ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸರಳ, ಸಜ್ಜನ ರಾಜಕಾರಣಿ ಮಾಜಿ ಸಚಿವ ಶ್ರೀರಂಗದೇವರಾಯಲು ಇನ್ನಿಲ್ಲ

Twitter
Facebook
LinkedIn
WhatsApp
ಸರಳ, ಸಜ್ಜನ ರಾಜಕಾರಣಿ ಮಾಜಿ ಸಚಿವ ಶ್ರೀರಂಗದೇವರಾಯಲು ಇನ್ನಿಲ್ಲ

ಕೊಪ್ಪಳ: ಸರಳ, ಸಜ್ಜನ ರಾಜಕಾರಣಿ, ಕನಕಗಿರಿ ಮತ್ತು ಗಂಗಾವತಿ ವಿಧಾನಸಭೆ ಕ್ಷೇತ್ರದಿಂದ ಸತತ ಐದು ಬಾರಿ ಶಾಸಕರಾಗಿದ್ದ, ಮಾಜಿ ಸಚಿವ ಶ್ರೀರಂಗದೇವರಾಯಲು (Srirangadevarayalu)  (85) ಮಂಗಳವಾರ ಸಂಜೆ ನಿಧನರಾಗಿದ್ದಾರೆ.

ಕಳೆದ ಕೆಲ ದಿನದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಗಂಗಾವತಿಯ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಮೃತರಿಗೆ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷೆ ಲಲಿತಾರಾಣಿ ಪತ್ನಿ, ಪುತ್ರರಾದ ಉದ್ಯಮಿ ಕೃಷ್ಣದೇವರಾಯ, ವೈದ್ಯ ವಿ.ಎಸ್.ಎನ್.ಡಿ ರಾಯಲು, ಪುತ್ರಿ ಲತಾ ಸೇರಿ ಅಪಾರ ಬಂಧು-ಬಳಗವಿದೆ. ಮೃತರ ಅಂತ್ಯಸಂಸ್ಕಾರವು ಕ್ಷತ್ರೀಯ ವಿಧಿ-ವಿಧಾನಗಳಂತೆ ಗಂಗಾವತಿ ತಾಲೂಕು ಆನೆಗೊಂದಿ ಗ್ರಾಮದಲ್ಲಿ ಬುಧವಾರ (ಆ.23) ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ವಿಜಯನಗರ (Vijayanagara) ಸಾಮ್ರಾಜ್ಯದ ಮೂಲ ರಾಜಧಾನಿಯಾಗಿದ್ದ ಆನೆಗೊಂದಿ ರಾಜವಂಶಕ್ಕೆ ಸೇರಿದವರು. ಅರವೀಡು ರಾಜವಂಶಸ್ಥ ಶ್ರೀರಂಗದವರಾಯಲು ನರಪತಿ ಸಂಸ್ಥಾನಕ್ಕೆ ಸೇರಿದವರು. ಕಳೆದ 1938ರಲ್ಲಿ ತಂದೆ ಶ್ರೀವೆಂಕಟದೇವರಾಯಲು- ತಾಯಿ ಶ್ರೀಲಕ್ಷ್ಮಿದೇವಮ್ಮರ ಮಗನಾಗಿ ಗಂಗಾವತಿ ತಾಲೂಕು ಆನೆಗೊಂದಿ ಗ್ರಾಮದಲ್ಲಿ ಶ್ರೀರಂಗದೇವರಾಯಲು ಜನಿಸಿದ್ದಾರೆ. ತಮ್ಮ ಅಧಿಕಾರವಧಿಯಲ್ಲಿ ಸಾಕಷ್ಟು ಜನಪರ ಯೋಜನೆ ಕ್ಷೇತ್ರಕ್ಕೆ ತಂದ ಶ್ರೇಯಸ್ಸು ರಂಗದೇವರಾಯಲು ಅವರಿಗೆ ಸೇರುತ್ತದೆ.

ಐದುಬಾರಿ ಶಾಸಕ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹೊಸಪೇಟೆಯ ಮುನ್ಸಿಪಲ್ ಹೈಸ್ಕೂಲ್ ಮುಗಿಸಿದ್ದ ರಂಗದೇವರಾಯಲು, 1967ರಲ್ಲಿ ಆಂಧ್ರದ ಅನಕಾಪಲ್ಲಿ ಮೂಲದ ರಾಜಮನೆತನದ ಲಲಿತಾರಾಣಿ ಅವರನ್ನು ವಿವಾಹ ಆಗಿದ್ದರು. ಕಾಂಗ್ರೆಸ್ ಪಕ್ಷದಿಂದ ರಾಜಕೀಯಕ್ಕೆ ಪ್ರವೇಶ ಪಡೆದಿದ್ದ ರಾಯಲು, ಕೊನೆವರೆಗೂ ಪಕ್ಷಕ್ಕೆ ನಿಷ್ಠೆಯಿಂದ ಇದ್ದರು. ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ 1989, 1994 ಮತ್ತು 1999ರ ಚುನಾವಣೆಯಲ್ಲಿ ಸತತವಾಗಿ ಗೆಲುವು ಸಾಧಿಸಿದ ಏಕೈಕ ರಾಜಾಕಾರಣಿ ಎಂಬ ಖ್ಯಾತಿ ಈಗಲೂ ರಂಗದೇವರಾಯಲು ಅವರ ಹೆಸರಲ್ಲಿದೆ. ಈ ಮೊದಲು ಕನಕಗಿರಿ ವಿಧಾನಸಭೆ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು.

ಇಲ್ಲಿ ಇಂಡಿಯಾ ಪೆಸಿಫಿಕ್‌ ದ್ವೀಪಗಳ ಸಹಕಾರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರನೇ ಹಂತದಲ್ಲಿ ಮೇ 23ರಂದು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ.

1978ರಲ್ಲಿ ರಾಜಕೀಯ ಪ್ರವೇಶಿಸುವ ರಂಗದೇವರಾಯಲು, ಅದೇ ವರ್ಷದಲ್ಲಿ ಜೆಎನ್‍ಪಿ ಪಕ್ಷದಿಂದ ಸ್ಪರ್ಧಿಸಿ ಕಾಂಗ್ರೆಸ್‍ನ ಎಚ್.ಸಿ. ಯಾದವರಾವ್ ವಿರುದ್ಧ ಪರಾಭವಗೊಂಡಿದ್ದರು. ಕನಕಗಿರಿ ವಿಧಾನಸಭಾ ಕ್ಷೇತ್ರದಿಂದ 1983 ಹಾಗೂ 1985ರ ಚುನಾವಣೆಯಲ್ಲಿ ಗೆಲುವು ಸಾಧಿಸಿ ಶಾಸಕರಾಗಿದ್ದರು.

ಮಂತ್ರಿ ಸ್ಥಾನ: ವೀರಪ್ಪ ಮೋಯ್ಲಿ (Veerappa Moily) ಅವರ ಸಚಿವ ಸಂಪುಟದಲ್ಲಿ 1993ರಲ್ಲಿ ಶ್ರೀರಂಗದೇವರಾಯಲು ತುಂಗಭದ್ರ ಕಾಡಾ ಖಾತೆಯ ಸಚಿವ ಸ್ಥಾನ ಸಿಕ್ಕಿತ್ತು. ಕಾಡಾ ವ್ಯಾಪ್ತಿಯಲ್ಲಿ ನೀರಾವರಿ ಪ್ರದೇಶ ಅಚ್ಚುಕಟ್ಟು ಅಭಿವೃದ್ಧಿ, ಹೈದ್ರಾಬಾದ್ ಅಭಿವೃದ್ಧಿ ಮಂಡಳಿ ಹಾಗೂ ರಾಜ್ಯ ಹೆದ್ದಾರಿ ಅಭಿವೃದ್ಧಿ ಮಂಡಳಿ ಜವಾಬ್ದಾರಿ ಖಾತೆಯ ವ್ಯಾಪ್ತಿಯಲ್ಲಿತ್ತು. ಎಸ್.ಎಂ. ಕೃಷ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಖಾದಿ ಮಂಡಳಿ ಅಧ್ಯಕ್ಷ ಸ್ಥಾನ ಲಭಿಸಿತ್ತು. ಆಂಧ್ರದಿಂದ ತರಲಾಗಿದ್ದ ಅನಕಾಪಲ್ಲಿ ಎಂಬ ವಿಶೇಷ ಕಬ್ಬಿನ ತಳಿಯನ್ನು ಆನೆಗೊಂದಿ ಭಾಗದಲ್ಲಿ ಅಭಿವೃದ್ಧಿ ಪಡಿಸಿದ ಕೀರ್ತಿ ರಂಗದೇವರಾಯಲು ಅವರಿಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist