ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರ ದುರ್ಮರಣ!
ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಹೊನಗನಳ್ಳಿ ಮೂಲದ ನಾಲ್ವರು ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೋಗಿ ಬರುತ್ತಿದ್ದ ವೇಳೆ ಅನಗವಾಡಿ ಗ್ರಾಮದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಘಟನೆ ನಡೆದಿದೆ.
ಕಾರು ಚಾಲಕನನ್ನು ಮಲ್ಲು ಪೂಜಾರಿ ಎಂದು ಗುರುತಿಸಲಾಗಿದೆ. ಕಾರು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಬೀಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ, ಗಾಯಕಿ ವಿಧಿವಶ
ಭಾರತೀಯ ಸಿನಿಮಾ ರಂಗದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ (Ilayaraja) ಪುತ್ರಿ, ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ಭವತಾರಿಣಿ (Bhavatarini) ಜನವರಿ 25ರಂದು ವಿಧಿವಶರಾಗಿದ್ದಾರೆ (Passed away). ಕೆಲ ವರ್ಷಗಳಿಂದ ಅವರು ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.
ಚಿಕಿತ್ಸೆ ಪಡೆಯುವುದಕ್ಕಾಗಿ ಅವರು ಶ್ರೀಲಂಕಾಗೆ ತೆರಳಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಶ್ರೀಲಂಕಾದಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಅವರ ಪಾರ್ಥಿವ ಶರೀರವನ್ನು ಚೆನ್ನೈಗೆ ತರಲಾಗುತ್ತಿದೆ ಎಂದು ಅವರ ಪತಿ ಬಾಲಾಜಿ ತಿಳಿಸಿದ್ದಾರೆ.
ಇಳಯರಾಜ ಅವರಿಗೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯಿದ್ದು ಯುವನ್ ಶಂಕರ್ ರಾಜಾ ಮತ್ತು ಭವತಾರಿಣಿ ಸಂಗೀತ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಯುವನ್ ಶಂಕರ್ ಸಂಗೀತ ನಿರ್ದೇಶಕರಾಗಿದ್ದರೆ ಭವತಾರಿಣಿ ಗಾಯಕಿ. ಮಾಯಿಲ್ ಪೋಲ ಪೊನ್ನು ಒನ್ನು ಚಿತ್ರಕ್ಕಾಗಿ ಇವರಿಗೆ ರಾಷ್ಟ್ರೀಯ ಪುರಸ್ಕಾರ ಕೂಡ ಲಭಿಸಿತ್ತು.