ಜೋಕಾಲಿಯಲ್ಲಿ ಆಡುತ್ತಿದ್ದಾಗ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಬಿಗಿದು ಮಗು ಸಾವು...!
ಮಣಪ್ಪುರಂ: ಜೋಕಾಲಿಯಲ್ಲಿ ಆಡುತ್ತಿದ್ದಾಗ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕಿಯೋರ್ವಳು ಮೃತಪಟ್ಟ ಘಟನೆ ಕೇರಳದ ಮಣಪ್ಪುರಂ ನಲ್ಲಿ ನಡೆದಿದೆ.
ಆರು ವರ್ಷದ ಹಯಾ ಫಾತಿಮಾ ಸಾವನ್ನಪ್ಪಿದ ಬಾಲಕಿಯಾಗಿದ್ದಾಳೆ. ಮನೆಯಲ್ಲಿ ಹಗ್ಗಕಟ್ಟಿ ಜೋಕಾಲಿ ಆಡುವಾಗ ಅಕಸ್ಮತ್ ಹಗ್ಗ ಬಾಲಕಿಯ ಕುತ್ತಿಗೆಗೆ ಸುತ್ತಿಕೊಂಡಿತ್ತು.
ಪರಿಣಾಮ ಉಸಿರುಕಟ್ಟಿದ ಬಾಲಕಿ ಹಯಾ ಫಾತಿಮಾ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಸ್ಥಳಿಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಹೃದಯಾಘಾತಕ್ಕೆ ಬಲಿಯಾದ ಲಿಂಗಸೂರು ಶಾಸಕ ಮಾನಪ್ಪ ವಜ್ಜಲ್ ಪುತ್ರ ಶ್ರೀಮಂತರಾಯ
ಬೆಂಗಳೂರು ಡಿಸೆಂಬರ್ 17: ಲಿಂಗಸೂರು ಶಾಸಕ ಮಾನಪ್ಪ ವಜ್ಜಲ್ ಪುತ್ರ 32 ರ ಹರೆಯದ ಶ್ರೀಮಂತರಾಯ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆ, ಡಸ್ಟ್ ಅಲರ್ಜಿ ಹಾಗೂ ಶ್ವಾಸಕೋಶದ ತೊಂದರೆಯಿಂದ ಶ್ರೀಮಂತರಾಯ ಅವರು ಬಳಲುತ್ತಿದ್ದರು . ಎದೆನೋವು ಕಾಣಿಸಿಕೊಂಡ ಬೆನ್ನಲ್ಲೇ ಅವರನ್ನು ಶ್ರೀಮಂತರಾಯರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿಲ್ಲ. ಶ್ರೀಮಂತರಾಯ ಪತ್ನಿ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.