ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕ್ಷುಲ್ಲಕ ವಿಷಯಕ್ಕಾಗಿ ನಡೆದ ಜಗಳ ; ಪೊಲೀಸರನ್ನೇ ಅಟ್ಟಾಡಿಸಿ ಕಲ್ಲು ತೂರಾಟ ಮಾಡಿದ ಯುವಕರ ಗುಂಪು!

Twitter
Facebook
LinkedIn
WhatsApp
ಕ್ಷುಲ್ಲಕ ವಿಷಯಕ್ಕಾಗಿ ನಡೆದ ಜಗಳ ; ಪೊಲೀಸರನ್ನೇ ಅಟ್ಟಾಡಿಸಿ ಕಲ್ಲು ತೂರಾಟ ಮಾಡಿದ ಯುವಕರ ಗುಂಪು!

ಬೀದರ್‌: ಕ್ಷುಲ್ಲಕ ವಿಷಯಕ್ಕಾಗಿ ನಡೆದ ಜಗಳವು ವಿಕೋಪಕ್ಕೆ ತಿರುಗಿ ಉದ್ರಿಕ್ತ ಯುವಕರ ಗುಂಪೊಂದು ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ (Assault Case) ನಡೆಸಿದ ಘಟನೆ ಬಸವಕಲ್ಯಾಣ ತಾಲೂಕಿನ ಬಟಗೇರಾ ಗ್ರಾಮದಲ್ಲಿ ಜರುಗಿದೆ.

 

ಗ್ರಾಮದಲ್ಲಿ ಬುಧವಾರ ಸಂಜೆ ನಡೆದ ಮಹಾಲಕ್ಷ್ಮೀ ದೇವಿ ಪಲ್ಲಕ್ಕಿ ಮೆರವಣಿಗೆ ವೇಳೆ ಬಟಗೇರಾ ಹಾಗೂ ಬಟಗೇರಾ ವಾಡಿ ಗ್ರಾಮದ ಯುವಕರ ಗುಂಪಿನ ಮಧ್ಯೆ ಜಗಳ ನಡೆದಿದೆ. ಬಳಿಕ ಗ್ರಾಮಸ್ಥರು ಮಧ್ಯಸ್ಥಿಕೆಯಿಂದ ತಣ್ಣಗಾಗಿತ್ತು. ಆದರೆ ಸಂಜೆ ಆಗುತ್ತಿದ್ದಂತೆ ಬಟಗೇರಾ ವಾಡಿ ಗ್ರಾಮದ ಯುವಕರ ಗುಂಪು ಮತ್ತೆ ಬಟಗೇರಾ ಗ್ರಾಮಕ್ಕೆ ಬಂದು ಕ್ಯಾತೆ ತೆಗೆದಿದ್ದಾರೆ. ಪೊಲೀಸ್ ವಾಹನ ಸೇರಿ ಇತರೆ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

 

ಜತೆಗೆ ಕಂಡ ಕಂಡವರ ಮೇಲೆ ಕಲ್ಲು ಎಸೆದಿದ್ದಾರೆ. ಕೈಯಲ್ಲಿ ಚಾಕು, ತಲ್ವಾರ್‌ ಹಾಗೂ ಬಂದೂಕುಗಳನ್ನು ಹಿಡಿದುಕೊಂಡು ಗಟಗೇರಾ ಗ್ರಾಮಕ್ಕೆ ಆಗಮಿಸಿದ್ದಾರೆ. ಉದ್ರಿಕ್ತ ಯುವಕರು ಪೊಲೀಸ್ ವಾಹನದ ಮೇಲೆ ಕಲ್ಲು ಎತ್ತಿಹಾಕಿ ವಾಹನದ ಗಾಜುಗಳು ಪುಡಿ ಪುಡಿಗೊಳಿಸಿದೆ. ಮಾತ್ರವಲ್ಲ ಕಲ್ಲು ತೂರುತ್ತಿದ್ದಂತೆ ಪೊಲೀಸರು ಓಡಿಹೋಗಿದ್ದಾರೆ.

 

ಕಲ್ಲು ತೂರಾಟದಿಂದಾಗಿ ಎಎಸ್ಐ ಒಬ್ಬರಿಗೆ ಗಾಯಗಳಾಗಿದ್ದು, ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇದೇ ವೇಳೆ ಕಿಡಿಗೇಡಿ ಯುವಕರು ತಂದಿದ್ದ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಸಹ ಹಾರಿಸಲಾಗಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿದ ಜಿಲ್ಲಾ ಎಸ್‌ಪಿ ಚನ್ನಬಸವಣ್ಣ ಲಂಗೋಟಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯಕ್ಕೆ ಗ್ರಾಮದಲ್ಲಿ ವಾತಾವರಣ ಶಾಂತವಾಗಿದೆ. ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಬೀಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ