ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸುವ ಎಂದು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Twitter
Facebook
LinkedIn
WhatsApp
ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸುವ ಎಂದು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಗೌರಿಬಿದನೂರು, ನ.7: ಮೊಬೈಲ್​ನಲ್ಲೇ ಹೆಚ್ಚು ಸಮಯ ಕಳೆಯಬೇಡ. ಅದರ ಬದಲು ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸುವ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಸಮೀಪದ ಚಿತ್ತವಾಳಹಳ್ಳಿ ಗ್ರಾಮದಲ್ಲಿ ನಡೆದಿದೆ.

ಲೋಕೇಶ್ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಭಾನುವಾರದಂದು ತನ್ನ ಪೋಷಕರೊಂದಿಗೆ ಜಗಳವಾಡಿ, ಮನೆಯಿಂದ ಹೊರಬಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈತನಾಗಿರುವ ಲೋಕೇಶ್ ತಂದೆ, ತನ್ನ ಮಗ ಮೊಬೈಲ್​ನಲ್ಲಿ ಕಾಲ ಕಳೆಯುವ ಬದಲು ಶಿಕ್ಷಣದ ಮೇಲೆ ಗಮನ ಹರಿಸಬೇಕೆಂದು ಬಯಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆತ್ಮಹತ್ಯೆ ಸಹಾಯವಾಣಿ

ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821, ಆರೋಗ್ಯ ವಾಣಿ: 104, ಸಹಾಯ್ ಸಹಾಯವಾಣಿ: 080-25497777

ತೀರ್ಥಹಳ್ಳಿಯಲ್ಲಿ ಪ್ರತಿಮಾ ಅಂತ್ಯಕ್ರಿಯೆ – ಪುತ್ರನಿಂದ ತಾಯಿಯ ಚಿತೆಗೆ ಅಗ್ನಿಸ್ಪರ್ಶ

ಶಿವಮೊಗ್ಗ: ಬೆಂಗಳೂರಿನಲ್ಲಿ ಹತ್ಯೆಯಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ (Department Of Mines And Geology) ಉಪ ನಿರ್ದೇಶಕಿ (Deputy Director) ಪ್ರತಿಮಾ (Prathima) ಅಂತ್ಯಕ್ರಿಯೆ (Funeral) ಇಂದು ಶಿವಮೊಗ್ಗ (Shivamogga) ಜಿಲ್ಲೆ ತೀರ್ಥಹಳ್ಳಿಯ (Thirthahalli) ಹಿಂದೂ ರುದ್ರಭೂಮಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಕುಟುಂಬಸ್ಥರು ನೆರವೇರಿಸಿದರು.

ಪ್ರತಿಮಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯವರಾದ ಪ್ರತಿಮಾ ಉದ್ಯೋಗದ ನಿಮಿತ್ತ ಬೆಂಗಳೂರಿನ ಅಪಾರ್ಟ್ಮೆಂಟ್‌ವೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಪತಿ ಸತ್ಯನಾರಾಯಣ ಕೃಷಿಕರಾಗಿದ್ದ ಕಾರಣ ಪತಿ ಹಾಗು ಪುತ್ರ ಪಾರ್ಥ ತೀರ್ಥಹಳ್ಳಿಯಲ್ಲಿ ವಾಸವಾಗಿದ್ದರು. ಪ್ರತಿಮಾ ರಜಾ ದಿನಗಳಲ್ಲಿ ಆಗಾಗ ತೀರ್ಥಹಳ್ಳಿಗೆ ಬಂದು ಹೋಗುತ್ತಿದ್ದರು.

ಸಣ್ಣ ವಯಸ್ಸಿನಲ್ಲೇ ಉನ್ನತ ಹುದ್ದೆಯಲ್ಲಿದ್ದ ಪ್ರತಿಮಾ ಇಲಾಖೆಯಲ್ಲಿ ಉತ್ತಮ ಹೆಸರು ಗಳಿಸಿದ್ದರು. ಪ್ರಾಮಾಣಿಕ ಅಧಿಕಾರಿ ಎನಿಸಿಕೊಂಡಿದ್ದರು. ಆದರೆ ಇಂತಹ ಅಧಿಕಾರಿ ಪ್ರತಿಮಾ ಅವರನ್ನು ಶನಿವಾರ ರಾತ್ರಿ ಅವರ ಅಪಾರ್ಟ್ಮೆಂಟ್‌ನಲ್ಲೇ ಕೊಲೆ ಮಾಡಿದ್ದಾರೆ. ಕೊಲೆಯಾಗಿದ್ದ ಪ್ರತಿಮಾ ಅವರ ಮರಣೋತ್ತರ ಶವ ಪರೀಕ್ಷೆ ನಂತರ ಕುಟುಂಬಸ್ಥರು ಪ್ರತಿಮಾ ಮೃತದೇಹವನ್ನು ಭಾನುವಾರ ರಾತ್ರಿ ಬೆಂಗಳೂರಿನಿಂದ ತೀರ್ಥಹಳ್ಳಿಗೆ ಕರೆತಂದಿದ್ದರು. ತೀರ್ಥಹಳ್ಳಿಯ ಸತ್ಯನಾರಾಯಣ ಅವರ ಮೂಲ ಮನೆಯಲ್ಲಿ ರಾತ್ರಿಯಿಂದ ಮುಂಜಾನೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಕಳೆದ ವಾರವಷ್ಟೇ ಗೃಹ ಪ್ರವೇಶವಾಗಿದ್ದ ನೂತನ ಮನೆಗೆ ಮುಂಜಾನೆ 10 ಗಂಟೆಗೆ ಹಳೆ ಮನೆಯಿಂದ ಹೊಸ ಮನೆಗೆ ಮೃತದೇಹ ಕೊಂಡೊಯ್ಯಲಾಯಿತು. ಅಲ್ಲಿ 10 ನಿಮಿಷಗಳ ಕಾಲ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. 

ನಂತರ ಪ್ರತಿಮಾ ಪಾರ್ಥಿವ ಶರೀರವನ್ನು ತುಂಗಾ ನದಿ ದಡದಲ್ಲಿರುವ ಹಿಂದೂ ರುದ್ರ ಭೂಮಿಗೆ ಕೊಂಡೊಯ್ಯಲಾಯಿತು. ಹಿಂದೂ ರುದ್ರಭೂಮಿಯಲ್ಲಿ ಪ್ರತಿಮಾ ಅವರಿಗೆ ಕುಟುಂಬಸ್ಥರು ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಿದರು. ತಾಯಿಯ ಚಿತೆಗೆ ಪುತ್ರ ಪಾರ್ಥ ಅಗ್ನಿ ಸ್ಪರ್ಶ ನೆರವೇರಿಸಿದ್ದಾನೆ. ಸದ್ಯದ ಪರಿಸ್ಥಿತಿಯಲ್ಲಿ ಪ್ರಾಮಾಣಿಕ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವುದು ಕಷ್ಟವಾಗಿದೆ. ಸರ್ಕಾರ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು. ಇಂತಹ ಘಟನೆ ಮರುಕಳಿಸದಂತೆ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಮಾ ಕುಟುಂಬಸ್ಥರು ಹಾಗೂ ಸ್ಥಳೀಯರ ಆಗ್ರಹವಾಗಿದೆ.

ಒಟ್ಟಾರೆ ಬಾಳಿ ಬದುಕಬೇಕಾದ ವಯಸ್ಸಿನಲ್ಲಿ, ಇನ್ನು ಹಂತ ಹಂತವಾಗಿ ಉನ್ನತ ಹುದ್ದೆ ಅಲಂಕರಿಸುವ ಕನಸು ಕಂಡಿದ್ದ ಪ್ರತಿಮಾ ಕನಸು ಕಮರಿ ಹೋಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ