ಅಭ್ಯಾಸ ಮಾಡುವಾಗ ಕುಸಿದು ಬಿದ್ದು 17 ವರ್ಷದ ಯುವ ಟೆನಿಸ್ ಆಟಗಾರ್ತಿ ಸಾವು..!
ಇಸ್ಲಾಮಾಬಾದ್: ಇತ್ತೀಚೆಗೆ ಸಣ್ಣ ಸಣ್ಣ ವಯಸ್ಸಿನ ಯುವಕರೇ ಹೃದಯಾಘಾತಕ್ಕೀಡಾಗಿ (Heart Attack) ಕ್ಷಣ ಮಾತ್ರದಲ್ಲಿ ಜೀವ ಕಳೆದುಕೊಳ್ಳುವ ವಿದ್ಯಮಾನಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲೂ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ, ಆಟ ಆಡುವಾಗ ಒಮ್ಮೆಲೇ ಹೃದಯ ನಿಂತು ಬಿಡುವುದು ಹೆಚ್ಚಾಗುತ್ತಲೇ ಇದೆ
ಪಾಕಿಸ್ತಾನದ(Pakistani tennis player Zainab Ali Naqvi) ಯುವ ಟೆನಿಸ್ ಆಟಗಾರ್ತಿ ಝೈನಾಬ್ ಅಲಿ ನಖ್ವಿ(Zainab Ali Naqvi) ಅಭ್ಯಾಸ ಮಾಡುವಾಗ ಕುಸಿದು ಸಾವನ್ನಪ್ಪಿದ್ದಾರೆ. 17 ವರ್ಷದ ಆಟಗಾರ್ತಿಗೆ ಹೃದಯಾಘಾತವಾಗಿರುವ(Heart Attack) ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಮುಂಬರುವ ಐಟಿಎಫ್ ಜೂನಿಯರ್ ಟೂರ್ನಿಯಲ್ಲಿ(ITF junior tournament) ಆಡಲು ಅವರು ಸಿದ್ಧತೆ ನಡೆಸುತ್ತಿದ್ದರು.
‘ಝೈನಾಬ್ ಉದಯೋನ್ಮುಖ ಆಟಗಾರ್ತಿಯಾಗಿದ್ದರು. ವೈದ್ಯರು ಅವರಿಗೆ ಹೃದಯಾಘಾತ ಆಗಿದೆ ಎಂದು ಸಂದೇಹ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಸಹಜ ಸಾವು ಎಂದು ದಾಖಲಿಸಲಾಗಿದೆ. ಆಟಗಾರ್ತಿಯ ದೇಹದ ಮರಣೋತ್ತರ ಪರೀಕ್ಷೆ ಬೇಡವೆಂದು ಪಾಲಕರೂ ಮನವಿ ಮಾಡಿದ್ದರಿಂದ ಕುಟುಂಬದವರಿಗೆ ಆಟಗಾರ್ತಿಯ ಪಾರ್ಥಿವ ಶರೀರವನ್ನು ಹಸ್ತಾಂತರಿಸಲಾಗಿದೆ ಎಂದು ಪಾಕಿಸ್ತಾನ ಟೆನಿಸ್ ಫೆಡರೇಷನ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.