ಬುಧವಾರ, ಮೇ 22, 2024
Gold Rate: ಇಳಿಕೆ ಕಂಡ ಚಿನ್ನದ ದರ; ಹೇಗಿದೆ ಇಂದಿನ ಚಿನ್ನ-ಬೆಳ್ಳಿಯ ದರ-ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹುಟ್ಟು ಹಬ್ಬದಂದು ಆನ್‌ಲೈನ್ ನಲ್ಲಿ ತರಿಸಿದ ಕೇಕ್ ತಿಂದು 10 ವರ್ಷದ ಬಾಲಕಿ ಸಾವು..!

Twitter
Facebook
LinkedIn
WhatsApp
A 10-year-old girl died after eating a cake bought online on her birthday..!

10ನೇ ವರ್ಷದ ಖುಷಿಯಲ್ಲಿದ್ದ ಬಾಲಕಿಯೊಬ್ಬಳಿಗೆ ಅದೇ ದಿನ ಸಾವು ಬರುತ್ತದೆ, ಅದು ಕೂಡ ಕೇಕ್‌ನಿಂದ ಎನ್ನುವ ಕಲ್ಪನೆ ಕೂಡ ಇರಲಿಲ್ಲ. ಹುಟ್ಟು ಹಬ್ಬ ಆಚರಣೆಗೆ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಕೇಕ್ ತಿಂದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಕಳೆದ ವಾರ ಪಂಜಾಬ್‌ನಲ್ಲಿ 10 ವರ್ಷದ ಬಾಲಕಿಯೊಬ್ಬಳು ತನ್ನ ಹುಟ್ಟುಹಬ್ಬದಂದು ಕೇಕ್ ತಿಂದ ಬಳಿಕ ಸಾವನ್ನಪ್ಪಿದ್ದಾಳೆ. ಹುಡುಗಿಯ ತಂಗಿ ಸೇರಿದಂತೆ ಇಡೀ ಕುಟುಂಬ ಕೇಕ್ ತಿಂದ ನಂತರ ಅಸ್ವಸ್ಥಗೊಂಡಿತು ಎಂದು ಆಕೆಯ ತಾತ ಮಾಹಿತಿ ನೀಡಿದ್ದಾರೆ.

ಪಟಿಯಾಲಾದ ಬೇಕರಿಯಿಂದ ಆನ್‌ಲೈನ್‌ನಲ್ಲಿ ಕೇಕ್ ಆರ್ಡರ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸಾವನ್ನಪ್ಪಿದ ಬಾಲಕಿಯನ್ನು ಮಾನ್ವಿ ಎಂದು ಗುರುತಿಸಲಾಗಿದೆ. ಸಾಯುವ ಕೆಲವೇ ಗಂಟೆಗಳ ಮೊದಲು, ತನ್ನ ಕುಟುಂಬದೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿರುವ ವಿಡಿಯೋ ಹಂಚಿಕೊಂಡಿದ್ದ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಕೇಕ್ ತಿಂದ ಕುಟುಂಬ ಅಸ್ವಸ್ಥ

ಮಾರ್ಚ್ 24 ರಂದು ರಾತ್ರಿ 7 ಗಂಟೆ ಸುಮಾರಿಗೆ ಮಾನ್ವಿ ತನ್ನ ಹುಟ್ಟುಹಬ್ಬದ ಕೇಕ್ ಕತ್ತರಿಸಿದ್ದಾಳೆ. ರಾತ್ರಿ 10 ಗಂಟೆ ವೇಳೆಗೆ ಇಡೀ ಕುಟುಂಬದ ಸದಸ್ಯರು ಅಸ್ವಸ್ಥಗೊಂಡಿದ್ದಾರೆ ಎಂದು ಸಾನ್ವಿ ಅಜ್ಜ ಹರ್ಬನ್ ಲಾಲ್ ಹೇಳಿದ್ದಾರೆ. ಇಬ್ಬರು ಬಾಲಕಿಯರು ಸ್ವಲ್ಪ ಸಮಯದ ನಂತರ ವಾಂತಿ ಮಾಡಲು ಪ್ರಾರಂಭಿಸಿದರು. ಮಾನ್ವಿ ನೀರು ಕೇಳಿದಳು, ತೀವ್ರ ಬಾಯಾರಿಕೆ ಆಗುತ್ತಿದೆ ಎಂದಳು, ಬಳಿಕ ಅವಳು ಮಲಗಲು ಹೋದಳು ಎಂದು ಅವರು ಹೇಳಿದರು.

ಮರುದಿನ ಬೆಳಗ್ಗೆ ಆಕೆಯ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರು. ಆಕೆಗೆ ಆಕ್ಸಿಜನ್ ಸಹಾಯ ನೀಡಲಾಯಿತು. ಇಸಿಜಿ (ಎಲೆಕ್ಟ್ರೋಕಾರ್ಡಿಯೋಗ್ರಾಮ್), ಹೃದಯದ ವಿದ್ಯುತ್ ಚಟುವಟಿಕೆಯ ರೆಕಾರ್ಡಿಂಗ್ – ನಡೆಸಲಾಯಿತು ಎಂದು ಹರ್ಬನ್ ಲಾಲ್ ಹೇಳಿದರು. ಆದರೆ ವೈದ್ಯರಿಗೆ ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಹೇಳಿದ್ದಾರೆ.

ಕೇಕ್ ಕನ್ಹಾ’ ಎನ್ನುವ ಬೇಕರಿಯಲ್ಲಿ ಆರ್ಡರ್ ಮಾಡಲಾಗಿದ್ದ ಚಾಕೊಲೇಟ್ ಕೇಕ್ ನಲ್ಲಿ ವಿಷಕಾರಿ ಅಂಶವಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ. ಬೇಕರಿ ಮಾಲೀಕರ ವಿರುದ್ಧಎಫ್‌ಐಆರ್ ದಾಖಲಿಸಲಾಗಿದೆ. “ದೇಹದ ಮರಣೋತ್ತರ ಪರೀಕ್ಷೆಯನ್ನು ಮಾಡಲಾಗಿದೆ. ಕೇಕ್‌ನ ಮಾದರಿಯನ್ನು ಸಹ ಪರೀಕ್ಷೆಗೆ ಕಳುಹಿಸಲಾಗಿದೆ, ನಾವು ವರದಿಗಳಿಗಾಗಿ ಕಾಯುತ್ತಿದ್ದೇವೆ” ಎಂದು ಪೊಲೀಸರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ