ಮನೆಯಲ್ಲಿ ಆಟವಾಡುತ್ತಿದ್ದಾಗ ಗಂಟಲಿನಲ್ಲಿ ಒಂದು ರೂಪಾಯಿ ನಾಣ್ಯ ಸಿಲುಕಿ 2 ವರ್ಷದ ಮಗು..!
ಧಾರವಾಡ: ಗಂಟಲಿನಲ್ಲಿ ಒಂದು ರೂಪಾಯಿ ನಾಣ್ಯ ಸಿಲುಕಿ 2 ವರ್ಷದ ಮಗು ಮೃತಪಟ್ಟಿರುವ ಘಟನೆ ನಗರದ ಕೋಳಿಕೇರಿ ಬಡಾವಣೆಯಲ್ಲಿ ನಡೆದಿದೆ. ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನಾಣ್ಯವನ್ನು ಬಾಯಿಗೆ ಹಾಕಿಕೊಂಡಿದ್ದ ಮಗು, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದೆ.
ನಗರದ ಕೋಳಿಕೇರಿ ಬಡಾವಣೆಯ ಮಹ್ಮದ ಜುಬೇರ್ ಸಾಲಿ (2) ಮೃತ ಮಗು. ಆಟವಾಡುತ್ತಿದ್ದಾಗ ಬಾಯಿಯಲ್ಲಿ ಒಂದು ರೂಪಾಯಿ ನಾಣ್ಯ ಹಾಕಿಕೊಂಡಿದೆ. ಅದು ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ಮಗು ಒದ್ದಾಡುತ್ತಿದ್ದದ್ದನ್ನು ಕಂಡು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಸಿಗೆಯ ಸುಡು ಬಿಸಿಲಿಗೆ ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ:
ಬೇಸಿಗೆಯಲ್ಲಿ ಸುಡು ಬಿಸಿಲಿನಲ್ಲಿ ಅತಿಯಾದ ಬೆವರುವಿಕೆ ಮತ್ತು ದೇಹದಿಂದ ನೀರಿನ ನಷ್ಟವು ನಿರ್ಜಲೀಕರಣಕ್ಕೆ ಕಾರಣವಾಗುವುದಲ್ಲದೆ ಮತ್ತಷ್ಟು ಸಮಸ್ಯೆಗಳಿಗೆ ಆಹ್ವಾನ ಕೊಟ್ಟಂತೆಯಾಗುತ್ತದೆ. ಹೀಗಾಗಿ ಮಕ್ಕಳಿಗೆ ದ್ರವ ರೂಪದ ಆಹಾರಗಳನ್ನು ಹೆಚ್ಚಾಗಿ ನೀಡಿ. ಹೆಚ್ಚು ನೀರು ಕುಡಿಯುವಂತೆ ನೋಡಿಕೊಳ್ಳಿ.
ಬೇಸಿಗೆಯಲ್ಲಿ ಸುಡು ಬಿಸಿಲಿನ ನಡುವೆ ಸೆಕೆಯು ವಿಪರೀತವಾಗಿರುತ್ತದೆ. ಈ ಸಮಯದಲ್ಲಿ ದಪ್ಪನೆಯ ಬಟ್ಟೆಯು ಧರಿಸುವುದರಿಂದ ಕಿರಿಕಿರಿಯಾಗಬಹುದು. ಹೀಗಾಗಿ ಮಕ್ಕಳು ಕಂಫರ್ಟ್ ಆಗಿರಲು ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸುವಂತೆ ನೋಡಿ ಕೊಳ್ಳಿ. ಈ ಸಮಯದಲ್ಲಿ ಹತ್ತಿಯ ಉಡುಪು ಮಕ್ಕಳಿಗೆ ಈ ಆರಾಮದಾಯಕರಾಗಿರುತ್ತಾರೆ.
ಬೇಸಿಗೆಯಲ್ಲಿ ಹೆಚ್ಚಿನ ತಾಪಮಾನದಿಂದಾಗಿ ಜೀರ್ಣಕ್ರಿಯೆಯು ನಿಧಾನವಾಗುತ್ತದೆ. ಮಕ್ಕಳಿಗೆ ಮಸಾಲೆಯುಕ್ತ ಹಾಗೂ ಕರಿದ ಆಹಾರ ಪದಾರ್ಥಗಳನ್ನು ಆದಷ್ಟು ತಪ್ಪಿಸಿ. ಇದರಿಂದ ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳು ಎದುರಾಗಬಹುದು. ಬೇಸಿಗೆಯಲ್ಲಿ ಸಿಗುವ ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಮಕ್ಕಳ ಆಹಾರ ಪಟ್ಟಿಯಲ್ಲಿ ಸೇರಿಸಿದರೆ ಪೋಷಕರಾಗಿ ಮಕ್ಕಳ ಆರೋಗ್ಯವನ್ನು ಕಾಪಾಡುವತ್ತ ಗಮನಹರಿಸಿ.