ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳದ ವಗ್ಗ ಬಳಿ ಭೀಕರ ಅಪಘಾತ; ಕಾರು ಚಾಲಕ ಗಂಭೀರ

Twitter
Facebook
LinkedIn
WhatsApp
A terrible accident near Wagga in Bantwala; The car driver is serious

ಬಂಟ್ವಾಳ: ಬಂಟ್ವಾಳದ ವಗ್ಗ ಸಮೀಪ ಇಂದು ಬೆಳಿಗ್ಗೆ 10:30 ಸುಮಾರು ಕೆ ಎಸ್ ಆರ್ ಟಿ ಸಿ(K.S.R.T.C) ಬಸ್ ಹಾಗೂ ಮಾರುತಿ ಬಲೇನೋ ಕಾರುಗಳ ನಡುವೆ ಅಪಘಾತ ಆಗಿದ್ದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಅಪಘಾತ ಆದ ತಕ್ಷಣ ಸ್ಥಳೀಯರ ನೆರವಿನಿಂದ ಕಾರಿನ ಬಾಗಿಲು ಮುರಿದು ಚಾಲಕನನ್ನು ಹೊರ ತೆಗೆಯಲಾಗಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಕೆ ಎಸ್ ಆರ್ ಟಿ ಸಿ(K.S.R.T.C) ಬಸ್ಸು ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಸಾಗುತ್ತಿದ್ದು – ಮಾರುತಿ ಬಲೇನೋ(Maruti Suzuki Baleno) ಕಾರು ಬೆಳ್ತಂಗಡಿ ದಿಕ್ಕಿನಿಂದ ಮಂಗಳೂರು ಕಡೆಗೆ ಸಾಗುವಾಗ ಮುಖಾಮುಖಿ ಡಿಕ್ಕಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಅಪಘಾತದ ತೀವ್ರತೆಗೆ ಮಾರುತಿ ಕಾರು(Maruti Suzuki Baleno) ಸಂಪೂರ್ಣ ನಜ್ಜುಗುಜ್ಜಾಗಿದೆ.

ಬೈಕ್‌ಗೆ ಟಿಪ್ಪರ್‌ ಲಾರಿ ಡಿಕ್ಕಿ; ಬೈಕ್‌ ಸವಾರರು ಸಾವು

ಬೈಕ್‌ಗೆ ಹಿಂದಿನಿಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ನಡೆದಿದೆ. ಬಾತಿ ಗ್ರಾಮದ ರಾಕೇಶ್ (22), ಆಕಾಶ್ (23 ) ಮೃತ ದುರ್ದೈವಿಗಳು.

ಟಿಪ್ಪರ್ ಲಾರಿ ಚಾಲಕನ ಅಜಾಗರೂಕತೆಯಿಂದಲೇ ಈ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸವಾರರಿಬ್ಬರ ದೇಹವು ತುಂಡಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಹರಿಹರ ತಾಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರುಗಳ ಮಧ್ಯೆ ಭೀಕರ ಅಪಘಾತ; ಇಬ್ಬರು ಸಾವು, ಓರ್ವ ಗಂಭೀರ

ಭೀಕರ ರಸ್ತೆ ಅಪಘಾತದಲ್ಲಿ (Road Accident) ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಶಹಬಾದ್ ತಾಲೂಕಿನ ಭಂಕೂರ ಗ್ರಾಮದಲ್ಲಿ ಕಾರುಗಳ ಮಧ್ಯೆ ಡಿಕ್ಕಿಯಾಗಿ ಇಬ್ಬರು ಸ್ಧಳದಲ್ಲೇ ಮೃತಪಟ್ಟಿದ್ದಾರೆ.

ಸ್ವೀಫ್ಟ್ ಕಾರಿನಲ್ಲಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೆ ಮೃತಪಟ್ಟರೆ, ಓರ್ವನ ಸ್ಥಿತಿ ಗಂಭೀರವಾಗಿದೆ. ಜಾಹೀದ್ ಪಠಾಣ್ (30), ಶಾಕೀರ್ (20) ಮೃತ ದುರ್ದೈವಿಗಳು. ಮೃತರು ಉತ್ತರಪ್ರದೇಶ ಮೂಲದ ಬಟ್ಟೆ ವ್ಯಾಪಾರಿಗಳೆಂದು ತಿಳಿದು ಬಂದಿದೆ.

ರಂಜಾನ್ ಹಿನ್ನೆಲೆಯಲ್ಲಿ ಬಟ್ಟೆ ವ್ಯಾಪಾರ ಮುಗಿಸಿಕೊಂಡು ಕಲಬುರಗಿಯಿಂದ ಯಾದಗಿರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ. ಶಹಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಹಬಾದ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ