಂಟೆಗೆ ಸಕಲ‌ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಭಗವಂತ ಆನಂದ್ ಮಾಮನಿ ಆತ್ಮಕ್ಕೆ ಶಾಂತಿ ಕೊಡಲಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಈ ಅವಧಿಯಲ್ಲಿ ಮತ್ತೊಮ್ಮೆ ಶ್ರೀ ರೇಣುಕಾ ಯಲ್ಲಮ್ಮ ದೇವಸ್ತಾನ ವ್ಯವಸ್ಥಾಪನಾ ಸಮಿತಿ, ಯಲ್ಲಮ್ಮನಗುಡ್ಡ 2008 ರಿಂದ 2013ವರೆಗೆ ಅಧ್ಯಕ್ಷರಾದರು. ಅವರು ಮತ್ತೆ 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿದರು. ಮತ್ತೆ 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್​ ವಿಜಯ ಸಾಧಿಸಿದರು. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist