ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೈಲ್ವೆ ನಿಲ್ದಾಣದಲ್ಲಿ ಸ್ಟೇಷನ್ ಮಾಸ್ಟರ್ ಆಗಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಆತ್ಮಹತ್ಯೆ!

Twitter
Facebook
LinkedIn
WhatsApp
ರೈಲ್ವೆ ನಿಲ್ದಾಣದಲ್ಲಿ ಸ್ಟೇಷನ್ ಮಾಸ್ಟರ್ ಆಗಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಆತ್ಮಹತ್ಯೆ!

ಶಿವಮೊಗ್ಗ: ರೈಲಿಗೆ (Train) ಸಿಲುಕಿ ರೈಲ್ವೆ ಸ್ಟೇಷನ್ ಮಾಸ್ಟರ್ (Station Master) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಶಿವಮೊಗ್ಗದ (Shivamogga) ಕುಂಸಿ ಬಳಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಸ್ಟೇಷನ್ ಮಾಸ್ಟರ್ ಅನ್ನು ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಮೃತ ಅರುಣ್ ಕುಮಾರ್ ಬಿಹಾರ (Bihar) ಮೂಲದವರಾಗಿದ್ದು, ಕುಂಸಿ ರೈಲ್ವೆ ನಿಲ್ದಾಣದಲ್ಲಿ ಸ್ಟೇಷನ್ ಮಾಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಬಂದ ಅರುಣ್ ಕುಮಾರ್ ಬುಧವಾರ ಬೆಳಗಿನ ಜಾವ ಕುಂಸಿ ಬಳಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಅರುಣ್ ಕುಮಾರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ತನಿಖೆ ನಂತರ ಆತ್ಮಹತ್ಯೆಗೆ ಕಾರಣ ತಿಳಿಯಬೇಕಿದೆ.

ಗ್ಯಾಸ್ ಗೀಸರ್ ಲೀಕ್‍ನಿಂದ ಪತ್ನಿ ಸಾವು ಎಂದ ಪತಿ- ಕೊಲೆ ಆರೋಪ

ಕೋಲಾರ: ಮಹಿಳೆಯೊಬ್ಬಳು ಇಲ್ಲಿನ ಮಿಲ್ಲತ್ ನಗರದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ವರದಕ್ಷಿಣೆ (Dowry) ಕಿರುಕುಳಕ್ಕೆ ಬಲಿಯಾದ ಅನುಮಾನ ವ್ಯಕ್ತವಾಗಿದೆ.

ಮೃತಳನ್ನು ಮಿಲ್ಲತ್ ನಗರದ ಮಾಹೇನೂರ್ (22) ಎಂದು ಗುರುತಿಸಲಾಗಿದೆ. ಆಕೆಯ ಪತಿ ಸಯ್ಯದ್ ಶುಹೇಬ್ ಎಂಬಾತ ಕೊಲೆ ಮಾಡಿ ಗ್ಯಾಸ್ ಗೀಸರ್ ಲೀಕ್‍ನಿಂದ ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಯತ್ನಿಸುತ್ತಿದ್ದಾನೆ. ಅಲ್ಲದೇ ಆತ ಕಳೆದ ಕೆಲವು ತಿಂಗಳುಗಳಿಂದ ಹಣ, ಜಾಗ ಹಾಗೂ ಬುಲೆಟ್ ಬೈಕ್‍ಗಾಗಿ ಪತ್ನಿಯ ತವರಿನಿಂದ ಹಣ ತರುವಂತೆ ಪೀಡಿಸುತ್ತಿದ್ದ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಈಗಾಗಲೇ ಮೂರು ಬಾರಿ ನ್ಯಾಯ ಪಂಚಾಯ್ತಿ ಮಾಡಿದ್ದೇವೆ. ಇಂದು ಮುಂಜಾನೆ ಸಹ ಮೃತ ಮಹಿಳೆ ಕರೆ ಮಾಡಿ ಪತಿ ಹಣ ತರುವಂತೆ ಪೀಡಿಸುತ್ತಿದ್ದಾನೆ ಎಂದು ಹೇಳಿಕೊಂಡಿದ್ದಾಳೆ. ಇದರಿಂದ ಗಲಾಟೆ ಮಾಡಿ ಮಹಿಳೆಯ ಹತ್ಯೆ ಮಾಡಲಾಗಿದೆ ಎಂದು ಸಂಬಂಧಿಕರು ಹೇಳಿಕೊಂಡಿದ್ದಾರೆ.

ಈ ಸಂಬಂಧ ಗಲ್ ಪೇಟೆ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸಯ್ಯದ್ ಶುಹೇಬ್‍ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ