ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಟವಾಡಲೆಂದು ಕೊಟ್ಟಿದ್ದ ಮೀನನ್ನು ನುಂಗಿದ 1 ವರ್ಷದ ಮಗು...!

Twitter
Facebook
LinkedIn
WhatsApp
ಆಟವಾಡಲೆಂದು ಕೊಟ್ಟಿದ್ದ ಮೀನನ್ನು ನುಂಗಿದ 1 ವರ್ಷದ ಮಗು...!

ಶಿವಮೊಗ್ಗ : ಮಕ್ಕಳಿರುವ ಮನೆಯಲ್ಲಿ ಪೋಷಕರು ಪೋಷಣೆ ವಿಚಾರದಲ್ಲಿ ಸಣ್ಣ ಸಣ್ಣ ವಿಚಾರಗಳೂ ಬಾರಿ ಪರಿಣಾಮವನ್ನು ಬೀರುತ್ತವೆ. ಹೆಚ್ಚು ಜಾಗರೂಕತೆಯಿಂದ ನೋಡಿಕೊಳ್ಳಬೇಕಾಗುತ್ತದೆ. ಪೋಷಕರು ತಮ್ಮ ಮಗುವಿಗೆ ಆಟವಾಡಲು ಮೀನು ಕೊಟ್ಟಿದ್ದಾರೆ. ಈ ವೇಳೆ ಕ್ಷಣಾರ್ಧದಲ್ಲೇ ಮಗುವು ಮೀನು ನುಂಗಿ ಬಿಟ್ಟಿದೆ. ಇದರಿಂದಾಗಿ ಉಸಿರುಗಟ್ಟುವ ಸ್ಥಿತಿಗೆ ತಲುಪಿದ್ದ ಒಂದು ವರ್ಷದ ಮಗುವನ್ನು (Child Rescued) ವೈದ್ಯರು ಸಕಾಲದಲ್ಲಿ ಚಿಕಿತ್ಸೆ ನೀಡಿ (timely treatment by Doctors) ರಕ್ಷಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ‌ ಮಗು ಕೈಗೆ ಆಟ ಆಡಲು‌‌ ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು‌ ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮಗುವನ್ನು ಕರೆದುಕೊಂಡು ಬಂದಾಗ ತ್ವರಿತವಾಗಿ ಸ್ಪಂದಿಸಿದ ವೈದ್ಯರು ಮಗುವಿನ ಜೀವ ಉಳಿಸಲು ಎಲ್ಲ ರೀತಿಯಲ್ಲೂ ಸಹಕರಿಸಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿ ಮೀನನ್ನು ಹೊರ ತೆಗೆದಿದ್ದಾರೆ. ಒಂದು ವರ್ಷದ ಪ್ರತೀಕ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನೂ ಇದೇ ವೇಳೆ ಪೋಷಕರಿಗೆ ವೈದ್ಯರು ಸಲಹೆಯನ್ನೂ ನೀಡಿದ್ದಾರೆ. ಯಾವ ಕಾರಣಕ್ಕೂ ಎಳೆ ಹಸುಳೆಗಳ ಪಕ್ಕದಲ್ಲಿ ಬಾಯಿಗೆ ಹಾಕಿಕೊಳ್ಳಬಹುದಾದಷ್ಟು ಸಣ್ಣದಾದ ಯಾವುದೇ ಸೂಜಿ, ಪಿನ್‌, ಬಟನ್‌, ವಯರ್‌ಗಳನ್ನು ಇಡಬೇಡಿ. ಸಣ್ಣ ಪುಟಾಣಿಗಳಿಗೆ ಸಿಕ್ಕಿದ್ದನ್ನು ಬಾಯಿಗೆ ಹಾಕಿಕೊಳ್ಳುವ ಅಭ್ಯಾಸವಿರುತ್ತದೆ. ಇದು ಕೆಲವೊಮ್ಮೆ ಅಪಾಯಕ್ಕೂ ಕಾರಣವಾಗುತ್ತದೆ ಎಂದಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ