ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮರಕ್ಕೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ; ಇಬ್ಬರ ಸಾವು - ಹಲವು ಪ್ರಯಾಣಿಕರಿಗೆ ಗಾಯ..!

Twitter
Facebook
LinkedIn
WhatsApp
ಮರಕ್ಕೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ; ಇಬ್ಬರ ಸಾವು - ಹಲವು ಪ್ರಯಾಣಿಕರಿಗೆ ಗಾಯ..!

ಚಿಕ್ಕಬಳ್ಳಾಪುರ, ಡಿ.07: ಮರಕ್ಕೆ ಡಿಕ್ಕಿ ಹೊಡೆದು ಬಸ್ ಪಲ್ಟಿ(Bus Palti) ಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ(Bagepalli) ತಾಲೂಕಿನ ಪಾತಪಾಳ್ಯ ಗ್ರಾಮದ ಬಳಿ ನಡೆದಿದೆ. ಮೃತರಲ್ಲಿ ಓರ್ವ ರೇಚನಾಯ್ಕನಹಳ್ಳಿ ವೆಂಕಟರಾಪ್ಪ(60) ಎಂದು ತಿಳಿದು ಬಂದಿದ್ದು, ಮತ್ತೋರ್ವನ ಹೆಸರು ತಿಳಿದು ಬಂದಿಲ್ಲ. ಇನ್ನುಳಿದಂತೆ ಬಸ್​​ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, 7 ಜನರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಕೂಡಲೇ ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಪಾತಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನು ಈ ಕುರಿತು ಬಸ್​ನಲ್ಲಿದ್ದ ಪ್ರಯಾಣಿಕ ರಾಜು ಎಂಬುವವರು ಮಾತನಾಡಿ ‘ಅತಿ ವೇವಾಗಿ ಬಸ್ ಚಲಿಸಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಬಸಕ್ಕೆ ಮರವೇ ಉರುಳಿ ಬಿದ್ದಿದ್ದು, ಬಸ್​ನಲ್ಲಿನ ಎಡಭಾಗದಲ್ಲಿ ಕುಳಿತಿದ್ಧ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ನನಗೆ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದಿದ್ದಾರೆ.

ಆರ್ ಟಿ ಓ ಹಾಗೂ ಪೊಲೀಸರ ವಿರುದ್ಧ ಸ್ಥಳೀಯರ ಆಕ್ರೋಶ

ಇನ್ನು ಖಾಸಗಿ ಬಸ್ ಪಲ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಟಿಓ ಹಾಗೂ ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಸಾರಿಗೆ ಸಂಚಾರ ನಿಯಮ ಉಲ್ಲಂಘಿಸಿ ಬಸ್​ಗಳನ್ನು ಚಲಾಯಿಸುತ್ತಿದ್ದಾರೆ. ಆರ್​ಟಿಓ ಹಾಗೂ ಪೊಲೀಸರು ಕಣ್ಣಿದ್ದು ಕುರುಡರಾಗಿದ್ದಾರೆ. ಖಾಸಗಿ ಬಸ್​ಗಳ ಆಟಾಟೋಪಕ್ಕೆ ಕಡಿವಾಣ ಹಾಕುವವರೇ ಇಲ್ಲದಂತಾಗಿದೆ. ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟಿದ್ದಾರೆ, 30 ಜನರಿಗೆ ಗಂಭೀರ ಗಾಯಗಳಾಗಿವೆ. ಅಪಘಾತಕ್ಕೆ ಹೊಣೆ ಯಾರು ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಅಪಘಾತವಾಗಿ ಗಂಟೆಗಳೆ ಕಳೆದ್ರೂ ಸ್ಥಳಕ್ಕೆ ಬರದ ಆಂಬುಲೆನ್ಸ್

ಇನ್ನು ಖಾಸಗಿ ಬಸ್ ಉರುಳಿಬಿದ್ದು 25ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡು ನಡು ರಸ್ತೆಯಲ್ಲಿ ರಕ್ಷಣೆಗೆ ಮೊರೆ ಇಡುತ್ತಿದ್ದರು. ಆದರೆ, ಗಂಟೆಗಳೇ ಕಳೆದ್ರೂ ಆಂಬುಲೆನ್ಸ್ ಆಗಲಿ ಅಥವಾ ಸರ್ಕಾರಿ ಆಸ್ತತ್ರೆಗಳ ಅಂಬುಲೇನ್ಸ್​ಗಳು ಸ್ಥಳಕ್ಕೆ ಬರಲಿಲ್ಲವೆಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ – ಬೈಕ್ ಗೆ ಬಸ್‌ ಡಿಕ್ಕಿಯಾಗಿ ಯುವತಿ ಸಾವು

ಹುಬ್ಬಳ್ಳಿ ಡಿಸೆಂಬರ್ 07 : ಬೈಕ್‌ಗೆ ಬಸ್ ಡಿಕ್ಕಿಯಾದ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಘಟನೆ ನಡೆದಿದೆ. ಮೃತ ಯುವತಿಯನ್ನು ನಂದಾ ಬಿರ್ಜಿ (25) ಎಂದು ಗುರುತಕಿಸಲಾಗಿದೆ.ರಾಯಬಾಗಿಯಿಂದ ಧರ್ಮಸ್ಥಳಕ್ಕೆ ಈ ಬಸ್ ತೆರಳುತ್ತಿದ್ದು ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ತೀವ್ರ ರಕ್ತ ಸ್ರಾವದಿಂದ ನಂದಾ ಬಿರ್ಜಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist