ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಪೊಲೀಸ್ ಪೇದೆ ; ದೂರು ದಾಖಲಾಗ್ತಿದ್ದಂತೆ ನಾಪತ್ತೆ!
ವಿಜಯಪುರ (ಜ.25): :ಪೊಲೀಸ್ ಪೇದೆಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿನಾಯಕ ಟಕ್ಕಳಕಿ ಯುವತಿಗೆ ಮೋಸ ಮಾಡಿರುವ ಪೊಲೀಸ್ ಪೇದೆ. ವಿಜಯಪುರದ ಗಾಂಧಿಚೌಕ್ ಪೊಲೀಸ್ ಠಾಣೆಯಯಲ್ಲಿ ಸೇವೆ ಸಲ್ಲಿಸುತ್ತಿರುವ ಪೇದೆ.
ಯುವತಿಯೊಂದಿಗೆ ಮೊದಲು ಪರಿಚಯವಾಗಿರುವ ಪೇದೆ. ಪರಿಚಯ ಪ್ರೀತಿಗೆ ತಿರುಗಿದೆ. ಮದುವೆಯಾಗುವುದಾಗಿ ಮಾತುಕೊಟ್ಟಿದ್ದರಿಂದ ಪೊಲೀಸಪ್ಪನ ನಂಬಿದ್ದ ಯುವತಿ. ಯುವತಿಯ ನಂಬಿಕೆ ದುರುಪಯೋಗಪಡಿಸಿಕೊಂಡ ಪೇದೆ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಮದುವೆ ಬಗ್ಗೆ ಪ್ರಸ್ತಾಪಿಸಿದ್ದ ಯುವತಿ. ಆಗ ಮದುವೆಗೆ ನಿರಾಕರಿಸಿರುವ ವಿನಾಯಕ.
ಪೇದೆಯಿಂದ ಮೋಸ ಹೋಗಿರುವುದು ತಿಳಿದು ವಿಜಯಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಸಂತ್ರಸ್ತೆ. ಯುವತಿ ದೂರು ನೀಡುತ್ತಿದ್ದಂತೆ ನಾಪತ್ತೆಯಾಗಿರೋ ಪೊಲೀಸ್ ಪೇದೆ. ಬಂಧನ ಭೀತಿಯಿಂದ ಕಳೆದ 20 ದಿನಗಳಿಂದ ಠಾಣೆಗೆ ಬಾರದೆ ತಲೆಮರೆಸಿಕೊಂಡಿರುವ ವಿನಾಯಕ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು. ಆರೋಪಿ ಪತ್ತೆಗೆ ಹುಡುಕಾಟ ಮುಂದುವರಿಸಿದ್ದಾರೆ.
ಮೇಲುಕೋಟೆ ಶಿಕ್ಷಕಿ ದೀಪಿಕಾ ಹತ್ಯೆ ಪ್ರಕರಣ; ಅತಿಯಾದ ಸಲುಗೆಯಿಂದಲೇ ಕೊಲೆ!
ಮಂಡ್ಯ (ಜ.25): ಅತಿಯಾದ ಸಲುಗೆ ಅತಿರೇಕಕ್ಕೆ ತಿರುಗಿದಾಗ ಏನೆಲ್ಲಾ ಅನರ್ಥಗಳು ಸಂಭವಿಸುತ್ತವೆ ಎನ್ನುವುದಕ್ಕೆ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ ಸಾಕ್ಷಿಯಾಗಿದೆ. ಅಕ್ಕ.. ಅಕ್ಕ.. ಎಂದೇ ಹಿಂದೆ ತಿರುಗುತ್ತಿದ್ದ ಯುವಕನೇ ಆಕೆಯ ಉಸಿರುಗಟ್ಟಿಸಿ ಸಾಯಿಸಿ ಮಣ್ಣಿನಲ್ಲಿ ಸಮಾಧಿ ಮಾಡಿದನು. ಇದೀಗ ಪೊಲೀಸರಿಂದ ಬಂಧನಕ್ಕೊಳಗಾಗಿ ಜೈಲು ಕಂಬಿ ಹಿಂದೆ ಬಿದ್ದಿದ್ದಾನೆ.
ಪಾಂಡವಪುರ ತಾಲೂಕು ಮಾಣಿಕ್ಯನಹಳ್ಳಿ ಗ್ರಾಮದ ನಿತೀಶ್‌ಕುಮಾರ್ (೨೨) ಬಂಧಿತ ಆರೋಪಿ. ಮೇಲುಕೋಟೆ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಹಿಂದೆ ಜ.೨೦ರಂದು ದೀಪಿಕಾಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ನಿತೀಶ್, ಹೊಸಪೇಟೆಯಲ್ಲಿರುವ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಮುರಳಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಾಣಿಕ್ಯನಹಳ್ಳಿ ಗ್ರಾಮದ ವೆಂಕಟೇಶ್ ಪುತ್ರಿ ದೀಪಿಕಾ ಅದೇ ಗ್ರಾಮದ ಲೋಕೇಶ್‌ನನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರಿಗೆ ಮಗು ಕೂಡ ಇತ್ತು. ಮೇಲುಕೋಟೆ ಎಸ್‌ಇಟಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ದೀಪಿಕಾಗೆ ಸ್ವಗ್ರಾಮದ ನಿತೀಶ್‌ಕುಮಾರ್ ಎಂಬ ಯುವಕ ಪರಿಚಿತನಾಗಿದ್ದ. ದೀಪಿಕಾರನ್ನು ಅಕ್ಕ.. ಅಕ್ಕ.. ಎಂದು ಕರೆಯುತ್ತಾ ಮನೆಗೆಲ್ಲಾ ಬರುತ್ತಿದ್ದನು.
ಆಪ್ತ ಸ್ನೇಹಿತರಂತಿದ್ದ ದೀಪಿಕಾ ಮತ್ತು ನಿತೀಶ್ ನಡುವೆ ಫೋನ್ ಸಂಭಾಷಣೆ, ಆಗಾಗ ಭೇಟಿಯಾಗುವುದು, ಸಲುಗೆಯಿಂದ ಮಾತನಾಡುವುದು ಮುಂದುವರೆದಿತ್ತು. ಇವರಿಬ್ಬರ ನಡುವಿನ ಸಲುಗೆ ಕುಟುಂಬದವರಿಗೆ ಸರಿಕಂಡಿರಲಿಲ್ಲ. ಈ ವಿಚಾರವಾಗಿ ನಿತೀಶ್‌ಗೆ ಎಚ್ಚರಿಕೆಯನ್ನೂ ನೀಡಿದ್ದರು. ನಿತೀಶ್ ಜೊತೆಗಿನ ಸಲುಗೆ ಕುರಿತು ದೀಪಿಕಾರನ್ನು ಪ್ರಶ್ನಿಸಿದಾಗ ಆತ ನನ್ನ ತಮ್ಮ ಇದ್ದಂತೆ ಎಂದು ಹೇಳಿಕೊಂಡಿದ್ದರು.
ಕುಟುಂಬಸ್ಥರು ನೀಡಿದ ಎಚ್ಚರಿಕೆಯಿಂದ ದೀಪಿಕಾ ಎಚ್ಚೆತ್ತುಕೊಂಡು ನಿತೀಶ್‌ನಿಂದ ಅಂತರ ಕಾಯ್ದುಕೊಂಡಿದ್ದರು. ವಾರದಿಂದ ಫೋನ್ ಕರೆ ಮಾಡಿದರೆ ಸ್ವೀಕರಿಸದಿರುವುದು, ಆತ ಭೇಟಿಯಾಗಲು ಬಯಸಿದಾಗ ಸಿಗದೆ ಓಡಾಡುವುದು ಮಾಡುತ್ತಿದ್ದರು. ದೀಪಿಕಾ ತನ್ನಿಂದ ದೂರವಾಗುತ್ತಿರುವುದನ್ನು ಕಂಡು ನಿತೀಶ್‌ಗೆ ಸಹಿಸಲಾಗಿರಲಿಲ್ಲ. ನಿತೀಶ್ ಹುಟ್ಟುಹಬ್ಬಕ್ಕೆ ಶರ್ಟ್‌ವೊಂದನ್ನು ಗಿಫ್ಟ್ ನೀಡುವುದಾಗಿ ಹೇಳಿದ್ದ ದೀಪಿಕಾ ಅದನ್ನೂ ಕೊಡಿಸಿರಲಿಲ್ಲ. ಹುಟ್ಟುಹಬ್ಬದ ದಿನ ಭೇಟಿಗೂ ಸಿಕ್ಕಿರಲಿಲ್ಲವೆಂದು ಹೇಳಲಾಗಿದೆ.