ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಭೀಕರ ಹತ್ಯೆ
ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ (Laxman Savadi) ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) (Annappa Basappa Nimbala) ಎಂಬವರನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಅಣ್ಣಪ್ಪ ಬಸಪ್ಪ ನಿಂಬಾಳರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಣ್ಣಪ್ಪ ಖೀಳೆಗಾಂವ್ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಘಟನೆ ನಡೆದಿದೆ.
ಕೊಲೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಂಗಳ ಹಿಂದಷ್ಟೇ ಸಂಸದ ಕಲಬುರಗಿಯ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಬೆಂಬಲಿಗ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಎಂಬವರನ್ನು ದುಷ್ಕರ್ಮಿಗಳು ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ಕೊಲೆ ಮಾಡಿದ್ದರು. ಇದೀಗ ಅಂಥದ್ದೇ ಘಟನೆ ಮರುಕಳಿಸಿದೆ.
ಒಂದು ತಿಂಗಳ ಹಿಂದೆ ಸಂಸದ ಡಾ.ಉಮೇಶ್ ಜಾಧವ್ ಆಪ್ತನ ಕೊಲೆ..!
ಕಳೆದ ಒಂದು ತಿಂಗಳ ಹಿಂದೆ ಮಾರ್ಚ್ 01ರಂದು ಸಂಸದ ಡಾ. ಉಮೇಶ್ ಜಾಧವ್ ಆಪ್ತ ಹಾಗೂ ಬಿಜೆಪಿ ಮುಖಂಡ ಗಿರೀಶ್ ಚಕ್ರ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ನಡೆದಿದೆ.ಕಲಬುರಗಿ ಬಿಎಸ್ಎನ್ಎಲ್ ಸಲಹಾ ಸಮಿತಿಗೆ ನಿರ್ದೇಶಕರಾಗಿದ್ದ ಗಿರೀಶ್ ಚಕ್ರರನ್ನು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಕೊಲೆ ಮಾಡಲಾಗಿತ್ತು. ಸಲಹಾ ಸಮಿತಿ ನಿರ್ದೇಶಕ ನೇಮಕ ಹಿನ್ನೆಲೆಯಲ್ಲಿ ಪಾರ್ಟಿ ಕೊಡುವ ನೆಪದಲ್ಲಿ ಗಿರೀಶ್ ಚಕ್ರ ಅವರನ್ನು ಸಾಗನೂರ ಗ್ರಾಮದ ಜಮೀನಿಗೆ ಕರೆಸಲಾಗಿದೆ. ಪರಿಚಿತರ ಕರೆ ಮೇರೆಗೆ ಜಮೀನಿಗೆ ಬಂದ ಗಿರೀಶ್ ಕಣ್ಣಿಗೆ ಖಾರದ ಪುಡಿ ಎರಚಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು.