ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ಳಂಬೆಳಗ್ಗೆ ಭೀಕರ ಅಪಘಾತ ; ಇಬ್ಬರ ದುರ್ಮರಣ!

Twitter
Facebook
LinkedIn
WhatsApp
ಬೆಳ್ಳಂಬೆಳಗ್ಗೆ ಭೀಕರ ಅಪಘಾತ ; ಇಬ್ಬರ ದುರ್ಮರಣ!
ರಾಮನಗರ: ಬೆಳ್ಳಂಬೆಳಗ್ಗೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.

ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಘಟನೆ ನಡೆದಿದೆ. ಹಿಂಬದಿಯಿಂದ ಓಮ್ನಿ ಕಾರು ಲಾರಿಗೆ (Omni- Lorry Accident) ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.

ಬೆಂಗಳೂರಿನಿಂದ ಮೈಸೂರು ಕಡೆ ಹೋಗ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಓಮ್ನಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಓಮ್ನಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಗುದ್ದಿದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ: ಮಾರಕಾಸ್ತ್ರಗಳಿಂದ ಕೊಚ್ಚಿ ಹೆಸ್ಕಾಂ ಬಿಲ್ ಕಲೆಕ್ಟರ್‌ ಬರ್ಬರ ಹತ್ಯೆ

ಧಾರವಾಡ(ಅ.14):  ಹೆಸ್ಕಾಂ ಬಿಲ್ ಕಲೆಕ್ಟರ್‌ನೊಬ್ಬನನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆಗೈದ ಘಟನೆ ಧಾರವಾಡ ಹೊರವಲಯದ ಹಳಿಯಾಳ್ ಬೈಪಾಸ್ ರಸ್ತೆಯಲ್ಲಿ ನಿನ್ನೆ(ಶುಕ್ರವಾರ) ನಡೆದಿದೆ. ರಜಾಕ್ ಕವಲಗೇರಿ ಎಂಬಾತನೇ ಹತ್ಯೆಯಾದ ವ್ಯಕ್ತಿಯಾಗಿದ್ದಾನೆ. 

ಹಳಿಯಾಳ ರಸ್ತೆಯ ಬೈಪಾಸ್ ಸೇತುವೆ ಬಳಿ ಬೈಕ್ ಮೇಲೆ ಯುವಕರು ಬಂದಿದ್ದರು, ಈ ವೇಳೆ ರಜಾಕ್‌ನನ್ನ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ‌‌ ತಿಳಿದು ಬಂದಿಲ್ಲ. 
ಉಪನಗರ ಠಾಣಾ‌‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಕೊಲೆಯಾದ ರಜಾಕ್ ಹೆಸ್ಕಾಂ ಬಿಲ್ ಕಲೆಕ್ಟರ್ ಆಗಿದ್ದರು. ಕೆಲಸ‌ ಮುಗಿಸಿ ಬೈಕ್ ಮೇಲೆ ವಾಪಸ್ ಹೋಗುವಾಗ ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಕೊಲೆ ಮಾಡಿದ್ದಾರೆ. ಮೃತ ರಜಾಕ್ ಧಾರವಾಡ ತಾಲೂಕಿನ ಬಾಡ ಗ್ರಾಮದವರಾಗಿದ್ದಾರೆ ಎಂದು ತಿಳಿದು ಬಂದಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ