ವಿದ್ಯುತ್ ತಂತಿ ತಗುಲಿ ಬಾಲಕಿ ದಾರುಣ ಸಾವು
ಬೆಂಗಳೂರು: ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ದಾರುಣ ಸಾವು ವಿದ್ಯುತ್ ತಂತಿ (Electricity Wire) ತಗುಲಿ 10 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಗುರುವಾರ ಸಂಜೆ 7:30ರ ಸುಮಾರಿಗೆ ವರ್ತೂರಿನ ಅಪಾರ್ಟ್ಮೆಂಟ್‌ವೊಂದರಲ್ಲಿ (Apartment) ಘಟನೆ ನಡೆದಿದೆ. ವಿದ್ಯುತ್ ಶಾಕ್ ತಗುಲಿದ ಸ್ವಲ್ಪ ಸಮಯದಲ್ಲೇ ಸ್ಥಳೀಯರು ಬಾಲಕಿಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಆಸ್ಪತ್ರೆಯಲ್ಲೇ (Hospital) ಮೃತಪಟ್ಟಿದ್ದಾಳೆ. ಸದ್ಯ ಬಾಲಕಿ ಪೋಷಕರಿಂದ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಮಧ್ಯರಾತ್ರಿಯೇ ರೊಚ್ಚಿಗೆದ್ದ ಅಪಾರ್ಟ್‌ಮೆಂಟ್ ನಿವಾಸಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಅಪಾರ್ಟ್ಮೆಂಟ್ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿ 100ಕ್ಕೂ ಹೆಚ್ಚು ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ವಿದ್ಯುತ್ ಪೂರೈಕೆ, ವಿದ್ಯುತ್ ಕಂಬಗಳ ನಿರ್ವಹಣೆ ನೋಡಿಕೊಳ್ತಿದ್ದ ಪಿಪಿಎಂಎಸ್ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿರುವುದಾಗಿ ಆರೋಪಿಸಿದ್ದಾರೆ.
ಹನಿಟ್ರ್ಯಾಪ್ : ಮಹಿಳೆ ಸೇರಿ ಮೂವರ ಬಂಧನ
ಮೈಸೂರು, ಡಿಸೆಂಬರ್ 29: ಹನಿಟ್ರ್ಯಾಪ್ ಮೂಲಕ ಅಮಾಯಕರನ್ನು ತಮ್ಮ ಬಲೆ ಬೀಳಿಸಿಕೊಳ್ಳುತ್ತಿದ್ದ ಗ್ಯಾಂಗ್ ಅನ್ನು ಮೈಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಓರ್ವ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಫಜಲುಲ್ಲಾ ರೆಹಮಾನ್, ರಿಜ್ವಾನ್, ಮೋನಾ ಬಂಧಿತ ಆರೋಪಿಗಳು. ಉದ್ಯಮಿ ಸುನ್ನಿ ಎಂಬುವರು ಚೆನ್ನೈನಿಂದ ಮೈಸೂರು ಮಾರ್ಗವಾಗಿ ಕೇರಳಕ್ಕೆ ಹೋಗುತ್ತಿದ್ದರು. ದಾರಿ ಮಧ್ಯೆ ಸುನ್ನಿ ಅವರಿಗೆ ಆರೋಪಿಗಳು ಪರಿಚಯವಾಗಿದ್ದಾರೆ. ಬಳಿಕ ಆರೋಪಿಗಳು ಮಾನಂದವಾಡಿ ರಸ್ತೆಯಲ್ಲಿ ಸುನ್ನಿ ಅವರ ಕಾರು ಅಡ್ಡಗಟ್ಟಿದ್ದಾರೆ.
ನಂತರ ಆರೋಪಿಗಳು ಸುನ್ನಿ ಅವರನ್ನು ಬಲವಂತವಾಗಿ ಮನೆಯೊಂದಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಮೋನ ಜೊತೆ ನಗ್ನವಾಗಿ ಮಲಗಿಸಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಿಸಿಕೊಂಡಿದ್ದಾರೆ. ನಂತರ ಫೋಟೋ ಹಾಗೂ ವಿಡಿಯೋಗಳನ್ನು ಸುನ್ನಿ ಅವರಿಗೆ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಾರೆ.
ನಮಗೆ 10 ಲಕ್ಷ ರೂ. ನೀಡು, ಇಲ್ಲವಾದರೇ ಈ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಆಗ ಉದ್ಯಮಿ ಸುನ್ನಿ ಅವರು 5 ಲಕ್ಷ ರೂ. ನೀಡಿದ್ದಾರೆ. ಬಳಿಕ ಆರೋಪಿಗಳು ಸುನ್ನಿ ಅವರು ಧರಿಸಿದ್ದ ಚಿನ್ನದ ಉಂಗುರ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.
ಈ ಬಗ್ಗೆ ಸುನ್ನಿ ಅವರು ಕೇರಳದ ತಿರುನೆಲ್ಲಿ ಪೊಲೀಸ್ ಠಾಣೆಯಲ್ಲಿ ದೂಉ ದಾಖಲಸಿದರು. ಕೃತ್ಯ ಮೈಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿನ್ನೆಲೆಯಲ್ಲಿ ಪ್ರಕರಣ ಇಲ್ಲಿಗೆ ವರ್ಗಾವಣೆಯಾಗಿತ್ತು. ಪ್ರಕರಣ ವರ್ಗಾವಣೆಯಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.