ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸಾವು!
ಬಂಟ್ವಾಳ ಡಿಸೆಂಬರ್ 7: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ.
ಡಿಸೆಂಬರ್ 6 ರಂದು ಸಂಜೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ನಾರಾಯಣರವರು ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟು ಗಂಭೀರ ಗಾಯಗೊಂಡಿದ್ದಾರೆ.
ಕೂಡಲೇ ಗಾಯಾಳುವನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಟಿಪ್ಪರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, ಇಬ್ಬರ ಸಜೀವ ದಹನ
ಬೆಳಗಾವಿ ಡಿಸೆಂಬರ್ 07: ಟಿಪ್ಪರ್ ಗೆ ಕಾರೊಂದು ಡಿಕ್ಕಿ ಹೊಡೆ ಪರಿಣಾಮ ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದು ಇಬ್ಬರು ಸಜೀವಾಗಿ ದಹನವಾದ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್(24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಎಂದು ಗುರುತಿಸಲಾಗಿದೆ.
ಒಂದೇ ಕುಟುಂಬದ ನಾಲ್ವರು ರಾತ್ರಿ ಬಂಬರಗಾ ಗ್ರಾಮಕ್ಕೆ ಕಾರಿನಲ್ಲಿ ಹೊರಟಿದ್ದು, ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸಾಗುತ್ತಿದ್ದರು. ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಟಿಪ್ಪರ್‌ನ ಡಿಸೇಲ್ ಟ್ಯಾಂಕ್ ಒಡೆದು ಕೂಡಲೇ ಬೆಂಕಿ ಹೊತ್ತಿಕೊಂಡಿದೆ.
ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರು ಇವರನ್ನು ರಕ್ಷಿಸಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಮಹೇಶ್ ಬೆಳ್ಗಾಂವಕರ್ ಮತ್ತು ಸ್ನೇಹಾ ಬೆಳ್ಗುಂದ್ಕರ್ ಗಂಭೀರ ಗಾಯಗಳಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತ ಆಗುತ್ತಿದ್ದಂತೆ ಟಿಪ್ಪರ್ ಡ್ರೈವರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಸ್ನೇಹಾ, ಎಸಿಪಿ ಮತ್ತು ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇಬ್ಬರ ಶವವನ್ನು ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ..