ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಪ್ರಾಪ್ತ ಬಾಲಕನಿಂದ ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಬೆದರಿಕೆ ಕರೆ!

Twitter
Facebook
LinkedIn
WhatsApp
ಅಪ್ರಾಪ್ತ ಬಾಲಕನಿಂದ ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಬೆದರಿಕೆ ಕರೆ!

ತಿರುವನಂತಪುರ: ಅಪ್ರಾಪ್ತ ಬಾಲಕನೋರ್ವ (Minor) ಕೇರಳ (Kerala) ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ (Pinarayi Vijayan) ಬೆದರಿಕೆ (Threat) ಹಾಕಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

ಬುಧವಾರ ರಾತ್ರಿ ಕೇರಳ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ನಿಯಂತ್ರಣ ಕೊಠಡಿಗೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿರುವುದಾಗಿ ಗುರುವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಎಲ್ಲಾ ಕೋನಗಳಲ್ಲಿ ತನಿಖೆ ನಡೆಸುತ್ತಿದ್ದು, ಕರೆ ಮಾಡಿದಾತ 12 ವರ್ಷದ ಬಾಲಕ ಎಂದು ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಳಿಕ ಪೊಲೀಸರು ಬಾಲಕನ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಲಕನ ಪೋಷಕರು, 7 ನೇ ತರಗತಿಯಲ್ಲಿ ಓದುತ್ತಿರುವ ತಮ್ಮ ಮಗ ಮೊಬೈಲ್‌ನಲ್ಲಿ ಆಟವಾಡುವ ವೇಳೆ ಅಚಾತುರ್ಯವಾಗಿ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದಾನೆ ಎಂದು ಹೇಳಿಕೆ ನೀಡಿದ್ದಾರೆ.

ಪೋಷಕರ ಹೇಳಿಕೆ ಪೊಲೀಸರಿಗೆ ಸಮಂಜಸವೆನಿಸಲಿಲ್ಲ. ಆದ್ದರಿಂದ ತನಿಖೆ ಮುಂದುವರಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಪಿಣರಾಯಿ ವಿಜಯನ್ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಬಿ) (ಪೊಲೀಸ್, ಅಗ್ನಿಶಾಮಕ ದಳ ಅಥವಾ ಇತರ ಯಾವುದೇ ಅಗತ್ಯ ಸೇವೆಯನ್ನು ದಾರಿತಪ್ಪಿಸಲು ಉದ್ದೇಶಪೂರ್ವಕವಾಗಿ ವದಂತಿಗಳನ್ನು ಹರಡುವುದು ಅಥವಾ ಸುಳ್ಳು ಎಚ್ಚರಿಕೆಗಳನ್ನು ನೀಡುವುದರೊಂದಿಗೆ ವ್ಯವಹರಿಸುತ್ತದೆ) ಮತ್ತು 120 (ಒ) (ಯಾವುದೇ ಸಂವಹನ ವಿಧಾನದ ಮೂಲಕ ಯಾವುದೇ ವ್ಯಕ್ತಿಗೆ ತೊಂದರೆ ಉಂಟುಮಾಡುವ ಬಗ್ಗೆ ವ್ಯವಹರಿಸುತ್ತದೆ) ಅಡಿಯಲ್ಲಿ ಬೆದರಿಕೆ ಹಾಕಲು ಬಳಸಿದ ಮೊಬೈಲ್ ಸಂಖ್ಯೆಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜಕೀಯ ಪ್ರೇರಿತವಾಗಿ ನೀಡಿರುವ ನೋಟಿಸ್‌ ಹಿಂಪಡೆಯಿರಿ: EDಗೆ ಕೇಜ್ರಿವಾಲ್‌ ಪ್ರತಿಕ್ರಿಯೆ

ನವದೆಹಲಿ: ನನಗೆ ನೀಡಿರುವ ನೋಟಿಸ್‌ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ. ಇ.ಡಿ (Enforcement Directorate) ಕೂಡಲೇ ಸಮನ್ಸ್‌ ಹಿಂಪಡೆಯಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಹೇಳಿದ್ದಾರೆ.

ಸಮನ್ಸ್‌ ಕುರಿತು ಪ್ರತಿಕ್ರಿಯಿಸಿರುವ ಕೇಜ್ರಿವಾಲ್‌, ಬಿಜೆಪಿಯ ಒತ್ತಾಯದ ಮೇರೆಗೆ ನೋಟಿಸ್ ಕಳುಹಿಸಲಾಗಿದೆ. ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ಖಚಿತಪಡಿಸಿಕೊಳ್ಳಲು ನೋಟಿಸ್ ಕಳುಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಜ್ರಿವಾಲ್ ಅವರು ಬೆಳಿಗ್ಗೆ 11 ಗಂಟೆಗೆ ಕೇಂದ್ರ ತನಿಖಾ ಸಂಸ್ಥೆಯ ದೆಹಲಿ ಕಚೇರಿಯ ಮುಂದೆ ಹಾಜರಾಗಬೇಕಿತ್ತು. ಆದರೆ ಅವರು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಪತ್ರ ಬರೆದು ಸಮನ್ಸ್ ಅನ್ನು ಹಿಂಪಡೆಯುವಂತೆ ಕೇಳಿಕೊಂಡಿದ್ದಾರೆ.

ಯಾರೇ ಆದರೂ ಇ.ಡಿ ಸಮನ್ಸ್‌ಗಳನ್ನು ಗರಿಷ್ಠ ಮೂರು ಬಾರಿ ತಿರಸ್ಕರಿಸಬಹುದು. ಬಳಿಕ ಇ.ಡಿ ಜಾಮೀನು ರಹಿತ ವಾರಂಟ್ ನೀಡಬಹುದು. ಇ.ಡಿ ಕಟ್ಟುನಿಟ್ಟಾದ ಅಕ್ರಮ ಹಣ ವರ್ಗಾವಣೆ ಆಕ್ಟ್ ಅಥವಾ PMLA ಅಡಿಯಲ್ಲಿ ಸಮನ್ಸ್ ನೀಡಬಹುದು. 

ದೆಹಲಿ ಉಪ ಮುಖ್ಯಮಂತ್ರಿ ಆಗಿದ್ದ ಮನೀಸ್‌ ಸಿಸೋಡಿಯಾ ಅವರನ್ನು ಬಂಧಿಸಿದೆ. ಈಗ ಬಿಜೆಪಿ ಆಜ್ಞೆಯ ಮೇರೆಗೆ ನನಗೆ ನೋಟಿಸ್‌ ನೀಡಿದೆ. ಇದು ಅಕ್ರಮ ಮತ್ತು ರಾಜಕೀಯ ಪ್ರೇರಿತ. ನೋಟಿಸ್‌ ಹಿಂಪಡೆಯಬೇಕು ಎಂದು ಕೇಜ್ರಿವಾಲ್‌ ಒತ್ತಾಯಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist