ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಮೃತ್ಯು
ರಾಜಸ್ಥಾನ: ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಮಂಗಳವಾರ ಕಾರೊಂದು ಡಿವೈಡರ್ ಜಿಗಿದು ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ರಾಧೇಶ್ಯಾಮ್, ಅವರ ಪತ್ನಿ ಶಕುಂತಲಾ, ಮಗ ಮನೀಶ್ ಮತ್ತು ಪುತ್ರಿ ಯಶಿಕಾ ಎಂದು ಗುರುತಿಸಲಾಗಿದೆ.
ರಾಧೇಶ್ಯಾಮ್ ಕುಟುಂಬ ಕಾರಿನಲ್ಲಿ ಅಜ್ಮೀರ್‌ನಿಂದ ಉದಯಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಉದಯಪುರಕ್ಕೆ ತೆರಳುತ್ತಿದ್ದ ವೇಳೆ ಭಿಲ್ವಾರಾ ಜಿಲ್ಲೆ ಪ್ರವೇಶಿಸುತ್ತಿದ್ದಂತೆ ಏಕಾಏಕಿ ಕಾರಿನ ಚಕ್ರ ಸಿಡಿದು ನಿಯಂತ್ರಣ ಕಳೆದುಕೊಂಡು ಡಿವೈಡರ್ ಜಿಗಿದು ವಿದುದ್ದ ದಿಕ್ಕಿನಿಂದ ಬರುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಘಟನೆ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ ಕಾರು ಚಾಲಕ ಮತ್ತು ಓರ್ವ ಬಾಲಕಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೈಕ್ ಗಳ ಮುಖಾಮುಖಿ… ತಂದೆ, ಮಗಳಿಗೆ ಗಾಯ
ದಾಂಡೇಲಿ : ನಗರದ ಕನ್ಯಾ ವಿದ್ಯಾಲಯದ ಹತ್ತಿರ ಬರ್ಚಿ ರಸ್ತೆಯಲ್ಲಿ ಬೈಕ್ ಗಳೆರಡು ಮುಖಾಮುಖಿ ಡಿಕ್ಕಿಯಾಗಿ ತಂದೆ, ಮಗಳಿಗೆ ಗಾಯವಾದ ಘಟನೆ ನಡೆದಿದೆ.
ಗಾಯಗೊಂಡ ಈ ಮೂವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು, ಜನ್ನು ನವಲು ಗಾರೆ ಮತ್ತು ಅವರ ಮಗಳನ್ನು ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಮತ್ತು ಸಾರ್ವಜನಿಕ ಆಸ್ಪತ್ರೆಗೆ ದಾಂಡೇಲಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.