ಮಂಗಳವಾರ, ಜುಲೈ 16, 2024
Karnataka Government: ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ತೀರ್ಮಾನ-K P Sharma Oli: ಕೆಪಿ ಶರ್ಮಾ ಒಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರ-ಮಣಿಪುರದಲ್ಲಿ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ-ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-ಅಮಿತಾಬ್ ಬಚ್ಚನ್ ಪಾದಗಳನ್ನು ಮುಟ್ಟಿದ ರಜಿನಿಕಾಂತ್, ವಿಡಿಯೋ ವೈರಲ್!-ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ; ಅಮೆರಿಕದ ಮಾಜಿ ಅಧ್ಯಕ್ಷನ ಬಲ ಕಿವಿಗೆ ಗಾಯ-13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುವತಿಯರನ್ನು ಚುಡಾಯಿಸಿದ್ದಕ್ಕೆ ಅರೆನಗ್ನ ಸ್ಥಿತಿಯಲ್ಲಿ ಯುವಕ-ಯುವತಿಯರ ಮಧ್ಯೆ ಗಲಾಟೆ!

Twitter
Facebook
LinkedIn
WhatsApp
ಯುವತಿಯರನ್ನು ಚುಡಾಯಿಸಿದ್ದಕ್ಕೆ ಅರೆನಗ್ನ ಸ್ಥಿತಿಯಲ್ಲಿ ಯುವಕ-ಯುವತಿಯರ ಮಧ್ಯೆ ಗಲಾಟೆ!

ಬೆಂಗಳೂರು: ನಗರದ ಪಬ್‌ ಒಂದರಲ್ಲಿ ಯುವತಿಯರನ್ನು ಚುಡಾಯಿಸಿದ್ದಕ್ಕೆ ಯುವಕ-ಯುವತಿಯರ ಮಧ್ಯೆ ಜೋರು ಗಲಾಟೆ ನಡೆದಿದೆ. ಬೆಂಗಳೂರಿನ ಚರ್ಚ್‌ ಸ್ಟ್ರೀಟ್‌ನಲ್ಲಿರುವ ಬರ್ಗರ್‌ ಸೈನೆರ್‌ (Burger Seigneur) ಪಬ್ ಎದುರು ಯುವಕ-ಯುವತಿಯರ ಮಧ್ಯೆ ಗಲಾಟೆ ನಡೆದಿದ್ದು, ಈ ವಿಡಿಯೊ ಈಗ ವೈರಲ್‌ (Viral Video) ಆಗಿದೆ.

ಕಾಲೇಜು ಯುವಕರು ಹಾಗೂ ಯುವತಿಯರು ರಾತ್ರಿ ಪಬ್‌ನಲ್ಲಿ ಪಾರ್ಟಿ ಮುಗಿಸಿಕೊಂಡು ಹೋಗುವಾಗ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ. ಕೆಲ ಯುವಕರು ಯುವತಿಯರನ್ನು ಚುಡಾಯಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ಅರೆನಗ್ನವಾಗಿ ಕಾಣುವ ರೀತಿ ಬಟ್ಟೆ ಧರಿಸಿದ್ದ ಯುವತಿಯರು ಯುವಕರಿಗೆ ಬೈದಿದ್ದಾರೆ.

ಇದೇ ವೇಳೆ ಯುವತಿಯರ ಗೆಳೆಯರು ಹಾಗೂ ಚುಡಾಯಿಸಿದ ಯುವಕರ ಮಧ್ಯೆ ತಳ್ಳಾಟ, ನೂಕಾಟ ನಡೆದಿದೆ. ಯುವತಿಯರು ಕೂಡ ಯುವಕರನ್ನು ತಳ್ಳುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ. ರಸ್ತೆ ಬಳಿಯೇ ಎರಡೂ ಗುಂಪುಗಳು ಹೊಡೆದಾಡಿಕೊಂಡಿದ್ದು, ಕುಡಿದ ಮತ್ತಿನಲ್ಲಿ ರಂಪಾಟ ಮಾಡಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. 

ಯುವಕನೊಬ್ಬ ಗಾರ್ಡನ್‌ ಏರಿಯಾದಲ್ಲಿ ಬಿದ್ದಿರುವ ದೃಶ್ಯವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವಕ ಹಾಗೂ ಯುವತಿಯರ ರಂಪಾಟದ ವಿಡಿಯೊ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ತಡರಾತ್ರಿವರೆಗೆ ಪಾರ್ಟಿ ಮಾಡಿ, ಕುಡಿದ ಮತ್ತಿನಲ್ಲಿ ಹೀಗೆ ಮಾಡುವುದು ಅಸಭ್ಯತನದ ಪರಮಾವಧಿ ಎಂದು ಜಾಲತಾಣಗಳಲ್ಲಿ ಜನ ಜಾಡಿಸಿದ್ದಾರೆ.

ಹಾಗೆಯೇ, ಯುವತಿಯರನ್ನು ಅಸಭ್ಯ ಪದಗಳಿಂದ ನಿಂದಿಸಿರುವ ಯುವಕರ ನಡೆಯ ಕುರಿತು ಕೂಡ ಆಕ್ರೋಶ ವ್ಯಕ್ತವಾಗಿದೆ. ಆದಾಗ್ಯೂ, ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿರುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪಬ್‌ ಸಿಬ್ಬಂದಿಯು ಜಗಳ ಬಿಡಿಸಿ, ಅವರನ್ನು ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಡ್ರಂಕನ್ & ಡ್ಯಾಡಿ ಪಬ್ ಮುಂದೆಯೂ ಹೀಗೆ ಗಲಾಟೆ ನಡೆದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ