ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು ; ಮೂವರು ಯುವಕರು ಮೃತ್ಯು ...!
ಕಾರೊಂದು ಕರೆಂಟ್ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಯುವಕರು ಮೃತಪಟ್ಟ ಘಟನೆ ಮಂಡ್ಯದ ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ.
ಸೆಪ್ಟೆಂಬರ್ 2023 ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾರಣ ಧರ್ಮವನ್ನು ಡೆಂಗ್ಯೂ, ಮಲೇರಿಯಾದೊಂದಿಗೆ ಹೋಲಿಸಿದರು ಮತ್ತು ಈ ರೋಗಗಳಂತೆ ಸನಾತನ ಧರ್ಮವನ್ನು ದೇಶದಿಂದ ಓಡಿಸಬೇಕು ಎಂದು ಹೇಳಿದರು.
ಕೆ.ಆರ್ ಪೇಟೆ ಪಟ್ಟಣದ ಅನಿಕೇತನ್ (30), ಪವನ್ ಶೆಟ್ಟಿ (32), ಚಿರಂಜೀವಿ (32) ಮೃತ ದುರ್ದೈವಿಗಳು. ಸಾಗರ್ ಎಂಬಾತನಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ನಾಲ್ವರು ಯುವಕರು ತಡರಾತ್ರಿ ಅಕ್ಕಿಹೆಬ್ಬಾಳು ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಕಾರು ವೇಗವಾಗಿ ಚಲಿಸುತ್ತಿತ್ತು. ಆಗ ಅಕ್ಕಿಹೆಬ್ಬಾಳುವಿನ ಸೇತುವೆ ಬಳಿ ಬರುತ್ತಿದ್ದಂತೆ ಕಾರು ವೇಗದಲ್ಲೇ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿದ್ದ ರಭಸಕ್ಕೆ ಕಾರು ಫುಲ್ ಜಖಂ ಆಗಿದೆ. ಈ ಸಂಬಂಧ ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದೆ.