ಹೆಣ್ಣನ್ನು ಹುಡುಕಿಲ್ಲ ಎಂಬ ಕಾರಣಕ್ಕೆ ತಾಯಿಯನ್ನು ಕೊಂದ ಮಗ!

ಹೈದರಾಬಾದ್: ಮದುವೆಯಾಗಲು ಸೂಕ್ತ ಹೆಣ್ಣನ್ನು ಹುಡುಕಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತಾಯಿಯನ್ನೇ ಕೊಲೆಗೈದ ಘಟನೆ ತೆಲಂಗಾಣದ (Telangana) ಸಿದ್ದಿಪೇಟೆಯಲ್ಲಿ ನಡೆದಿದೆ.
ಕೊಲೆಗೆ ಸಂಬಂಧಿಸಿದಂತೆ ಮಹಿಳೆಯ ಮಗ ಹಾಗೂ ಇನ್ನೊಬ್ಬ ಸಂಬಂಧಿಯನ್ನು ಪೊಲೀಸರು (Police) ಬಂಧಿಸಿದ್ದಾರೆ. ಕೊಲೆಯ ಬಳಿಕ ಪೊಲೀಸರಿಗೆ ಅನುಮಾನ ಬರದಂತೆ ದರೋಡೆಗೆ ಯತ್ನಿಸಿ ಕೊಲೆಯಾದಂತೆ ಬಿಂಬಿಸಲು ಪ್ರಯತ್ನಿಸಿದ್ದಾರೆ. ಅಲ್ಲದೇ ಗುರುತು ಸಿಗದಂತೆ ಮಹಿಳೆಯ ಕತ್ತು ಸೀಳಿ ಕೈಕಾಲುಗಳನ್ನು ಕತ್ತರಿಸಿದ್ದಾರೆ. ಆದರೆ ಆರೋಪಿಯ ಸಹೋದರಿ ಈ ಬಗ್ಗೆ ಮಾಹಿತಿ ನೀಡಿದ್ದು ಬಂಧನಕ್ಕೆ ಸಹಕಾರಿಯಾಗಿದೆ.
ಮಹಿಳೆ ನೀಡಿದ ದೂರಿನಲ್ಲಿ ಆರೋಪಿಗಳು ಇಟ್ಟಿಗೆಯಿಂದ ಹಲ್ಲೆ ನಡೆಸಿ ತಾಯಿಯನ್ನು ಕೊಲೆಗೈದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ಬಗ್ಗೆ ತನಿಖೆಯ ಸಂದರ್ಭದಲ್ಲಿ ಆರೋಪಿಗಳು ಕೃತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೇ ಆರೋಪಿಗಳು ಈ ಹಿಂದೆ ಯಾವುದಾದರೂ ಕೃತ್ಯಗಳಲ್ಲಿ ಭಾಗಿಯಾಗಿರುವುದರ ಬಗ್ಗೆ ಸಹ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Raichur: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ
ರಾಯಚೂರು (ಆ.24): ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗದ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಬಿ.ಆರ್.ಗುಂಡಾ ಗ್ರಾಮ ವಿದ್ಯಾರ್ಥಿನಿಯಾಗಿದ್ದ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡ ಬಾಲಿಕ. 15 ವರ್ಷದ ಪವಿತ್ರಾ, ದೇವದುರ್ಗ ತಾಲೂಕಿನ ಬಿ.ಆರ್. ಗುಂಡಾ ಗ್ರಾಮದ ವಿದ್ಯಾರ್ಥಿನಿ. 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಓದಲು ಇಷ್ಟವಿಲ್ಲದೆ ಶಾಲೆ ತಪ್ಪಿಸಿ ಈಕೆ ಮನೆಗೆ ಬರುತ್ತಿದ್ದಳು ಎಂದು ಹೇಳಲಾಗಿದೆ. ಮನೆಯಲ್ಲಿ ಬುದ್ದಿ ಹೇಳಿ ಗುರುವಾರ ವಸತಿ ಶಾಲೆಗೆ ಬಿಟ್ಟು ಪಾಲಕರು ಊರಿಗೆ ಹೋಗಿದ್ದರು.
ಗುರುವಾರ ವಸತಿ ಶಾಲೆಗೆ ಬಂದರೂ ತರಗತಿಗೆ ಪವಿತ್ರಾ ಗೈರು ಹಾಜರಿಯಾಗಿದ್ದರು. ಎಲ್ಲಾ ವಿದ್ಯಾರ್ಥಿಗಳು ತರಗತಿಗೆ ಹೋದಾಗ ಕೋಣೆಯಲ್ಲಿ ಫ್ಯಾನ್‌ಗೆ ವೇಲ್ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಆದರೆ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.