ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ವಿದ್ಯುತ್ ಕಂಬಕ್ಕೆ ತಲೆ ಬಡಿದು ವಿದ್ಯಾರ್ಥಿ ಸಾವು
ಕಾಸರಗೋಡು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ತಲೆ ವಿದ್ಯುತ್ ಕಂಬಕ್ಕೆ ಬಡಿದು ವಿದ್ಯಾರ್ಥಿ ಸಾವಿಗೀಡಾದ ಘಟನೆ ಚೆಮ್ನಾಡ್‌ನಲ್ಲಿ ನಡೆದಿದೆ.
ಮನ್ನಿಪ್ಪಾಡಿ ಹೌಸಿಂಗ್ ಕಾಲನಿಯ ಸುನಿಲ್ ಕುಮಾರ್ ಅವರ ಪುತ್ರ ಮನ್ವಿತ್ (15) ಸಾವಿಗೀಡಾದ ವಿದ್ಯಾರ್ಥಿ.
ಚೆಮ್ನಾಡ್ ಜಮಾಅತ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯಾಗಿರುವ ಮನ್ವಿತ್ ಬುಧವಾರ ಸಂಜೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ವಿದ್ಯುತ್ ಕಂಬಕ್ಕೆ ತಲೆ ಬಡಿದು ಸಾವು ಸಂಭವಿಸಿತು.
ಬಸ್ ಪ್ರಯಾಣಿಕರರಿಂದ ಕಿಕ್ಕಿರಿದು ತುಂಬಿತ್ತು. ಗಂಭೀರ ಗಾಯಗೊಂಡ ಮನ್ವಿತ್‌ನನ್ನು ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
Bagalakote: ಕಾಣೆಯಾಗಿದ್ದ ಲಾಯರ್ ಶವವಾಗಿ ಪತ್ತೆ… ಕಲ್ಲಿನಿಂದ ಜಜ್ಜಿ ಕೊಂದಿರುವ ಶಂಕೆ
ಬೀಳಗಿ: ಕಾಣೆಯಾಗಿದ್ದ ವಕೀಲರೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೀಳಗಿ ತಾಲೂಕಿನ ತುಮ್ಮರಮಟ್ಟಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ವಕೀಲ ಗಿರೀಶ್ ಕಾಡಣ್ಣವರ(38) ಎಂದು ಗುರುತಿಸಲಾಗಿದೆ.
ಅಪರಿಚಿತರು ಕಲ್ಲಿನಿಂದ ತಲೆ ದೇಹ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಗ್ರಾಮದ ವಾರಿ ಮಲ್ಲಯ್ಯನ ಗುಡಿ ಬೆಟ್ಟದ ಮೇಲೆ ಪತ್ತೆಯಾಗಿದ್ದು, ಈತ ಬೀಳಗಿ ತಾಲ್ಲೂಕಾ ನ್ಯಾಯಾಲಯದಲ್ಲಿ ವಕೀಲಿ ವೃತ್ತಿ ಮಾಡುತ್ತಿದ್ದು, ಅಕ್ಟೋಬರ್ ೧೫ ರಿಂದ ಮನೆಯಿಂದ ನಾಪತ್ತೆಯಾಗಿದ್ದರು.
ಘಟನೆಗೆ ಕಾರಣ ಏನೆಂದು ಇನ್ನಷ್ಟೇ ತಿಳಿದುಬರಬೇಕಾಗಿದೆ, ಘಟನಾ ಸ್ಥಳಕ್ಕೆ ಬೀಳಗಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.