ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿ ಉದಯ ಅರೆಸ್ಟ್!
Twitter
Facebook
LinkedIn
WhatsApp
ಪುತ್ತೂರು ಅಕ್ಟೋಬರ್ 28 : ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಕ್ಸೊ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಉದಯ(40) ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿಬಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಕಿರುಕುಳ ನೀಡಿದ ವಿಚಾರವನ್ನು ಆಕೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆತನನ್ನು ಇಳಿಯಲು ಬಿಡದೆ ತಡೆದಿದ್ದರು
ಬಳಿಕ ಬಸ್ ಅನ್ನು ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು ಎಂದು ಮೂಲಗಳು ತಿಳಿಸಿವೆ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಕೆಲವು ಯುವಕರು ಮಹಿಳಾ ಪೊಲೀಸ್ ಠಾಣೆಯ ಮುಂದೆ ಜಯಾಯಿಸಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.