ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ವಿಜಯಪುರ: ಎರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ (Open Borewel) ಬಿದ್ದ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ (Lachyana) ಗ್ರಾಮದಲ್ಲಿ ನಡೆದಿದೆ. ಸಾತ್ವಿಕ್ ಮುಜಗೊಂಡ ಆಟವಾಡಲು ಹೋಗಿದ್ದ ವೇಳೆ ಕೊಳವೆ ಬಾವಿಗೆ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ. ಸತೀಶ್ ಮತ್ತು ಪೂಜಾ ದಂಪತಿಯ ಮಗನಾಗಿರುವ ಸಾತ್ವಿಕ್ ಇಂದು (ಏಪ್ರಿಲ್ 03) ಸಂಜೆ 6 ಗಂಟೆ ಸುಮಾರಿಗೆ ಆಟವಾಡುತ್ತ ಕೊಳವೆ ಬಾವಿಗೆ ಬಿದ್ದಿದ್ದಾನೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಇಂಡಿ ಗ್ರಾಮಾಂತರ ಠಾಣೆಯ ಪೊಲೀಸರು, ಅಗ್ನಿ ಶಾಮಕ ದಳ, ತಾಲೂಕು ಆಡಳಿತಾಧಿರಿಗಳು ದೌಡಾಯಿಸಿದ್ದು, ರಕ್ಷಣಾ
ನಿನ್ನೆ(ಏಪ್ರಿಲ್ -02) ಜಮೀನಿನಲ್ಲಿ ಶಂಕರಪ್ಪ ಮುಜಗೊಂಡ ಬೋರ್ವೆಲ್ ಕೊರೆಸಿದ್ದರು. ಸುಮಾರು 500 ಅಡಿ ಆಳ ಕೊರೆಸಲಾಗಿತ್ತು. ಆದ್ರೆ, ನೀರು ಬಾರದ ಕಾರಣ ಮುಚ್ಚದೆ ಹಾಗೆಯೇ ಬಿಟ್ಟಿದ್ದ. ಇದೀಗ ಶಂಕರಪ್ಪ ಮುಜಗೊಂಡ ಮೊಮ್ಮಗ ಸಾತ್ವಿಕ್ ಕೊಳವೆ ಬಾವಿಗೆ ಬಿದ್ದಿದ್ದಾನೆ. ಸುಮಾರು 15ರಿಂದ 20 ಅಡಿ ಆಳದಲ್ಲಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದ್ದು, ಇದೀಗ ಆ್ಯಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ.
ಇನ್ನು ವಿಷಯ ತಿಳಿದಯುತ್ತಿದ್ದಂತೆಯೇ ಸ್ಥಳದಲ್ಲಿ ಜನರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇತ್ತ ಸಾತ್ವಿಕ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಪತ್ನಿ ಅಕ್ರಮ ಸಂಬಂಧ ಶಂಕೆ; ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ
ಕೋಲಾರ: ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು (Hanging) ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾರಾಯಣಸ್ವಾಮಿ(40), ಪವನ್(12), ನಿತಿನ್(10) ಮೃತರು. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪತ್ನಿ ಲಕ್ಷ್ಮೀ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು ಅನ್ನೋ ಕಾರಣಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ನೀರಿನ ಬಕೆಟ್ಗೆ ಬಿದ್ದು ಹೆಣ್ಣು ಮಗು ಸಾವು
ನೀರಿನ ಬಕೆಟ್ಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ಕೊನೆಯುಸಿರೆಳೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಆಸೀಫ್-ಅಂಜುಮ್ ದಂಪತಿಯ ಪುತ್ರಿ ಆನಮ್ ಫಾತಿಮಾ ಸಾವನ್ನಪ್ಪಿದ್ದಾಳೆ. ಮಗಳನ್ನ ಕಳೆದುಕೊಂಡ ಪೋಷಕರ ಗೋಳಾಟ ಮುಗಿಲುಮುಟ್ಟಿತ್ತು.
ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕ ಸಾವು
ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕ ಸಾವನ್ನಪ್ಪಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ನೇತ್ರಾವತಿ ನದಿಯಲ್ಲಿ ಮೂವರು ಯುವಕರು ಈಜಲು ಹೋಗಿದ್ದರು. ಅದ್ರಲ್ಲಿ ಓರ್ವ ಬಲಿಯಾಗಿದ್ದು, ಮತ್ತಿಬ್ಬರನ್ನು ಸ್ಥಳೀಯ ನಿವಾಸಿ ಮೊಹಮ್ಮದ್ ರಕ್ಷಿಸಿದ್ದಾರೆ. ಸದ್ಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.