ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಸ್ತಿ ಆಸೆಗೆ ಬಿದ್ದು ಪತ್ನಿಯನ್ನೇ ಕೊಂದ ಶಿಕ್ಷಕ..!

Twitter
Facebook
LinkedIn
WhatsApp
ಆಸ್ತಿ ಆಸೆಗೆ ಬಿದ್ದು ಪತ್ನಿಯನ್ನೇ ಕೊಂದ ಶಿಕ್ಷಕ..!

ಮಂಡ್ಯ: ಪ್ರೊಫೆಸರ್ ಒಬ್ಬ ಆಸ್ತಿ ಆಸೆಗಾಗಿ ತನ್ನ ಪತ್ನಿಯನ್ನು (Wife) ಕೊಲೆಗೈದ ಘಟನೆ ಇಲ್ಲಿನ (Mandya) ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಕೊಲೆಗೈದ ಬಳಿಕ ಸಹಜ ಸಾವೆಂದು ನಾಟಕವಾಡಿ ಈಗ ಪೊಲೀಸರ (Police) ಅತಿಥಿಯಾಗಿದ್ದಾನೆ.

ಕೊಲೆಯಾದ ಮಹಿಳೆಯನ್ನು ಎಸ್.ಶೃತಿ (32) ಎಂದು ಗುರುತಿಸಲಾಗಿದೆ. ಹತ್ಯೆಗೀಡಾದವಳ ಪತಿ ಟಿ.ಎನ್.ಸೋಮಶೇಖರ್ (41) ಹಣದ ದಾಹಕ್ಕೆ ಬಿದ್ದು, ಮಲಗಿದ್ದ ಪತ್ನಿಯನ್ನು ದಿಂಬು ಹಾಗೂ ಬೆಡ್ ಶೀಟ್‍ನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ.

ಶೃತಿಯ ತಂದೆ, ತಾಯಿ ಕೆಲವು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತ ಪಟ್ಟಿದ್ದರು. ಆಕೆಯ ತಂಗಿ 2018ರಲ್ಲಿ ಅಪಘಾತದಲ್ಲಿ ಸಾವಿಗೀಡಾಗಿದ್ದಳು. ಇದಾದ ಬಳಿಕ ಆಕೆಯ ಹೆಸರಿಗೆ 10 ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಆಸ್ತಿ ಸೇರಿತ್ತು. ಮೈಸೂರಿನ ಪ್ರಮುಖ ನಗರಗಳಲ್ಲಿದ್ದ ಕಮರ್ಷಿಯಲ್ ಕಟ್ಟಡಗಳು, ಮನೆ ಹಾಗೂ ಸೈಟ್‍ಗಳು ಶೃತಿಯ ಹೆಸರಲ್ಲಿತ್ತು. ಆ ಆಸ್ತಿಯನ್ನು ಮಾರಿ ಬೇರೆಡೆ ಆಸ್ತಿ ಕೊಳ್ಳಲು ಶೃತಿಗೆ ಆರೋಪಿ ಪತಿ ಒತ್ತಾಯಿಸುತ್ತಿದ್ದ. ಪತಿಯ ಆಸ್ತಿ ಮಾರಾಟ ವಿಚಾರಕ್ಕೆ ಪತ್ನಿ ನಿರಾಕರಿಸಿದ್ದಾಳೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಹಲವು ಬಾರಿ ಜಗಳ ಕೂಡ ಆಗಿತ್ತು. ಇದೇ ಕಾರಣಕ್ಕೆ ಕಳೆದ ಶನಿವಾರ ಆಕೆ ಮಲಗಿದ್ದ ವೇಳೆ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ.

ಕೊಲೆಯಾದ ಬಳಿಕ ಪಲ್ಸ್ ರೇಟ್ ಕಮ್ಮಿಯಾಗಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾಳೆಂದು ನಾಟಕವಾಡಿದ್ದ. ಸೋಮಶೇಖರ್ ಭಾವ ಮೃತ ಶೃತಿ ಚಿಕ್ಕಪ್ಪನಿಗೆ ಕರೆ ಮಾಡಿ ಸಹಜ ಸಾವೆಂದು ತಿಳಿಸಿದ್ದ. ಅನುಮಾನಗೊಂಡ ಶೃತಿಯ ಚಿಕ್ಕಪ್ಪ ಕುಮಾರಸ್ವಾಮಿ ಎಂಬವರು ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಸಿ ಕೊಲೆಗೈದಿದ್ದು ಬೆಳಕಿಗೆ ಬಂದಿತ್ತು.

ವಿಚಾರಣೆ ವೇಳೆ ಆರೋಪಿ ತಾನೇ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ – ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ದಾರುಣ ಸಾವು

ಆನೇಕಲ್: ಟಿವಿಎಸ್ ಎಕ್ಸೆಲ್ ಬೈಕ್‌ಗೆ (Bike) ಖಾಸಗಿ ಬಸ್ (Private Bus) ಡಿಕ್ಕಿಯಾದ ಪರಿಣಾಮ ಮಹಿಳೆ (Woman) ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು-ಬನ್ನೇರುಘಟ್ಟ ಮುಖ್ಯರಸ್ತೆಯ ಮೀನಾಕ್ಷಿ ದೇವಾಲಯದ ಬಳಿ ನಡೆದಿದೆ.

ಹುಳಿಮಾವು (Hulimavu) ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ (Accident) ಸಂಭವಿಸಿದ್ದು, ಘಟನೆಯಲ್ಲಿ ಶ್ಯಾನಭೋಗನಹಳ್ಳಿ ನಿವಾಸಿ ಸೆಲ್ವಿ (೪೮) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ಸಂದರ್ಭ ಅವಘಡ ಸಂಭವಿಸಿದೆ. ಸೆಲ್ವಿ ಪತಿ ಮಾರತಹಳ್ಳಿಯಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದರು. ಮಗಳನ್ನು ಸಹಾ ಮಾರತಹಳ್ಳಿಗೆ ಮದುವೆ ಮಾಡಿಕೊಡಲಾಗಿತ್ತು.

ಮಾರತಹಳ್ಳಿಯ ಮಗಳ ಮನೆಗೆಂದು ಪತಿ ಜೊತೆ ಹೊರಟಿದ್ದ ಸಂದರ್ಭ ಅತಿವೇಗವಾಗಿ ಬಂದ ಖಾಸಗಿ ಬಸ್ ಟಿವಿಎಸ್ ಎಕ್ಸೆಲ್ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯಲ್ಲಿ ಬಿದ್ದ ಮಹಿಳೆ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲೇ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹುಳಿಮಾವು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ರವಾನೆ ಮಾಡಿ ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ