ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಸ್ತೆ ಬದಿ ಮಲಗಿದ್ದ 10 ಮಂದಿ ಕಾರ್ಮಿಕರ ಮೇಲೆ ಹರಿದ ಟ್ರಕ್ ; 5 ಮಂದಿ ಮೃತ್ಯು - ಐವರು ಗಂಭೀರ!

Twitter
Facebook
LinkedIn
WhatsApp
ರಸ್ತೆ ಬದಿ ಮಲಗಿದ್ದ 10 ಮಂದಿ ಕಾರ್ಮಿಕರ ಮೇಲೆ ಹರಿದ ಟ್ರಕ್ ; 5 ಮಂದಿ ಮೃತ್ಯು - ಐವರು ಗಂಭೀರ!

ಬುಲ್ಡಾನಾ: ಸೇಬು ಸಾಗಿಸುತ್ತಿದ್ದ ಟ್ರಕ್ಕೊಂದು ರಸ್ತೆ ಪಕ್ಕದಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಪರಿಣಾಮ 5 ಕಾರ್ಮಿಕರು ಸಾವನ್ನಪ್ಪಿದ್ದು ಐವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಮಹಾರಾಷ್ಟ್ರದ ಬುಲ್ಡಾನಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. 

ಕಾರ್ಮಿಕರು ರಸ್ತೆ ರಿಪೇರಿ ಕೆಲಸಕ್ಕೆ ಬಂದು ಅಲ್ಲೇ ತಾತ್ಕಾಲಿಕ ಶೆಡ್‌ ನಿರ್ಮಿಸಿ ವಾಸಿಸುತ್ತಿದ್ದರು. ವಾಹನದ ಚಕ್ರದ ಮೇಲಿನ ನಿಯಂತ್ರಣ ಕಳೆದುಕೊಂಡ ಟ್ರಕ್‌ ಚಾಲಕ ವಾಹನವನ್ನು ಕಾರ್ಮಿಕರ ಮೇಲೆ ಹರಿಸಿದ್ದು, ಘಟನೆ ನಡೆದ ಸ್ಥಳದಿಂದ ಟ್ರಕ್‌ ಚಾಲಕ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಬಲೆ ಬೀಸಲಾಗಿದೆಯೆಂದು ಪೋಲೀಸರು ತಿಳಿಸಿದ್ದಾರೆ. ಬದುಕುಳಿದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೋಪ್ಡೆ ಆಸ್ಪತ್ರೆಗೆ ಸೇರಿಸಲಾಗಿದೆ.

ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ.  ಜಿಲ್ಲೆಯ ವಡ್ನರ್ ಭೋಲ್ಜಿ ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಸರ್ವಿಸ್ ರಸ್ತೆಯ ಬದಿಯಲ್ಲಿ ತಾತ್ಕಾಲಿಕ ಗುಡಿಸಲುಗಳಲ್ಲಿ ಕಾರ್ಮಿಕರು ಮಲಗಿದ್ದಾಗ ಬೆಳಿಗ್ಗೆ 5.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ ಕಾರ್ಮಿಕರ ಮೇಲೆ ಹರಿದಿದೆ ಎಂದು ಅವರು ಹೇಳಿದರು.

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ, 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಸಾವು

ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಇಂದು(ಅಕ್ಟೋಬರ್ 03) ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ 

ಪರಿಣಾಮ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ವಿಷಯ ತಿಳಿದು ಘಟನೆ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಕಾರು ಗುದ್ದಿದ್ದರಿಂದ ಲಾರಿ ಸಹ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ